ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಸ್ಟೇಡಿಯಂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನಕ್ಕೆ ಕ್ಷಣ ಗಣನೆ: ವೇದಿಕೆಗೆ ಆಗಮಿಸಿದ ಸಿದ್ದರಾಮಯ್ಯ
ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಗೆ ಆಗಮಿಸಿದ್ದು ಅವರ ಜತೆ ಅವರ ಜತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು.
ರಾಹುಲ್ ಗಾಂಧಿ ಅವರು ಜತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಕೈಗಳನ್ನು ಎತ್ತಿ ಜೋಡೆತ್ತುಗಳೆಂದು ಸಾರಿದರು
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ಛತ್ತೀಸ್‌ಗಢ ಮುಖ್ಯಮಂತ್ರಿ ರೂಪೇಶ್ ಭಘೇಲ್
ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ
ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಕಂಠೀರವ ಸ್ಟೇಡಿಯಂನತ್ತ ತೆರಳಿದ ರಾಹುಲ್, ಪ್ರಿಯಾಂಕಾ, ಸಿದ್ದರಾಮಯ್ಯ
ದಿಲ್ಲಿಯಿಂದ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಖಾಸಗಿ ಹೊಟೇಲ್ ನಿಂದ ಕ್ರೀಡಾಂಗಣದತ್ತ ತೆರಳಿದರು. ಅವರ ಜತೆ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಇದ್ದಾರೆ.
ಚಿತ್ರ ನಟಿ ರಮ್ಯಾ ದಿವ್ಯಸ್ಪಂದನ ಗ್ರ್ಯಾಂಡ್ ಎಂಟ್ರಿ
ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕಿ, ಚಿತ್ರ ನಟಿ ರಮ್ಯಾ ದಿವ್ಯಸ್ಪಂದನ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದಾರೆ.
ಚಿತ್ರ ನಟ ದುನಿಯಾ ವಿಜಯ್, ಚಿತ್ರನಟಿಯೂ ಆಗಿರುವ ಮಾಜಿ ಸಚಿವೆ ಉಮಾಶ್ರೀ ಕೂಡಾ ಜತೆಗಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ, ಅಳಿಯ ಅಮರ್ತ್ಯ ಹೆಗ್ಡೆ ಆಗಮಿಸಿದ್ದಾರೆ.
ಖ್ಯಾತ ಚಿತ್ರ ನಟ ಶಿವರಾಜ್ ಕುಮಾರ್, ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ.
ಖ್ಯಾತ ಚಿತ್ರ ನಟ ಕಮಲಹಾಸನ್ ಕೂಡಾ ಆಗಮಿಸಿದ್ದಾರೆ.