Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು! - Vistara News

ಕರ್ನಾಟಕ

Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು!

state cabinet expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಬೆಳಗಾವಿಯಿಂದ ಮಹಿಳಾ ಕೋಟಾದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಚಿವರಾಗಿದ್ದಾರೆ. ಇವರು ಎರಡನೇ ಬಾರಿಗೆ ಆಯ್ಕೆಯಾದರೂ ಮಂತ್ರಿಗಿರಿಯ ಅದೃಷ್ಟ ಒಲಿದಿದೆ. ಇದೇ ರೀತಿ ಈ ಹಿಂದೆ ಇನ್ನೂ ಇಬ್ಬರು ಶಾಸಕಿಯರಿಗೆ ಮೊದಲ ಇಲ್ಲವೇ ಎರಡನೇ ಬಾರಿಗೆ ಮಂತ್ರಿ ಪಟ್ಟ ಸಿಕ್ಕಿದೆ. ಅವರ ಬಗ್ಗೆ ವಿವರವನ್ನು ನೋಡೋಣ.

VISTARANEWS.COM


on

Laxmi Hebbalkar Shashikala jolle and leelavati r prasad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
VISTARA-VISESHA

ಮಂಜುನಾಥ ಅಶೋಕ್‌ ಹುಡೇದ, ಬೆಳಗಾವಿ
ರಾಜ್ಯ ರಾಜಕಾರಣದ ಮಟ್ಟಿಗೆ ಕುಂದಾನಗರಿ ಬೆಳಗಾವಿ ಸಹ ಒಂದು ಶಕ್ತಿ ಕೇಂದ್ರ. ಈ ಕಾರಣಕ್ಕೆ ಇದನ್ನು ರಾಜ್ಯದ ಎರಡನೇ ರಾಜಧಾನಿ ಎಂದೂ ಕರೆಯುತ್ತಾರೆ. ಅಲ್ಲದೆ, ಉತ್ತರ ಕರ್ನಾಟಕಕ್ಕೆ ಆಡಳಿತ ಪ್ರಾತಿನಿಧ್ಯವನ್ನು ಕೊಡುವ ನಿಟ್ಟಿನಲ್ಲಿ ಇಲ್ಲಿ ಸುವರ್ಣ ವಿಧಾನಸೌಧವನ್ನೂ ಸ್ಥಾಪನೆ ಮಾಡಲಾಗಿದೆ. ಜತೆಗೆ ಇಲ್ಲಿನ ರಾಜಕಾರಣಿಗಳೂ ಸಹ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಈ ವೇಳೆ ಇಲ್ಲಿ ಮಹಿಳಾ ರಾಜಕಾರಣಿಗಳ ಪಾರುಪತ್ಯವೂ ಇದ್ದು, ಮೊದಲ ಹಾಗೂ ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿ ಸಚಿವ ಸ್ಥಾನವನ್ನು ಪಡೆದವರೂ ಇದ್ದಾರೆ. ಈ ಬಾರಿ ಎರಡನೇ ಸಲಕ್ಕೆ ಆಯ್ಕೆಯಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿದ್ದು, ರಾಜಕೀಯವಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾ ಬಂದಿದೆ. ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಈ ಜಿಲ್ಲೆಯಲ್ಲಿ ಸದ್ಯಕ್ಕೆ ಇಬ್ಬರು ಮಹಿಳಾ ಶಾಸಕಿಯರಿದ್ದಾರೆ. ನಿಪ್ಪಾಣಿ ಕ್ಷೇತ್ರದ ಶಶಿಕಲಾ ಜೊಲ್ಲೆ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಲಕ್ಷ್ಮೀ ಹೆಬ್ಬಾಳ್ಕರ್ ಹಾಲಿ ಶಾಸಕರಾಗಿದ್ದಾರೆ. ಕಳೆದ ಬಾರಿ ಶಶಿಕಲಾ ಜೊಲ್ಲೆ ಸಚಿವರಾಗಿದ್ದರೆ, ಈ ಬಾರಿ ಲಕ್ಷ್ಮಿ ಹೆಬ್ಬಾಳ್ಕರ್‌ ಮಂತ್ರಿ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಿಂದ ಸಚಿವೆ ಆಗುತ್ತಿರುವ ಮೂರನೇ ಶಾಸಕಿ!

