ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಸ್ಟೇಡಿಯಂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಗ್ಯಾರಂಟಿ ಯೋಜನೆ ಜಾರಿ ಆದೇಶ ಹೊರಡಿಸಿದ ಸರ್ಕಾರ
ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯದ ನೂತನ ಸರ್ಕಾರವು ಮೊದಲ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡುತ್ತಿದ್ದಂತೆಯೇ ಇವುಗಳ ಜಾರಿಯ ಕುರಿತು ಆದೇಶ ಹೊರಡಿಸಲಾಗಿದೆ.
ಗ್ಯಾರಂಟಿ ಯೋಜನೆ ಕುರಿತು; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ನೂತನ ಸರ್ಕಾರ ನಿರೀಕ್ಷೆಯನ್ನು ಹುಸಿಗೊಳಿಸಿದೆ. ರಾಜ್ಯ ಸರ್ಕಾರದ ಬಳಿ ಅಗತ್ಯ ಎಲ್ಲ ಮಾಹಿತಿಗಳಿದ್ದು, ಹೊಸದಾಗಿ ಮಾಹಿತಿ ಸಂಗ್ರಹಿಸಬೇಕಾಗಿಲ್ಲ. ಇನ್ನೂ ಮಾಹಿತಿ ಕಲೆಹಾಕಬೇಕಾಗಿದೆ ಎಂದು ಹೇಳುತ್ತಿರುವುದು ಕುಂಟು ನೆಪ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.
ರೋಡಲ್ಲಿ ಹೋಗುವವರಿಗೆ ಕೊಡಲಾಗುವುದಿಲ್ಲ
ಉಚಿತ ಯೋಜನೆಗಳನ್ನು ರೋಡಲ್ಲಿ ಹೋಗುವವರಿಗೆ ನೀಡಲಾಗುವುದಿಲ್ಲ. ಹೀಗಾಗಿ ಎಲ್ಲಾ ಅಂಕಿ ಅಂಶಗಳನ್ನು ಕಲೆ ಹಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಪುನಾರ್‌ಸ್ಥಾಪನೆ
ಈಗ ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮತ್ತೆ ಅರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳಿಗೆ ಒಪ್ಪಿಗೆ
ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ ಬಜೆಟ್‌ನ ಮೇಲೆ 50 ಸಾವಿರ ಕೋಟಿ ರೂ. ಹೊರೆಯಾಗಬಹುದೆಂದು ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.