Karnataka Budget Session 2024: ಪ್ರೀಮಿಯಂ ಎಫ್ಎಆರ್ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ - Vistara News

ಕರ್ನಾಟಕ

Karnataka Budget Session 2024: ಪ್ರೀಮಿಯಂ ಎಫ್ಎಆರ್ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

Karnataka Budget Session 2024: ಮಾರ್ಗಸೂಚಿ ದರದ ಶೇ. 40ರಷ್ಟು ಶುಲ್ಕವನ್ನು ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸುವ ಮೂಲಕ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಬಹುದು ಹಾಗೂ ಎಫ್ಎಆರ್‌ಗಳನ್ನು ಬೇರೆಯವರಿಗೆ ಮಾರಾಟ ಮಾಡುವ ಅವಕಾಶವನ್ನು ಈ ಮಸೂದೆಯಲ್ಲಿ ಕಲ್ಪಿಸಲಾಗಿದೆ.

VISTARANEWS.COM


on

DK Shivakumar and Karnataka Budget Session 2024 Legislative Council passes premium FAR Amendment Bill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ‘ಪ್ರೀಮಿಯಂ ಎಫ್ಎಆರ್’ (premium FAR Amendment Bill) ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸುವ ಮಸೂದೆಗೆ ವಿಧಾನ ಪರಿಷತ್‌ ಕಲಾಪದಲ್ಲಿ (Karnataka Budget Session 2024) ಸುದೀರ್ಘ ಚರ್ಚೆ ಹಾಗೂ ಬಿಜೆಪಿ ಸದಸ್ಯರ ಸಭಾತ್ಯಾಗದ ನಡುವೆ ಗುರುವಾರ ಅಂಗೀಕಾರ ದೊರೆಯಿತು.

ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿಧಾನಸಭೆಯಲ್ಲಿ ಅಂಗೀಕಾರ ಸ್ವರೂಪದಲ್ಲಿರುವ ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ-2024’ ಅನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಿದರು.

ಮಾರ್ಗಸೂಚಿ ದರದ ಶೇ. 40ರಷ್ಟು ಶುಲ್ಕವನ್ನು ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸುವ ಮೂಲಕ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಬಹುದು ಹಾಗೂ ಎಫ್ಎಆರ್‌ಗಳನ್ನು ಬೇರೆಯವರಿಗೆ ಮಾರಾಟ ಮಾಡುವ ಅವಕಾಶವನ್ನು ಈ ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಪ್ರೀಮಿಯಂ ಎಫ್ಎಆರ್ ಮಿತಿಯನ್ನು ಶೇ 0.4 ಕ್ಕೆ ನಿಗದಿಪಡಿಸಲಾಗಿದೆ. ಹಾಗೂ ಟಿಡಿಆರ್ (Transferable Development Rights) ಬಳಸಿ ನಿರ್ಮಿಸಿರುವ ಕಟ್ಟಡದ ಎಫ್ಎಆರ್ ಮಿತಿಯು ಶೇ 0.6ರಷ್ಟನ್ನು ಮೀರುವಂತಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗುತ್ತದೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗವಾಗುತ್ತದೆ. ಎಫ್‌ಎಆರ್‌ಗಳ ಮಾರಾಟದಿಂದ ಸಂಗ್ರಹವಾಗುವ ಶುಲ್ಕವನ್ನು ಭೂಸ್ವಾಧೀನ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ನಿವೇಶನದ ಅಳತೆ ಮತ್ತು ಮುಂದಿರುವ ರಸ್ತೆಯ ಅಳತೆ ಮೇಲೆ ಇಂತಿಷ್ಟು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಬಹುದು ಎಂದು ಅಳತೆ ಮಾಡಿ ಅನುಮತಿ ನೀಡಲಾಗುತ್ತಿತ್ತು. ಈ ಮಸೂದೆಯಿಂದಾಗಿ ಕಟ್ಟಡ ನಿರ್ಮಿಸುವವರು ಪ್ರೀಮಿಯಂ ಎಫ್ಎಆರ್‌‌ಗಳನ್ನು ಖರೀದಿಸಿ, ಕಟ್ಟಡದ ನಿವೇಶನದ ಅಳತೆಗಿಂತ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಿಕೊಳ್ಳಬಹುದು.

