ಸಚಿವರಾಗಿ ಡಿ. ಸುಧಾಕರ್ ಪ್ರಮಾಣ
ಹಿರಿಯೂರು ಶಾಸಕ ಡಿ. ಸುಧಾಕರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಇವರು ಪ್ರಮಾಣ ಮಾಡಿದ್ದಾರೆ. 2003 ರಿಂದ ರಾಜಕೀಯ ಕ್ಷೇತ್ರದಲ್ಲಿರುವ ಇವರು ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.
ಡಿ. ಸುಧಾಕರ್ ನಾಲ್ಕನೇ ಬಾರಿಗೆ ಶಾಸಕರಾಗಿದ್ದಾರೆ.
ರಹೀಂ ಖಾನ್ ಇಂಗ್ಲಿಷ್‌ನಲ್ಲಿ ಪ್ರಮಾಣ
ಬೀದರ್ ನ ಶಾಸಕರಾಗಿರುವ ರಹೀಂ ಖಾನ್ ಇಂಗ್ಲಿಷ್‌ನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿಂದೆ ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸಿರುವ ಇವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಪ್ರಮಾಣ
ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿವಾಜಿ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ಮಾಡಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ರಾಜ್ಯದ ಪ್ರಭಾವಶಾಲಿ ಮಹಿಳಾ ನಾಯಕಿಯಾಗಿ ಹೊರಹೊಮ್ಮಿದ್ದಾರೆ.
ಮಂಕಾಳು ಸುಬ್ಬ ವೈದ್ಯ ಪ್ರಮಾಣ
ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಶಾಸಕ ಮಂಕಾಳು ಸುಬ್ಬ ವೈದ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದ್ದಾರೆ. ಮೊಗವೀರರ ನಾಯಕರಾಗಿರುವ ಇವರು 2013ರಲ್ಲಿ ಭಟ್ಕಳ ಕ್ಷೇತ್ರದಿಂದ ಪಕ್ಷೇತರಾಗಿ ಗೆದ್ದಿದ್ದರು. ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.
ಡಾ ಶರಣ ಪ್ರಕಾಶ್ ಪಾಟೀಲ್ ಪ್ರಮಾಣ
ಕಲಬುರಗಿ ಜಿಲ್ಲೆ ಸೇಡಂನ ಶಾಸರಾಗಿರುವ ಡಾ. ಶರಣ ಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರು ನಾಲ್ಕು ಬಾರಿ ಶಾಸಕರಾಗಿದ್ದಾರೆ.
ಈ ಹಿಂದೆಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಾ. ಶರಣ ಪ್ರಕಾಶ್ ಪಾಟೀಲ್ ಆತ್ಮೀಯರಾಗಿದ್ದಾರೆ.