ಬೆಳಗಾವಿ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಕೆಲವು ಮನೆತನಗಳು ಇಂದಿಗೂ ಖ್ಯಾತಿಯನ್ನು ಪಡೆದುಕೊಂಡಿವೆ. ಸರ್ಕಾರವನ್ನೇ ಬೀಳಿಸುವಷ್ಟರ ಮಟ್ಟಿಗೆ ಪ್ರಾಬಲ್ಯ ಹೊಂದಿರುವ ಮನೆತನಗಳು ಇಲ್ಲಿವೆ. ಈ ಹಿಂದೆ ಹಿಂದೆ ವಿ.ಎಲ್. ಪಾಟೀಲ್ ಕುಟುಂಬ, ಕತ್ತಿ ಕುಟುಂಬ, ಸದ್ಯ ಜಾರಕಿಹೊಳಿ ಕುಟುಂಬವು ಈಗಲೂ ಜಿಲ್ಲಾ ರಾಜಕೀಯದ ಮೇಲಿನ ತಮ್ಮ ಹಿಡಿತವನ್ನು ಕಳೆದುಕೊಂಡಿಲ್ಲ.‌ ಈ ಫ್ಯಾಮಿಲಿ ಫೈಟ್, ಪ್ರತಿಷ್ಠೆಯ ಕಣದ ನಡುವೆಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಗೆದ್ದು ಬೀಗಿದ್ದಾರೆ. ಲಿಂಗಾಯತ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿದ್ದರಾಮಯ್ಯ ಅವರ ಸಂಪುಟ ಸೇರಿದ್ದಾರೆ.

leelavati r prasad taking oath
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಲೀಲಾವತಿ ಆರ್‌ ಪ್ರಸಾದ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಕ್ಷಣ

ಬೆಳಗಾವಿಯಿಂದ ನೀರಾವರಿ ಸಚಿವರಾಗಿದ್ದ ಲೀಲಾವತಿ ಆರ್ ಪ್ರಸಾದ್

ಲೀಲಾವತಿ ಆರ್ ಪ್ರಸಾದ್ ಅವರು ಅಥಣಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 1985 ಮತ್ತು 1994ರಲ್ಲಿ ಅಥಣಿಯಿಂದ ಜನತಾದಳದಿಂದ ಸ್ಪರ್ಧೆ ಮಾಡಿ ಗೆದ್ದು ಬೀಗಿದ್ದರು. ಅಲ್ಲದೆ, ಜೆ.ಎಚ್. ಪಟೇಲ್, ಎಸ್.ಆರ್. ಬೊಮ್ಮಾಯಿ ಸರ್ಕಾರದಲ್ಲಿ ಸಚಿವೆಯಾಗಿ ಕೆಲಸ‌ ಮಾಡಿದ್ದ ಲೀಲಾವತಿ ಆರ್. ಪ್ರಸಾದ್ ಅವರು ದೇವೆಗೌಡರ ಸರ್ಕಾರದಲ್ಲಿ ಮೊದಲ ಮಹಿಳಾ ನೀರಾವರಿ ಮಂತ್ರಿಯಾಗಿಯೂ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದು ಈಗ ಇತಿಹಾಸ. ತಮ್ಮ 23ನೇ ವಯಸ್ಸಿಗೆ (ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಷನ್) ಇಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲರ್ ಆಗಿಯೂ ಸಹ ಲೀಲಾವತಿ ಆರ್. ಪ್ರಸಾದ್ ಅವರು ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ

ಎರಡನೇ ಬಾರಿ ಗೆದ್ದಾಗಲೇ ಶಶಿಕಲಾ ಜೊಲ್ಲೆ ಮಂತ್ರಿ

ನಿಪ್ಪಾಣಿ ಕ್ಷೇತ್ರದಿಂದ 2013ರಲ್ಲಿ ಚುನಾವಣೆ ಎದುರಿಸಿ ಗೆದ್ದು ಬೀಗಿದ್ದ ಶಶಿಕಲಾ ಜೊಲ್ಲೆ 2018ರಲ್ಲಿಯೂ ಶಾಸಕರಾಗಿ ಮರು ಆಯ್ಕೆ ಆಗುವಲ್ಲಿ ಯಶಸ್ವಿಯಾಗಿದ್ದರು. 2018 ರಲ್ಲಿ ಸಮ್ಮಿಶ್ರ ಸರ್ಕಾರ ಅಸ್ವಿತ್ವಕ್ಕೆ ಬಂತು. ಅದಾದ ನಂತರ 17 ಜನ ಶಾಸಕರು ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡೆದ್ದು ಸರ್ಕಾರ ಕಡೆವಿದ್ದರು. ಬಳಿಕ ಅಸ್ವಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದ ಶಶಿಕಲಾ ಜೊಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಆಯ್ಕೆ ಆಗಿದ್ದರು. ನಂತರ ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದ ಮೇಲೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದಾಗಲೂ ಮುಜರಾಯಿ ಹಾಗೂ ವಕ್ಫ್‌ ಸಚಿವೆಯಾಗಿಯೂ ಜೊಲ್ಲೆ ಕೆಲಸ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Utthana Essay Competition 2023:
ಕಾಲೇಜು ವಿದ್ಯಾರ್ಥಿಗಳಿಗೆ “ಕ್ರೀಡೆಯೆಂದರೆ ಕ್ರಿಕೆಟ್ ಮಾತ್ರವೇ? ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ?” ಎಂಬ ವಿಷಯದ ಕುರಿತು ಉತ್ಥಾನ ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿತ್ತು. ಬೆಂಗಳೂರಿನ ಎಸ್-ವ್ಯಾಸ್ ವಿಶ್ವವಿದ್ಯಾಲಯದ ಕಾವ್ಯಜೋಗಿ ಪ್ರಥಮ ಸ್ಥಾನ ಪಡೆದಿದ್ದಾರೆ.