ಏನಿದು ಪ್ರೀಮಿಯಂ ಎಫ್‌ಎಆರ್‌?

ನಿವೇಶನದ ಅಳತೆ ಆಧರಿಸಿ ನಿರ್ಮಿಸಬಹುದಾದ ಕಟ್ಟಡದ ವಿಸ್ತೀರ್ಣ ಮತ್ತು ಅಂತಸ್ತುಗಳ ಪ್ರಮಾಣವನ್ನು ಎಫ್‌ಎಆರ್‌ (ಪ್ರೀಮಿಯಂ ನೆಲ ವಿಸ್ತೀರ್ಣ ಅನುಪಾತ) ಎಂದು ಹೇಳಲಾಗುತ್ತದೆ.

ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಆಡಳಿತ ಪಕ್ಷದ ಸದಸ್ಯ ನಾಗರಾಜ್ ಯಾದವ್, “ಹಳೆಯ ಕಾನೂನಿಗೆ ಹೊಸ ರೂಪ ನೀಡಿರುವುದು ಸ್ವಾಗತಾರ್ಹ. ಸ್ಥಳೀಯ ಸಂಸ್ಥೆಗಳಿಗೆ ಅನುಮತಿ ನೀಡುವ ಅಧಿಕಾರ ನೀಡಿರುವ ಕಾರಣ ಕೆಲಸದ ವಿಳಂಬ ತಪ್ಪುತ್ತದೆ” ಎಂದು ವಿಧೇಯಕಕ್ಕೆ ಬೆಂಬಲ ಸೂಚಿಸಿದರು.

“ಎಫ್ಎಆರ್ ಜಾರಿಯಿಂದ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ತಿದ್ದುಪಡಿಯನ್ನು ಸ್ವಾಗತಿಸಿ, “ಸಣ್ಣ ರಸ್ತೆಗಳು ಇರುವ ಕಡೆ ಜನದಟ್ಟಣೆ ಉಂಟಾಗುತ್ತದೆ ಮತ್ತು ಅಗ್ನಿ ಅವಘಡಗಳು ಉಂಟಾದಾಗ ತೊಂದರೆಯಾಗುತ್ತದೆ. ಈ ಕುರಿತು ಸರ್ಕಾರ ಆಲೋಚಿಸಬೇಕು” ಎಂದು ಸಲಹೆ ನೀಡಿದರು.

“ಬೆಂಗಳೂರಿನ ಮೂಲಸೌಕರ್ಯಗಳ ಮೇಲೆ ಒತ್ತಡ ಹೆಚ್ಚಾಗಲಿದೆ. ಆದ ಕಾರಣ ಸಮಿತಿ ರಚಿಸಿ ಮತ್ತೊಂದು ಸುತ್ತಿನ ಪರಾಮರ್ಶೆಯ ನಂತರ ಮತ್ತೊಮ್ಮೆ ಪ್ರೀಮಿಯಂ ಎಫ್‌ಎಆರ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಿ” ಎಂದು ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಎಸ್. ಸರ್ಕಾರಕ್ಕೆ ಆಗ್ರಹಿಸಿದರು. ಪರಾಮರ್ಶನ ಸಮಿತಿ ರಚಿಸುವುದಕ್ಕೆ ಆಡಳಿತ ಪಕ್ಷದ ಸದಸ್ಯ ಎಂ.ಆರ್. ಸೀತಾರಾಂ ವಿರೋಧಿಸಿದರು.

ನಿಮ್ಮ ಎಲ್ಲ ಸಂಶಯಗಳಿಗೆ ಉತ್ತರ ಕೊಡುತ್ತೇನೆ: ಡಿಕೆಶಿ

ವಿಧೇಯಕದ ಬಗ್ಗೆ ವಿಪಕ್ಷಗಳ ಸದಸ್ಯರು ತಕರಾರು ವ್ಯಕ್ತಪಡಿಸಿದಾಗ “ನಿಮ್ಮ ಎಲ್ಲ ಸಂಶಯಗಳಿಗೆ ನಾನು ಉತ್ತರ ನೀಡುತ್ತೇನೆ. ನಿಮ್ಮ ಎಲ್ಲ ಸಲಹೆಗಳನ್ನು ಸ್ವೀಕರಿಸಲು ತಯಾರಿದ್ದೇನೆ. ನೀವು ಮಾಡಿದ ಕಾನೂನನ್ನೇ ಸರಳೀಕರಣ ಮಾಡಿ ಕರ್ನಾಟಕದ ಎಲ್ಲ ಭಾಗದ ಜನರು ಇದರ ಉಪಯೋಗ ಪಡೆಯಲಿ ಮತ್ತು ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗಲಿ ಎನ್ನುವುದಷ್ಟೇ ನಮ್ಮ ಉದ್ದೇಶ. ಬಸವರಾಜ ಬೊಮ್ಮಾಯಿ ಅವರ ಸರ್ಕಾರವೂ ಇದನ್ನು ತಿದ್ದುಪಡಿ ಮಾಡಲು ಹೊರಟಿತ್ತು” ಎಂದು ಡಿಸಿಎಂ ಶಿವಕುಮಾರ್ ಉತ್ತರಿಸಿದರು.

“ಈಗಾಗಲೇ ಈ ಕಾನೂನು ಇದೆ. ನಾವು ಹೊಸದಾಗಿ ತರಲು ಮುಂದಾಗಿಲ್ಲ. ಸ್ಥಳೀಯ ಸಂಸ್ಥೆಗಳು ಸಹ ಇದರ ಉಪಯೋಗ ಪಡೆದುಕೊಳ್ಳಲಿ ಎಂದು ತಿದ್ದುಪಡಿ ಮಾಡಿದ್ದೇವೆ. ಮಂಗಳೂರಿನಲ್ಲಿ ಪ್ರೀಮಿಯಂ ಎಫ್‌ಎಆರ್ ಜಾರಿಯಾಗಿತ್ತು. ಇದರಿಂದಾಗಿ ಕಳೆದ 5-6 ವರ್ಷಗಳಲ್ಲಿ 2-3 ಸಾವಿರ ಕೋಟಿಯಷ್ಟು ಆದಾಯ ಬಂದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕಡೆ ಈ ಅವಕಾಶ ಕಲ್ಪಿಸಲು ವಿಧೇಯಕಕ್ಕೆ ತಿದ್ದುಪಡಿ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Ragi Malt: ರಾಗಿ ಮಾಲ್ಟ್‌ ಕುಡಿದ ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿನಿಗೂ ಕುಡಿಸಿದರು!

ಪ್ರೀಮಿಯಂ ಎಫ್ಎಆರ್ ಅಂಗೀಕಾರ

ಈ ಬಿಲ್ ಅನ್ನು ತಡೆ ಹಿಡಿದು, ಹೆಚ್ಚಿನ ಚರ್ಚೆ ನಡೆಸುವುದು ಉತ್ತಮ. ಎಲ್ಲರೊಟ್ಟಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಪುನಃ ಮಂಡನೆ ಮಾಡಿ. ಇದರಿಂದ ಅಧಿಕಾರಿಗಳ ಕೈಗೆ ಎಲ್ಲಾ ಅಧಿಕಾರಗಳನ್ನುನೀಡಿದಂತಾಗುತ್ತದೆ” ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ವಿಧೇಯಕವನ್ನು ವಿರೋಧಿಸಿ ಸಭಾತ್ಯಾಗ ಮಾಡಿದರು. ಈ ನಡುವೆಯೇ ‘ಪ್ರೀಮಿಯಂ ಎಫ್ಎಆರ್’ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಪಟ್ಟ ಮಸೂದೆಗೆ ಅಂಗೀಕಾರವನ್ನು ಪಡೆಯಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading
Advertisement
Latest6 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ8 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest10 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest10 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ1 day ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest1 day ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest1 day ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ2 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ2 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ2 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