ಡಾ. ಎಂ.ಸಿ.ಸುಧಾಕರ್ ಪ್ರಮಾಣ
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಕ್ಷೇತ್ರದ ಶಾಸಕ ಡಾ. ಎಂ.ಸಿ. ಸುಧಾಕರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಕೀಯ ಕುಟುಂಬದಿಂದ ಬಂದಿರುವ ಇವರು ಮೂರು ಬಾರಿ ಶಾಸಕರಾಗಿದ್ದಾರೆ.
ಮಧು ಬಂಗಾರಪ್ಪ ಪ್ರಮಾಣ ವಚನ ಸ್ವೀಕಾರ
ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರರಾದ ಇವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
ಬೈರತಿ ಸುರೇಶ್ ಪ್ರಮಾಣವಚನ ಸ್ವೀಕಾರ
ಹೆಬ್ಬಾಳದ ಶಾಸಕ ಬೈರತಿ ಸುರೇಶ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಇವರು ಎರಡು ಬಾರಿ ಶಾಸಕರಾಗಿದ್ದಾರೆ.
ಎನ್ ಎಸ್ ಬೋಸರಾಜು ಪ್ರಮಾಣ
ಶಾಸಕರಾಗದೇ ಇರುವ ಹಿರಿಯ ಕಾಂಗ್ರೆಸ್ ನಾಯಕ ಎನ್ ಎಸ್ ಬೋಸರಾಜು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಯಚೂರಿನ ಹಿರಿಯ ನಾಯಕರಾಗಿರುವ ಇವರು ಕೆಪಿಸಿಸಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಎಐಸಿಸಿಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇವರು ಮಾಜಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ಸಚಿವರಾಗಿ ಸಂತೋಷ್ ಎಸ್ ಲಾಡ್ ಪ್ರಮಾಣ
ಧಾರವಾಡ ಜಿಲ್ಲೆಯ ಕಲಘಟಕಿ ಕ್ಷೇತ್ರದ ಶಾಸಕರಾದ ಸಂತೋಷ್ ಎಸ್ ಲಾಡ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮರಾಠ ಸಮುದಾಯದ ನಾಯಕರಾಗಿರುವ ಇವರು ಈ ಹಿಂದೆ ಕೂಡ ಸಚಿವರಾಗಿದ್ದರು. ಬಿ.ಕಾಂ ಪದವೀಧರರಾಗಿದ್ದಾರೆ.