ದಿನೇಶ್ ಗುಂಡೂರಾವ್ ಪ್ರಮಾಣ
ಬೆಂಗಳೂರು ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ಸಿಎಂ ಗುಂಡೂರಾವ್ ಅವರ ಪುತ್ರರಾಗಿರುವ ದಿನೇಶ್ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಸಚಿವರಾಗಿ ಕೆ.ಎನ್. ರಾಜಣ್ಣ ಪ್ರಮಾಣ
ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎರಡು ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾಗಿ, ಮೂರು ಬಾರಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿರುವ ರಾಜಣ್ಣ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ರಾಜಣ್ಣ ಬುದ್ಧ ಬಸವ ಅಂಬೇಡ್ಕರ್ ವಾಲ್ಮೀಕಿ ಹೆಸರಿನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಚಿವರಾಗಿ ಈಶ್ವರ್ ಖಂಡ್ರೆ ಪ್ರಮಾಣ
ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎಂಜಿನಿಯರಿಂಗ್ ಪದವೀಧರರಾಗಿರುವ ಇವರು ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದಾರೆ. ಕೆಪಿಸಿಸಿಯ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಈಶ್ವರ್ ಖಂಡ್ರೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇವರು ಸತತವಾಗಿ ನಾಲ್ಕುಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಚಿವರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಸಚಿವರಾಗಿ ಡಾ.ಎಸ್.ಸಿ. ಮಹದೇವಪ್ಪ ಪ್ರಮಾಣ ವಚನ ಸ್ವೀಕಾರ
ಸಚಿವರಾಗಿ ಟಿ. ನರಸೀಪುರದ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವೇಗೌಡ ಮತ್ತು ಜೆ ಎಚ್ ಪಟೇಲ್ ಸಂಪುಟದಲ್ಲಿ ಇವರು ಸಚಿವರಾಗಿದ್ದರು. ಸತ್ಯ-ನಿಷ್ಠೆ ಹೆಸರಿನಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಚಿವರಾಗಿ ವೆಂಕಟೇಶ್ ಪ್ರಮಾಣ
ಪಿರಿಯಾಪಟ್ಟಣದ ಶಾಸಕ ಕೆ. ವೆಂಕಟೇಶ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.