ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಪಟ್ಟದ ಕಗ್ಗಂಟು ಹೈಕಮಾಂಡ್ ಮಟ್ಟದಲ್ಲಿ ಪರಿಹಾರವಾಗಿದ್ದು, ಸಿದ್ದರಾಮಯ್ಯ ಅವರ ಆಯ್ಕೆ ಖಚಿತವಾಗಿದೆ. ಇಂದು ಅಧಿಕೃತವಾಗಿ ಅವರ ಹೆಸರು ಘೋಷಣೆಯಾಗಲಿದೆ. ಕ್ಷಣಕ್ಷಣದ ಸುದ್ದಿಗಳು ಇಲ್ಲಿ ಬರಲಿವೆ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
— Siddaramaiah (@siddaramaiah) May 18, 2023
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
ಸಿದ್ದರಾಮಯ್ಯ ಮುಂದಿನ ಸಿಎಂ, ಡಿಕೆಶಿ ಡಿಸಿಎಂ; ಎಐಸಿಸಿಯಿಂದ ಅಧಿಕೃತ ಘೋಷಣೆ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಈ ವಿಷಯವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತವಾಗಿ ಪ್ರಕಟಿಸಿದ್ದಾರೆ .
ಕೆ ಸಿ. ವೇಣುಗೋಪಾಲ್ ಸುದ್ದಿಗೋಷ್ಠಿ ಶುರು
ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ತಿಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿ ಆರಂಭಗೊಂಡಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರ ಶ್ರಮವನ್ನು ಅವರು ಸ್ಮರಿಸುತ್ತಿದ್ದಾರೆ.
ಒಂದೇ ಕಾರಿನಲ್ಲಿ ಹೊರಟ ನಾಯಕರು
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮನೆಯಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ಯಶಸ್ವಿಯಾಗಿದೆ. ವೇಣುಗೋಪಾಲ್ ಮನೆಯಿಂದ ಹೊರಟ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಒಂದೇ ಕಾರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ತೆರಳಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆ ಶುರು
ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೇ. 20 ರಂದು ಪ್ರಮಾಣವಚನ ಸ್ವೀಕರಿಸುವುದು ಖಚಿತವಾಗುತ್ತಿದ್ದಂತೆಯೇ ಈ ಕಾರ್ಯಕ್ರಮಕ್ಕೆ ಸಿದ್ಧತೆ ಮತ್ತೆ ಆರಂಭಗೊಂಡಿದೆ.