VISTARANEWS.COM


on

Utthana Essay Competition 2023
Koo

ಬೆಂಗಳೂರು: ಉತ್ಥಾನ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ವಾರ್ಷಿಕ ಉತ್ಥಾನ ಪ್ರಬಂಧ ಸ್ಪರ್ಧೆಯ (Utthana Essay Competition 2023) ಫಲಿತಾಂಶ ಪ್ರಕಟವಾಗಿದೆ. “ಕ್ರೀಡೆಯೆಂದರೆ ಕ್ರಿಕೆಟ್ ಮಾತ್ರವೇ? ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ?” ಎಂಬ ವಿಷಯದ ಕುರಿತು ರಾಜ್ಯದೆಲ್ಲೆಡೆಯ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಬರೆದಿದ್ದರು. ಈ ಸ್ಪರ್ಧೆಯಲ್ಲಿ ಬೆಂಗಳೂರಿನ ಎಸ್-ವ್ಯಾಸ್ ವಿಶ್ವವಿದ್ಯಾಲಯದ ಕಾವ್ಯಜೋಗಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರಬಂಧ ಸ್ಪರ್ಧೆಯ ವಿಜೇತರನ್ನು ತೀರ್ಪುಗಾರರಾದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಹಾಗೂ ನಿವೃತ್ತ ಗ್ರಂಥಪಾಲಕ ಡಾ. ಎ. ನರೇಂದ್ರ ಅವರು ಆಯ್ಕೆ ಮಾಡಿದ್ದಾರೆ.

ವಿಜೇತರ ಪಟ್ಟಿ ಇಂತಿದೆ

ಮೊದಲ ಬಹುಮಾನ: (10,000 ರೂ)
ಕಾವ್ಯಜೋಗಿ, ಎಸ್-ವ್ಯಾಸ್ ವಿಶ್ವವಿದ್ಯಾಲಯ, ಬೆಂಗಳೂರು.

ಎರಡನೆಯ ಬಹುಮಾನ: (7,000 ರೂ.)
ಸ್ವಾತಿ ಇ.ಎಂ., ಬಿ.ಎ.ಎಂ.ಎಸ್. ಕಾಲೇಜು, ಬೆಂಗಳೂರು.

ಮೂರನೆಯ ಬಹುಮಾನ: (5,000 ರೂ.)
ಯಂಕನಗೌಡ, ಕಮಲಾ ಬಾಳಿಗಾ ಕಾಲೇಜು, ಕುಮಟಾ

ಹತ್ತು ಮೆಚ್ಚುಗೆಯ ಬಹುಮಾನಗಳು: ತಲಾ 2,000 ರೂ.

ಪ್ರತೀಕ್ಷಾ ಅಶೋಕ ಜಂತಿ, ಕೆ.ಆರ್.ಸಿ.ಎಸ್. ಪದವಿ ಮಹಾವಿದ್ಯಾಲಯ ಬೈಲಹೊಂಗಲ
ಅಮೃತಾ ರಾಜೇಂದ್ರ ಹೆಗಡೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿರಸಿ
ನಂದಕುಮಾರ್ ಯು.ಎಂ., ಶೇಷಾದ್ರಿಪುರಂ ಪ್ರಥಮದರ್ಜೆ ಕಾಲೇಜು, ಬೆಂಗಳೂರು
ಮೇಘಾ ಡಿ., ಅಂಬಿಕಾ ಮಹಾವಿದ್ಯಾಲಯ, ಬಪ್ಪಳಿಕೆ, ಪುತ್ತೂರು
ಪನ್ನಗ ಪಿ. ರಾಯ್ಕರ್, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಹೊಸದುರ್ಗ
ದರ್ಶನ್ ಎಸ್.ಎನ್., ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ, ಮೈಸೂರು
ಸಹನಾ ಎಂ., ಸೆಂಟ್ ಆನ್ಸ್ ಮಹಿಳಾ ಪದವಿ ಕಾಲೇಜು, ಬೆಂಗಳೂರು
ದೀಪಾ ಕೆ.ಬಿ., ಕಮಲಾ ಬಾಳಿಗ ಶಿಕ್ಷಣ ಮಹಾವಿದ್ಯಾಲಯ, ಕುಮಟಾ
ಶಿವಾನಿ ಬಿ. ಎಸ್., ಅಮೃತ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಪಡೀಲ್, ಮಂಗಳೂರು
ಪೃಥ್ವಿನಾಯಕ್, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ

 Utthana Essay Competition 2023

ಇದನ್ನೂ ಓದಿ | Utthana Katha Spardhe: ಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2023; ಶಿರಸಿಯ ಕರುಣಾಕರ ಹಬ್ಬುಮನೆ ಪ್ರಥಮ

Continue Reading

Lok Sabha Election 2024

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Lok Sabha Election 2024: ಯತೀಂದ್ರ ಸಿದ್ದರಾಮಯ್ಯ ಅವರದ್ದು ಬಾಲಿಶ, ಬುದ್ಧಿಭ್ರಮಣೆಯ ಹಾಗೂ ಅಪ್ರಬುದ್ಧ ಹೇಳಿಕೆಯಾಗಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದರು. ಯತೀಂದ್ರ ಅವರಿಗೂ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ. ಗೂಂಡಾ ಗುರು ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನದ್ದು ಗೂಂಡಾ ಸಂಸ್ಕೃತಿಯಾಗಿದೆ ಎಂದು ಆರ್.‌ ಅಶೋಕ್‌ ಗುಡುಗಿದ್ದಾರೆ.

VISTARANEWS.COM


on

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಭಾಷಣದಲ್ಲಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ (BJP Karnataka) ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ (Rahul Gandhi) ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು.

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್‌ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ. ಅವರು ಎಚ್ಚರದಿಂದ ಮಾತನಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಗೂಂಡಾ ಗುರು

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಮಾತ್ರ ಕಣ್ಣಿಗೆ ಕಾಣುವುದಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಜಾರಿಯಲ್ಲಿದೆ. ಸದನದಲ್ಲಿ ಪೊಲೀಸರನ್ನು ಬೆದರಿಸುವುದು, ಸ್ಪೀಕರ್‌ಗೆ ಧಮ್ಕಿ ಹಾಕುವುದು ಮಹಿಳೆಯರ ಬಟ್ಟೆ ಎಳೆದು ದೌರ್ಜನ್ಯ ಮಾಡುವುದು, ಕಾರ್ಯಕರ್ತರ ಕಪಾಳಕ್ಕೆ ಹೊಡೆಯುವುದು-ಹೀಗೆ ಸಿಎಂ ಸಿದ್ದರಾಮಯ್ಯ ಮಾಡಿದ ರೌಡಿಸಂಗೆ ಲೆಕ್ಕವೇ ಇಲ್ಲ. ಪ್ರಧಾನಿಗೆ, ರಾಷ್ಟ್ರಪತಿಗೆ ಅವನು, ಇವಳು ಎಂದು ಕರೆಯುವವರು, ಪ್ರಧಾನಿಗೆ ಹೊಡೆಯುತ್ತೇನೆ ಎನ್ನುವವರು ನಿಜವಾದ ಗೂಂಡಾಗಳು. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದರೆ ಇವರು ನಡೆಸುವುದು ರಾವಣ ರಾಜ್ಯ. ಯತಿ ಎಂದರೆ ಸನ್ಯಾಸಿ. ಆದರೆ ಇವರ ಬಾಯಲ್ಲಿ ಬರುವ ಮಾತು ರಾಕ್ಷಸನಂತಿದೆ. ಇವರ ಹೆಸರಿಗೂ ಮಾತಿಗೂ ಸಂಬಂಧವೇ ಇಲ್ಲ ಎಂದರು.

ರಾಜ್ಯದಲ್ಲಿ ಗೂಂಡಾ ಸರ್ಕಾರವಿದ್ದು, ಸಿಎಂ ಸಿದ್ದರಾಮಯ್ಯ ಗೂಂಡಾಗುರುವಾಗಿ ವರ್ತಿಸುತ್ತಿದ್ದಾರೆ. ಕರಸೇವಕರನ್ನು ಬಂಧಿಸಿ, ಹನುಮ ಧ್ವಜ ಇಳಿಸಿ, ಮುಸ್ಲಿಂ ದಂಗೆಕೋರರಿಗೆ ಆಶ್ರಯ ನೀಡಿದ್ದು ಇದೇ ಗೂಂಡಾ ಕಾಂಗ್ರೆಸ್‌. ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಹೊಡೆದವರು ಹಾಗೂ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದವರು ಗೂಂಡಾ ಕಾಂಗ್ರೆಸ್ಸಿಗರೇ ಆಗಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಯಾರು ಗೂಂಡಾ ಎಂದು ಪಾಠ ಕಲಿಸಲಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

ಸಮನ್ವಯ ಸಭೆ

ಬಿಜೆಪಿ-ಜೆಡಿಎಸ್‌ ಹಾಲು ಜೇನಿನಂತೆ ಕೆಲಸ ಮಾಡುತ್ತಿದೆ. ಇನ್ನಷ್ಟು ಚೆನ್ನಾಗಿ ಕಾರ್ಯನಿರ್ವಹಿಸಲು ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗುವುದು. ರೈತರಿಗೆ ಪರಿಹಾರ ಕೊಡದ, ಕುಡಿಯುವ ನೀರು ಕೊಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಇಂತಹ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಬೇಕು ಎಂದು ಮನವಿ ಮಾಡಿದರು.

