ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಸ್ಟೇಡಿಯಂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಷಣ
ರಾಜ್ಯದ ಜನತೆಗೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಿಮ್ಮ ಬೆಂಬಲದಿಂದ ಗೆಲುವು ಆಗಿದೆ. ರಾಜ್ಯದಲ್ಲಿ ಬದಲಾವಣೆ ಆಗಿದೆ. ದಲಿತ, ಹಿಂದುಳಿದ, ಬಡವರ ಜತೆ ಕಾಂಗ್ರೆಸ್ ಇದೆ. ನಮ್ಮ ಜತೆ ಹಿಂದುಳಿದ ವರ್ಗದವರು, ದಲಿತರು ಇದ್ದಾರೆ. ಬಿಜೆಪಿ ಬಳಿ ಪೊಲೀಸ್ ಮತ್ತು ಅಧಿಕಾರಿವರ್ಗ ಇತ್ತು. ನಮ್ಮ ಬಳಿ ಜನ ಇದ್ದಾರೆ.
ಗ್ರೂಪ್ ಫೋಟೊ
ಸಚಿವರಾಗಿ ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಪ್ರಮಾಣ
ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು ಸಚಿವರು ಪ್ರಮಾಣವಚನ ಸ್ವೀಕರಿಸಿದರು. ಎಲ್ಲರ ಪ್ರಮಾಣವಚನ ಸ್ವೀಕಾರದ ಬಳಿಕ ಗ್ರೂಪ್ ಫೋಟೊ ನಡೆಯಿತು.
ಅಲ್ಲಾಹು ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು ಬಿ.ಝಡ್ ಝಮೀರ್ ಅಹಮದ್ ಖಾನ್
ಅವರು ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದರು