Heeraben Modi | ಪ್ರಧಾನಿ ನರೇಂದ್ರ ಮೋದಿ ಮಾತೃ ವಿಯೋಗಕ್ಕೆ ಕರ್ನಾಟಕದ ಕಂಬನಿ - Vistara News

ಕರ್ನಾಟಕ

Heeraben Modi | ಪ್ರಧಾನಿ ನರೇಂದ್ರ ಮೋದಿ ಮಾತೃ ವಿಯೋಗಕ್ಕೆ ಕರ್ನಾಟಕದ ಕಂಬನಿ

ಪ್ರಧಾನಿ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಗುಜರಾತ್‌ನ ಗಾಂದಿನಗರದಲ್ಲಿ ನಿಧನರಾಗಿದ್ದಾರೆ. ಕರ್ನಾಟಕದ ಗಣ್ಯರು ಪ್ರಧಾನಿ ಮಾತೃ ವಿಯೋಗಕ್ಕೆ ಕಂಬನಿ ಮಿಡಿದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ನನ್ನ ತಾಯಿ ಅತ್ಯಂತ ಸರಳ ಹಾಗೂ ಅಷ್ಟೇ ವಿರಳ ಎಂದು ಸ್ವತಃ ಪ್ರಧಾನಿ ಮೋದಿಯವರು ಹೇಳಿದ್ದಾರೆ. ಆ ತಾಯಿ ಎಂದಿಗೂ ಮಗನನ್ನಾಗಿ ನೋಡಿದರೇ ವಿನಃ ಪ್ರಧಾನಿ, ಮುಖ್ಯಮಂತ್ರಿಯಾಗಿ ಅಲ್ಲ. ಆ ತಾಯ್ತನವನ್ನು, ಕರ್ತವ್ಯವನ್ನು ನಿರ್ವಹಣೆ ಮಾಡಿ ನರೇಂದ್ರ ಮೋದಿಯವರಿಗೆ ಆದರ್ಶ ತುಂಬಿದ್ದಾರೆ. ಅವರಿಗೆ ತತ್ವನಿಷ್ಠೆ, ದೇಶಭಕ್ತಿಯನ್ನು ತುಂಬಿಕೊಟ್ಟಿದ್ದಾರೆ. ತಾಯಿ ಮಕ್ಕಳ ಸಂಬಂಧ ಈ ದೇಶಕ್ಕೇ ಮಾದರಿ. ತನ್ನ ತಾಯಿ ಕರ್ಮಯೋಗಿ ಎಂದು ಮೋದಿಯವರು ಹೇಳಿದ್ದರು. ಆ ತಾಯಿ, ತನ್ನ ಪುತ್ರನನ್ನೂ ಕರ್ಮಯೋಗಿಯನ್ನಾಗಿ ರೂಪಿಸಿದರು. ಇಂದೂ ತಮ್ಮ ಎಲ್ಲ ಕರ್ತವ್ಯದಲ್ಲಿ ಯಥಾವತ್ತಾಗಿ ಭಾಗವಹಿಸುತ್ತಿದ್ದಾರೆ ಎನ್ನುವುದೇ ಸಾಕ್ಷಿ.

ನಳಿನ್‍ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಅಧ್ಯಕ್ಷ
ಇದು ದೇಶಕ್ಕೇ ಆಘಾತ ತಂದ ಸುದ್ದಿ. ಹೀರಾಬೆನ್ ಅವರು ನರೇಂದ್ರ ಮೋದಿಯವರ ರೂಪದಲ್ಲಿ ಭಾರತಕ್ಕೆ ಸಮರ್ಥ ಪ್ರಧಾನಿಯನ್ನು ನೀಡಿದ್ದಾರೆ. ಜಗತ್ತಿಗೇ ಒಬ್ಬ ಮಾರ್ಗದರ್ಶಕರನ್ನು ಕೊಟ್ಟಿದ್ದಾರೆ. ಒಬ್ಬ ತಪಸ್ವಿಯಂತೆ, ನಿಷ್ಕಾಮ ಕರ್ಮಯೋಗಿಯಾಗಿ ಮತ್ತು ಮೌಲ್ಯಗಳಿಗೆ ಬದ್ಧತೆಯಿಂದ ಹೀರಾಬೆನ್ ಅವರು ಬದುಕಿದ್ದರು.