Continue Reading

ಕೊಡಗು

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Kodagu University : ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದರ ಜತೆಗೆ ಯುವಜನರಿಗೆ ಉದ್ಯೋಗ ಸೃಷ್ಟಿಯತ್ತ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಕೊಡಗು ವಿವಿಯ ಕುಲಪತಿ ಪ್ರೊ.ಅಶೋಕ್‌ ಸಂಗಪ್ಪ ಆಲೂರ್‌ (Prof Ashok Sangappa Alur) ತಿಳಿಸಿದ್ದಾರೆ.

VISTARANEWS.COM


on

By

Kodagu University
Koo

ಕೊಡಗು: ಕೊಡಗು ವಿಶ್ವವಿದ್ಯಾನಿಲಯದಲ್ಲಿ (Kodagu University) ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ಅವರು ತಿಳಿಸಿದ್ದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ ನಡೆದ ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾನಿಲಯದಲ್ಲಿ ಹಲವು ಇತಿಮಿತಿಗಳ ನಡುವೆ ಧನಾತ್ಮಕ ಚಿಂತನೆ ಒಳಗೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಯುವಜನರಿಗೆ ಉದ್ಯೋಗ ಸೃಷ್ಟಿಯತ್ತ ವಿಶೇಷ ಆದ್ಯತೆ ನೀಡಲಾಗಿದೆ. ಕೊಡಗು ವಿಶ್ವವಿದ್ಯಾನಿಲಯದಲ್ಲಿ (Kodagu University ) ಬಿಸಿಎ, ಎಂಸಿಎ, ಎಂಬಿಎ, ಪದವಿ, ಸ್ನಾತಕೋತ್ತರ ಪದವಿ ಆರಂಭಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಅಶೋಕ್ ಸಂಗಪ್ಪ ಆಲೂರ್ ಅವರು ಹೇಳಿದರು.

ವಿನೂತನ ಪಠ್ಯ ಅಗತ್ಯ- ಪ್ರೊ. ಬಿ.ಕೆ ರವಿ

ಕೊಡಗು ವಿಶ್ವವಿದ್ಯಾನಿಲಯವು (Kodagu University ) ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಈ ನಿಟ್ಟಿನಲ್ಲಿ ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ (Kopala University) ಕುಲಪತಿ ಪ್ರೊ.ಬಿ.ಕೆ.ರವಿ (BK Ravi) ಅಭಿಪ್ರಾಯ ವ್ಯಕ್ತಪಡಿಸಿದರು. ಈಗಾಗಲೇ ಏಳು ವಿಶ್ವವಿದ್ಯಾನಿಲಯಗಳು ಸ್ಥಾಪನೆಯಾಗಿದ್ದು, ವಿಶ್ವವಿದ್ಯಾನಿಲಯಗಳು ವಿನೂತನ ಪಠ್ಯ ಚಟುವಟಿಕೆಗಳನ್ನು ಅಳವಡಿಸಿಕೊಂಡು ಅಭಿವೃದ್ಧಿಯತ್ತ ಹೆಜ್ಜೆ ಇಡಬೇಕು ಎಂದು ಬಿ.ಕೆ.ರವಿ ಅವರು ಪ್ರತಿಪಾದಿಸಿದರು.

ಆಧುನಿಕ ಬದುಕಿನಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಬದಲಾವಣೆಗಳತ್ತ ವಿಶ್ವವಿದ್ಯಾನಿಲಯಗಳು ಸಾಗಬೇಕು. ಮಾನವಿಕ ಪದವಿಗಳ ಜತೆ ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಸಿಕೊಂಡು ಅಭಿವೃದ್ಧಿಯತ್ತ ದಾಪುಗಾಲು ಹಾಕಬೇಕು ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ರವಿ ತಿಳಿಸಿದರು. ಹೊಸ ವಿಶ್ವವಿದ್ಯಾನಿಲಯಗಳು ಹಲವು ಸಮಸ್ಯೆ ಮತ್ತು ಸವಾಲುಗಳ ನಡುವೆಯೂ ಸಹ ಯುವಜನರಿಗೆ ಉನ್ನತ ಶಿಕ್ಷಣ ಕಲ್ಪಿಸುವತ್ತ ಗಮನಹರಿಸಬೇಕು. ಪ್ರಸ್ತುತ ಬೇಡಿಕೆಗೆ ತಕ್ಕಂತೆ ಯುವ ಜನರಿಗೆ ಉನ್ನತ ಶಿಕ್ಷಣ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

