ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಸ್ಟೇಡಿಯಂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ರಾಮಲಿಂಗಾ ರೆಡ್ಡಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಅವರು ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದರು. ಯಾವುದೇ ಹೆಸರು ಹೇಳಲಿಲ್ಲ
ಕಂಠೀರವ ಸ್ಟೇಡಿಯಂ ಹೊರಭಾಗದಲ್ಲಿ ಸಿದ್ಧವಾಗಿ ನಿಂತಿರುವ ಸರ್ಕಾರಿ ವಾಹನ
4545 ನಂಬರ್ ನ ಸರ್ಕಾರಿ ವಾಹನ ಇನ್ ಮುಂದೆ ಸಿದ್ದರಾಮಯ್ಯ ಸಿಎಂ ಆಗಿ ರಾಜ್ಯ ಸುತ್ತಲಿರುವ ಸರ್ಕಾರಿ ಕಾರು
ಯಡಿಯೂರಪ್ಪ ಬಳಕೆ ಮಾಡುತ್ತಿದ್ದ ಕಾರನ್ನು ಸಿಎಂ ಸಿದ್ದರಾಮಯ್ಯ ಬಳಕೆ ಮಾಡಲಿದ್ದಾರೆ
ಪ್ರಿಯಾಂಕಾ ಖರ್ಗೆ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ದೇವರ ಹೆಸರಿನಲ್ಲಿ ಪ್ರಮಾಣವಚನ
ಸತೀಶ್ ಜಾರಕಿಹೊಳಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಬುದ್ಧ, ಬಸವ,ಅಂಬೇಡ್ಕರ್ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ
ದೇವರ ಹೆಸರಿನಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಂ.ಬಿ. ಪಾಟೀಲ್