ಶಿವರಾಜ್ ತಂಗಡಗಿ ಪ್ರಮಾಣ
ಕೊಪ್ಪಳ ಜಿಲ್ಲೆ ಕನಕಗಿರಿ ಶಾಸಕ ಶಿವರಾಜ್ ಸಂಗಪ್ಪ ತಂಗಡಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
2008ರಲ್ಲಿ ಪಕ್ಷೇತರರಾಗಿಗೆದ್ದು ರಾಜಕೀಯ ಪ್ರವೇಶಿಸಿದ್ದ ಇವರು, ಬಿಜೆಪಿ ಸರ್ಕಾರದಲ್ಲಿ ಕೃಷಿ ಮಾರುಕಟ್ಟೆ ಸಚಿವರಾಗಿದ್ದರು. ಈಗ ಕಾಂಗ್ರೆಸ್ ಸೇರಿ ಗೆದ್ದಿದ್ದಾರೆ.
ಎಸ್ ಎಸ್ ಮಲ್ಲಿಕಾರ್ಜುನ ಪ್ರಮಾಣ
ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾದ ಎಸ್ ಎಸ್ ಮಲ್ಲಿಕಾರ್ಜುನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ರಾದ ಇವರು, ಕಲ್ಲೇಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿಂದೆಯೂ ಇವರು ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಆರ್ ಬಿ ತಿಮ್ಮಾಪುರ ಪ್ರಮಾಣ
ಮುಧೋಳದ ಶಾಸಕ ಆರ್.ಬಿ. ತಿಮ್ಮಾಪುರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿಅ ವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಎಎಲ್‌ಎಲ್‌ಬಿ ಪದವೀಧರಾಗಿರುವ ಇವರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಎಸ್ ಎಂ ಕೃಷ್ಣ ಸಚಿವ ಸಂಪುಟದಲ್ಲಿಯೂ ಸಚಿವರಾಗಿದ್ದರು. ರಾಜ್ಯ ಯೋಜನಾ ಸಮಿತಿಯ ಉಪಾಧ್ಯಕ್ಷರಾಗಿದ್ದರು.
ಶಿವಾನಂದ ಪಾಟೀಲ್ ಪ್ರಮಾಣ
ಬಸವನಬಾಗೇವಾಡಿಯ ಶಾಸಕರಾದ ಶಿವಾನಂದ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಸವಣ್ಣನ ಹೆಸರಿನಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವರು ಈ ಹಿಂದೆ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. 2018 ರ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು.
ಶರಣಬಸಪ್ಪ ದರ್ಶನಾಪುರ ಪ್ರಮಾಣ
ಶಹಾಪುರದ ಶಾಸಕ ಶರಣ ಬಸಪ್ಪ ದರ್ಶನಾಪುರ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಎಂಜಿನಿಯರಂಗ್ ಪದವೀಧರರಾಗಿರುವ ಅವರು, ಈ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಐದನೇ ಬಾರಿಗೆ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೆಎಚ್ ಪಟೇಲ್ ಸಂಪುಟದಲ್ಲಿ ಇಂಧನ ಸಚಿವರಾಗಿ ರಾಜ್ಯದ ಗಮನ ಸೆಳೆದಿದ್ದರು.