ಜ್ಞಾನ ಇದ್ದಲ್ಲಿ ಅಜ್ಞಾನಕ್ಕೆ ಅವಕಾಶವಿಲ್ಲ

ಹಾಸನ ವಿಶ್ವವಿದ್ಯಾನಿಲಯದ (Hasana University) ಕುಲಪತಿ ಪ್ರೊ.ತರಿಕೆರೆ ಚಂದ್ರಶೇಖರ ತಾರಾನಾಥ್ ಅವರು ಮಾತನಾಡಿ ವರ್ಷದಿಂದ ವರ್ಷಕ್ಕೆ ವಾತಾವರಣದಲ್ಲಿ ಬದಲಾವಣೆ ಕಂಡು ಬರುತ್ತಿದ್ದು, ಪ್ರಾಕೃತಿಕ ಪರಿಸರ ಹಾಗೂ ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯಗಳು ಜಲಸಂರಕ್ಷಣೆ, ವಾತಾವರಣದಲ್ಲಿನ ಬದಲಾವಣೆ ಮತ್ತಿತರ ವಿಷಯಗಳ ಕುರಿತು ವಿಶ್ವವಿದ್ಯಾನಿಲಯಗಳಲ್ಲಿ ಹೆಚ್ಚಿನ ಅಧ್ಯಯನ ಮಾಡುವಂತಾಗಬೇಕು ಎಂದರು. ಜ್ಞಾನ ಇದ್ದಲ್ಲಿ ಅಜ್ಞಾನಕ್ಕೆ ಅವಕಾಶ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಜತೆಗೆ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸುವಂತಾಗಬೇಕು ಎಂದು ತಾರಾನಾಥ್ ಅವರು ಪ್ರತಿಪಾದಿಸಿದರು.

ವಿಜ್ಞಾನ, ತಂತ್ರಜ್ಞಾನ, ಗಣಿತ, ಸಾಮಾಜಿಕ ವಿಜ್ಞಾನ, ಹೀಗೆ ಹಲವು ವಿಷಯಗಳ ಕುರಿತು ಉನ್ನತ ಶಿಕ್ಷಣ ನೀಡುವುದು ವಿಶ್ವವಿದ್ಯಾನಿಲಯದ್ದಾಗಿದೆ. ಆ ನಿಟ್ಟಿನಲ್ಲಿ ಜ್ಞಾನವೇ ಶಕ್ತಿ ಎಂಬುದನ್ನು ಯಾರೂ ಸಹ ಮರೆಯಬಾರದು. ವಿಶ್ವವಿದ್ಯಾನಿಲಯದಲ್ಲಿ ಯುವಜನರು ಉನ್ನತ ಶಿಕ್ಷಣ ಪಡೆಯುವ ಮೂಲಕ ಉತ್ತಮ ವ್ಯಕ್ತಿತ್ವ ಹೊಂದಬೇಕು. ಉನ್ನತ ಶಿಕ್ಷಣ ಪಡೆದು ಯಶಸ್ಸು ಸಾಧಿಸಬೇಕು ಎಂದರು.

ತಂತ್ರಜ್ಞಾನದೊಂದಿಗೆ ಪರಿವರ್ತನೆ

ಹಾವೇರಿ ವಿಶ್ವವಿದ್ಯಾನಿಲಯದ (Haveri University) ಕುಲಪತಿ ಪ್ರೊ.ಸುರೇಶ್ ಎಚ್.ಜಂಗಮಶೆಟ್ಟಿ ಅವರು ಮಾತನಾಡಿ ಪ್ರತಿಯೊಬ್ಬರಲ್ಲಿಯೂ ಸಹ ಸಾಮಾಜಿಕ ಕಳಕಳಿ ಇರಬೇಕು. ಸಾಮಾಜಿಕ ಕಳಕಳಿ ಇದ್ದಲ್ಲಿ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು. ಆಧುನಿಕ ಬದುಕಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಹ ಗಣಕಯಂತ್ರ ಇದ್ದು, ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿವರ್ತನೆಗೆ ಮುಂದಾಗಬೇಕು. ಸ್ಥಳೀಯ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಿ ಬೆಳೆಸಬೇಕು ಎಂದು ಪ್ರೊ.ಸುರೇಶ್ ಅವರು ಹೇಳಿದರು.

ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಸೀನಪ್ಪ, ಬರೋಡ ಬ್ಯಾಂಕಿನ ಮಂಗಳೂರು ವಲಯ ಮುಖ್ಯಸ್ಥರಾದ ವ್ಯವಸ್ಥಾಪಕರಾದ ಗಾಯತ್ರಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರೊ.ರಾಘವ, ಸಿಂಡಿಕೇಟ್ ಸದಸ್ಯ ಕೆ.ಎನ್.ಜನಾರ್ಧನ್, ಪ್ರಾಧ್ಯಾಪಕರಾದ ಜಮೀರ್ ಅಹ್ಮದ್ , ಜಯಶಂಕರ್, ಶ್ರೀಧರ ಹೆಗಡೆ ಇತರರು ಭಾಗಿಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

Sringeri Shankar Mutt: ಮೈಸೂರಿನಲ್ಲಿ ಶ್ರೀ ಶೃಂಗೇರಿ ಶಂಕರ ಮಠದಿಂದ ಮಾ. 30ರಿಂದ ಏಪ್ರಿಲ್ 6ರ ವರೆಗೆ ಅಭಿನವ ಶಂಕರಾಲಯದ ಶತಮಾನೋತ್ಸವ ಆಯೋಜಿಸಿದ್ದು, ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ಶತಮಾನೋತ್ಸವ ಸಪ್ತಾಹ ವಿಧ್ಯುಕ್ತ ಚಾಲನೆ ಪಡೆಯಲಿದೆ.

VISTARANEWS.COM


on

Sringeri Shankar Mutt
Koo

ಮೈಸೂರು: ನಗರದ ಅಗ್ರಹಾರದ ಫೋರ್ಟ್ ಮೊಹಲ್ಲಾದಲ್ಲಿರುವ ಅಭಿನವ ಶಂಕರಾಲಯದ ಶತಮಾನೋತ್ಸವ ಸಂಭ್ರಮಾಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ಶ್ರೀ ಶೃಂಗೇರಿ ಶಂಕರ ಮಠದಿಂದ (Sringeri Shankar Mutt) ಮಾ. 30ರಿಂದ ಏಪ್ರಿಲ್ 6ರವರೆಗೆ ಆಯೋಜಿಸಿರುವ ಒಂದು ವಾರದ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.

ಸಹಸ್ರ ಮೋದಕ ಗಣಪತಿ ಹೋಮದೊಂದಿಗೆ ಮಾ. 30ರಂದು ಶತಮಾನೋತ್ಸವ ಸಪ್ತಾಹ ವಿಧ್ಯುಕ್ತ ಚಾಲನೆ ಪಡೆಯಲಿದೆ. ಅಂದು ಬೆಳಗ್ಗೆ ಮಠದ ಆವರಣದಲ್ಲಿ ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ಮಠದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಗಣಪತಿ ಹೋಮ ಸಂಪನ್ನಗೊಳ್ಳಲಿದೆ.

ಶೃಂಗೇರಿಯ ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಯವರು 30ರ ಸಂಜೆ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ಪ್ರವೇಶ ಮಾಡಲಿದ್ದಾರೆ. ಸಂಜೆ 6ಕ್ಕೆ ನಗರದ ಸ್ಕೌಟ್ ಭವನದ ಸಮೀಪ ಅವರನ್ನು ಪೂರ್ಣಕುಂಭ ಸಮೇತ ಮಂಗಳವಾದ್ಯಗಳೊಂದಿಗೆ ಸ್ವಾಗತಿಸಲಾಗುವುದು. ಅಲ್ಲಿಂದ ಶ್ರೀ ಶಂಕರ ಮಠದವರೆಗೆ (ರಾಮಸ್ವಾಮಿ ಸರ್ಕಲ್, ಚಾಮರಾಜ ಜೋಡಿ ರಸ್ತೆ ಮೂಲಕ) ಅವರನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಗುವುದು. ಸಂಜೆ 7ಕ್ಕೆ ಜಗದ್ಗುರುಗಳು ಮಠದ ಆವರಣದಲ್ಲಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಲಿದ್ದಾರೆ. ರಾತ್ರಿ 7:30ಕ್ಕೆ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಲಿದ್ದಾರೆ.

Sringeri Shankar Mutt

ಇದನ್ನೂ ಓದಿ | ತಾತಯ್ಯ ತತ್ವಾಮೃತಂ: ಯಮನಿಗೆ ಅಂಜದ ಸತ್ಯವ್ರತಿಗಳು

ಶತಚಂಡಿ ಪಾರಾಯಣ

ಮಾ. 31ರಂದು ಮಠದ ಆವರಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣ ನೆರವೇರಲಿದೆ. ಈ ಸಂದರ್ಭ ಶ್ರೀ ಜಗದ್ಗುರುಗಳು ಸಾರ್ವಜನಿಕ ದರ್ಶನ ನೀಡಲಿದ್ದು, ಪಾದಪೂಜೆ ಮತ್ತು ಭಿಕ್ಷಾವಂದನೆ ನಡೆಯಲಿದೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಅವರು ಭೇಟಿ ನೀಡಲಿದ್ದಾರೆ. ರಾತ್ರಿ 8.30ಕ್ಕೆ ಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನೆರವೇರಿಸಲಿದ್ದಾರೆ.

Sringeri Shankar Mutt

ನಂಜನಗೂಡಿಗೆ ಭೇಟಿ

ಏ. 1ರಂದು ಬೆಳಗ್ಗೆ 8ಕ್ಕೆ ಶ್ರೀ ಜಗದ್ಗುರುಗಳು ನಂಜನಗೂಡಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಂದು ರಾತ್ರಿ 8.30ಕ್ಕೆ ಮೈಸೂರಿನ ಶಂಕರ ಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ ನಡೆಸಲಿದ್ದಾರೆ. ಏ. 2ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನ , ಪಾದಪೂಜೆ ಹಾಗೂ ಭಿಕ್ಷಾ ವಂದನೆ ನಡೆಯಲಿದೆ. ಸಂಜೆ 4:30ಕ್ಕೆ ನಗರದ ವಿವಿಧ ದೇವಾಲಯಗಳು ಹಾಗೂ ಸಂಘ-ಸಂಸ್ಥೆಗಳಿಗೆ ಜಗದ್ಗುರುಗಳು ಭೇಟಿ ನೀಡಲಿದ್ದಾರೆ.

