Site icon Vistara News

ರಾಜ್ಯಸಭೆಗೆ ನಾಮಕರಣ | ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದ ಸಿಎಂ

veerendra heggade

ಬೆಂಗಳೂರು: ರಾಜ್ಯಸಭೆಗೆ ನಾಮಕರಣಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿನಂದಿಸಿದ್ದಾರೆ.

ಬೆಂಗಳೂರಿನಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿಗಳು ಅವರಿಗೆ ಹಾರ ಹಾಕಿ ಶಾಲು ಹೊದಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಚಿವ ಶಿವರಾಮ್ ಹೆಬ್ಬಾರ್, ಶಾಸಕರಾದ ಎಸ್ ಆರ್ ವಿಶ್ವನಾಥ್ , ಡಾ. ಶಿವರಾಜ್ ಪಾಟೀಲ್ ಮತ್ತು ಇತರರು ಉಪಸ್ಥಿತರಿದ್ದರು.

ಡಾ.ವೀರೇಂದ್ರ ಹೆಗ್ಗಡೆಯವರೊಂದಿಗೆ ಚರ್ಚಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ವೀರೇಂದ್ರ ಹೆಗ್ಗಡೆಯವರ ಕುಟುಂಬದ ಸದಸ್ಯರು

ಒಟ್ಟಿಗೆ ಬಂದು ಅಭಿನಂದಿಸಿದ ಅಕಾಡೆಮಿ ಅಧ್ಯಕ್ಷರುಗಳು

ಕನ್ನಡ ಮತ್ತು ಸಂಸ್ಕೃ ಇಲಾಖೆಯ ವಿವಿಧ ಅಕಾಡೆಮಿ ಹಾಗೂ‌ ಪ್ರಾಧಿಕಾರದ ಅಧ್ಯಕ್ಷರು ಡಾ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ, ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ, ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಡಿ ಮಹೇಂದ್ರ, ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಅಕ್ಕಸಾಲಿ, ಕನಕದಾಸ ಅಧ್ಯಯನ ಸಂಸ್ಥೆ ಅಧ್ಯಕ್ಷ  ಸತ್ಯನಾರಾಯಣ ಹಾಗೂ ವಿವಿಧ ಅಕಾಡೆಮಿಗಳ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಡಾ. ವೀರೇಂದ್ರ ಹೆಗ್ಗಡೆಯವರೊಂದಿಗೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು.

ಇದನ್ನೂ ಓದಿ| ರಾಜ್ಯಸಭೆಗೆ ನಾಮನಿರ್ದೇಶನ; ಡಾ. ವೀರೇಂದ್ರ ಹೆಗ್ಗಡೆಯವರ ಸಾರ್ಥಕ ಸೇವೆಗೆ ಸಂದ ಗೌರವ

Exit mobile version