Site icon Vistara News

Karnataka CM: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ

Criminal defamation case against Siddaramaiah to be heard on April 29

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಪಟ್ಟದ ಕಗ್ಗಂಟು ಹೈಕಮಾಂಡ್‌ ಮಟ್ಟದಲ್ಲಿ ಪರಿಹಾರವಾಗಿದ್ದು, ಸಿದ್ದರಾಮಯ್ಯ ಅವರ ಆಯ್ಕೆ ಖಚಿತವಾಗಿದೆ. ಇಂದು ಅಧಿಕೃತವಾಗಿ ಅವರ ಹೆಸರು ಘೋಷಣೆಯಾಗಲಿದೆ. ಕ್ಷಣಕ್ಷಣದ ಸುದ್ದಿಗಳು ಇಲ್ಲಿ ಬರಲಿವೆ.

Harish Kera

ಪ್ರಮಾಣ ವಚನಕ್ಕೆ ಸಿದ್ಧತೆ

ಬೆಂಗಳೂರು: ರಾಜಧಾನಿಯ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸಿದ್ಧತೆಗಳನ್ನು ನಿನ್ನೆಯಿಂದಲೇ ಆರಂಭಿಸಲಾಗಿತ್ತು.

Harish Kera

ರಾಮನಗರದಲ್ಲಿ ಪ್ರತಿಭಟನೆ ಸಾಧ್ಯತೆ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುವ ಸಾಧ್ಯತೆ ಇದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ರಾಮನಗರ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ನಿನ್ನೆ ರಾಮನಗರದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

Exit mobile version