ವಿಶ್ವೇಶ್ವರ ದೇವಸ್ಥಾನದಲ್ಲಿ ಕುಂಭಾಭಿಷೇಕ

ಏ. 3ರ ಬೆಳಗ್ಗೆ 9ಕ್ಕೆ ನಗರದ ಗೀತಾ ರಸ್ತೆಯ ಶ್ರೀ ಪ್ರಸನ್ನ ವಿಶ್ವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಗೊಂಡಿರುವ ಕುಂಭಾಭಿಷೇಕದ ಸಾನ್ನಿಧ್ಯವನ್ನು ಶ್ರೀ ಜಗದ್ಗುರುಗಳು ವಹಿಸಲಿದ್ದಾರೆ. ಪಾದಪೂಜೆ ಮತ್ತು ಭಿಕ್ಷಾವಂದನೆಯನ್ನು ಜಗದ್ಗುರುಗಳು ಸ್ವೀಕರಿಸಲಿರುವುದು ವಿಶೇಷ. ಸಂಜೆ 4.30 ರಿಂದ 7 ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಪೂಜ್ಯರು ಭೇಟಿ ನೀಡಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.

ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ

ಏ. 4 ರ ಬೆಳಗ್ಗೆ 8.30 ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ ಮತ್ತು ಶ್ರೀ ಶಂಕರಾಚಾರ್ಯರ ಸನ್ನಿಧಿಗಳಲ್ಲಿ ಕುಂಭಾಭಿಷೇಕ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ನೆರವೇರಲಿದೆ. ಶ್ರೀ ವಿಧುಶೇಖರ ಭಾರತೀ ತೀರ್ಥ ಜಗದ್ಗುರುಗಳು ಸಾರ್ವಜನಿಕ ದರ್ಶನ, ಪಾದಪೂಜೆ ಮತ್ತು ಭಿಕ್ಷಾವಂದನೆ ಸಾನ್ನಿಧ್ಯ ವಹಿಸಿ ಭಕ್ತ ವೃಂದವನ್ನು ಆಶೀರ್ವದಿಸಲಿದ್ದಾರೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಮರ್ಪಿಸಲಿದ್ದಾರೆ.

ಏ.5ರಂದು ಗುರುವಂದನಾ ಕಾರ್ಯಕ್ರಮ

ಏ. 5ರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1 ರ ವರೆಗೆ ಶಂಕರ ಮಠದ ಆವರಣದಲ್ಲಿ ಶ್ರೀ ಶಾರದಾಂಬಾ ಹಾಗೂ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ಕುಂಭಾಭಿಷೇಕ ಮತ್ತು ಶಿಖರ ಕುಂಭಾಭಿಷೇಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಲಿವೆ. ಸಂಜೆ 5.30ಕ್ಕೆ ಮಠದ ಆವರಣದ ವಿದ್ಯಾಶಂಕರ ನಿಲಯ ಕಲ್ಯಾಣ ಮಂಟಪದಲ್ಲಿ ‘ಗುರುವಂದನಾ’ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಆಗಮಿಸಲಿದ್ದಾರೆ. ವಿವಿಧ ಸಂಘ ಸಂಸ್ಥೆ ಪ್ರಮುಖರು, ನಗರದ ಗಣ್ಯರು, ಸಾರ್ವಜನಿಕರು ಮತ್ತು ಮಠದ ಭಕ್ತರು ಸಾಕ್ಷಿಯಾಗಲಿದ್ದಾರೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕದ ಕನಸಿನ ವಿಹಾರ

ಮಂತ್ರಾಕ್ಷತೆ ಅನುಗ್ರಹ

ಏ. 6ರ ಬೆಳಗ್ಗೆ 9ಕ್ಕೆ ಪೂಜ್ಯ ಜಗದ್ಗುರುಗಳು ಸಾರ್ವಜನಿಕ ದರ್ಶನ ನೀಡಿ, ಪಾದಪೂಜೆ ಮತ್ತು ಭಿಕ್ಷಾ ವಂದನೆ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭ ಅವರು ಶಿಷ್ಯರಿಗೆ, ಭಕ್ತರಿಗೆ ಫಲ ಮಂತ್ರಾಕ್ಷತೆಯನ್ನು ಅನುಗ್ರಹಿಸಲಿದ್ದಾರೆ ಎಂದು ಅಭಿನವ ಶಂಕರಾಲಯದ ಧರ್ಮಾಧಿಕಾರಿ ಎಚ್. ರಾಮಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
Utthana Essay Competition 2023
ಕರ್ನಾಟಕ59 seconds ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 20242 mins ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು3 mins ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ7 mins ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ19 mins ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 202425 mins ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

IPL 2024
ಕ್ರೀಡೆ31 mins ago

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

Sringeri Shankar Mutt
ಮೈಸೂರು31 mins ago

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

LIC
ದೇಶ2 hours ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌2 hours ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