ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಾರಿ ಬಜೆಟ್ (Karnataka Budget 2024) ಮಂಡಿಸಿದ್ದಾರೆ. ಗ್ಯಾರಂಟಿ ಸರ್ಕಾರದ ಎರಡನೇ ಬಜೆಟ್ ಇದಾಗಿದ್ದು, ಸಿದ್ದರಾಮಯ್ಯ (Siddaramaiah) ಅವರು ಕೃಷಿಕರು, ಮಹಿಳೆಯರು, ಹಿಂದುಳಿದವರು ಸೇರಿ ಸರ್ವರ ಏಳಿಗೆಗೆ ಆದ್ಯತೆ ನೀಡಿದ್ದಾರೆ. ಕರ್ನಾಟಕ ಬಜೆಟ್‌ನ ಕ್ಷಣಕ್ಷಣದ ಮಾಹಿತಿ (Karnataka Budget 2024 Live Updates) ಇಲ್ಲಿ ಲಭ್ಯ ಇದೆ.
ವಿಧಾನಸೌಧ ತಲುಪಿದ ಬಜೆಟ್ ಪ್ರತಿಗಳು
ಯಾವ ಇಲಾಖೆಗೆ ಎಷ್ಟು ಟಾರ್ಗೆಟ್?
ಒಟ್ಟಾರೆ 2.25 ಲಕ್ಷ ಕೋಟಿ ಈ ನಾಲ್ಕು ಇಲಾಖೆಗಳಿಂದ ಸಂಗ್ರಹಿಸಲು ಸಿಎಂ ಸಿದ್ದರಾಮಯ್ಯ ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಹಿಂದ ವರ್ಗಕ್ಕೆ ಬಂಪರ್ ಕೊಡುಗೆ?
ಈ ಬಾರಿ ಬಜೆಟ್‌ನಲ್ಲಿಯೂ ಅಹಿಂದ ವರ್ಗಕ್ಕೆ ಬಂಪರ್ ಕೊಡುಗೆಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಯೋಜಿಸಿದ್ದು, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಭಾರಿ ಕೊಡುಗೆಯನ್ನು ನೀಡಲಿದ್ದಾರೆ ಎನ್ನಲಾಗಿದೆ. ಇರುವ ಎಲ್ಲ ಯೋಜನೆಗಳ ಮುಂದುವರಿಕೆ ಮಾಡಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈ ವರ್ಗ ಹಿಡಿದಿಟ್ಟುಕೊಳ್ಳಲು ಪ್ಲ್ಯಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾರಂಟಿಗೆ ಗ್ಯಾರಂಟಿ ಕೊಡುವರೇ ಸಿದ್ದರಾಮಯ್ಯ?
ಗ್ಯಾರಂಟಿ ಯೋಜನೆಗಳನ್ನು ಮುಂದುವರಿಕೆ ಮಾಡಲು ಶೇಕಡ 40ರಷ್ಟು ಹಣವನ್ನು ಮೀಸಲು ಇಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಈ ಮೂಲಕ ಗ್ಯಾರಂಟಿಗಳನ್ನು ನಿಲ್ಲಿಸಲ್ಲ ಎಂದು ಸಂದೇಶವನ್ನು ರವಾನೆ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಹೀಗಾಗಿ ಇದರ ಜತೆಗೆ ಲೋಕಸಭಾ ವೋಟ್ ಬ್ಯಾಂಕ್ ಅನ್ನು ಸಹ ಗ್ಯಾರಂಟಿ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.