ಕೆ. ಗೋಪಾಲಯ್ಯ, ಅಬಕಾರಿ ಸಚಿವ
ಈ ದೇಶಕ್ಕೆ ಮಹಾನ್ ನಾಯಕನನ್ನು ನೀಡಿದಂತಹ, ಭಾರತೀಯರೆಲ್ಲರಿಗೂ ಮಾತೃ ಸ್ವರೂಪಿಯಾದ ಶ್ರೀಮತಿ ಹೀರಾ ಬೆನ್ ಮೋದಿ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಭಾರತವನ್ನು ಮುನ್ನಡೆಸುವ ಸಮರ್ಥ ನಾಯಕನನ್ನು ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ ಆ ತಾಯಿಯ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ. ಅವರ ಕುಟುಂಬಸ್ಥರಿಗೆ ವಿಶೇಷವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಆಗಿರುವ ದುಃಖದಲ್ಲಿ ನಾನು ಸಹ ಭಾಗಿಯಾಗಿದ್ದೇನೆ. ಈ ದುಃಖವನ್ನು ಸೈರಿಸುವ ಶಕ್ತಿಯನ್ನು ದಯಾಘನನಾದ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವೆ. ಓಂ ಶಾಂತಿ

ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠ
ಭವ್ಯ ಭಾರತಕ್ಕೆ ಸಮರ್ಥ ಪ್ರಧಾನಿಯನ್ನು ನೀಡಿದಂತಹ ಹೀರಾ ಬೆನ್ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನು ಕಳೆದುಕೊಂಡಂತಾಗಿದೆ. ಭಾರತವನ್ನು ಮುನ್ನಡೆಸುವ ಸಮರ್ಥ ಪ್ರಧಾನಿಯನ್ನ ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ ಆ ತಾಯಿ ತಮ್ಮ ಮಕ್ಕಳಿಗೆ ನೀಡಿರುವ ಸಂಸ್ಕಾರ ಆದರ್ಶನೀಯ. ಹೀರಾ ಬೆನ್ ರವರ ನಿಧನದಿಂದ ದುಃಖಿತರಾಗಿರುವ ಕುಟುಂಬ ವರ್ಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಅವರ ಬಂಧು ವರ್ಗದವರಿಗೆ ಭಗವಂತನು ದುಃಖವನ್ನು ಸಹಿಸುವ ಶಕ್ತಿಯನ್ನು, ಮಾತೆ ಹೀರಾ ಬೆನ್ ರವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲೆಂದು ಆಶಿಸುತ್ತೇವೆ.

ಬಿ.ಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಪ್ರಧಾನಿ ನರೇಂದ್ರ ಮೋದಿ ಅವರ ಪೂಜ್ಯ ಮಾತೃಶ್ರೀ ಹೀರಾಬೆನ್ ಮೋದಿ ರವರು ವಿಧಿವಶರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಅತ್ಯಂತ ನಿಸ್ಪೃಹತೆ ಹಾಗೂ ಸಾರ್ಥಕತೆಯಿಂದ ಶತಮಾನ ಪೂರೈಸಿದ್ದ ಆ ಹಿರಿಯ ಜೀವಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ರವರೊಂದಿಗೆ ಇಡೀ ದೇಶ ನಿಂತಿದೆ, ಅವರ ದುಃಖದಲ್ಲಿ ಭಾಗಿಯಾಗಿದೆ. ಅವರ ಮಾತೃಶ್ರೀ ಅವರ ಚರಣಗಳಿಗೆ ನಮಿಸುತ್ತಾ, ಸಮಸ್ತ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.

ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಧ್ಯಕ್ಷ
ಶತಾಯುಷಿ ಹಾಗೂ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ತಾಯಿಯವರಾದ ಶ್ರೀಮತಿ ಹೀರಾಬೆನ್ ಅವರು ಸ್ವರ್ಗಸ್ಥರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ತಾಯಿಗೆ ತಾಯಿಯೇ ಸಾಟಿ. ಶ್ರೀಮತಿ ಹೀರಾಬೆನ್ ಅವರ ಮಾತುಗಳು, ಜೀವನ ಶೈಲಿ, ಸರಳತೆ ಇವುಗಳೆಲ್ಲವೂ ಸನ್ಮಾನ್ಯ ಪ್ರಧಾನ‌ಮಂತ್ರಿಯವರಿಗೆ ಸ್ಪೂರ್ತಿದಾಯಕವಾಗಿತ್ತು. ಅವರ ನಿಧನದಿಂದ ನಮ್ಮ ದೇಶ ಒಬ್ಬ ಹಿರಿಯ ಚೇತನವೊಂದನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ‌ ಮತ್ತು ಅವರ ಕುಟುಂಬ ವರ್ಗದವರಿಗೆ ಹಾಗೂ ನಮ್ಮ ದೇಶದ ಅಭಿಮಾನಿ ಬಳಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಸಿ.ಟಿ. ರವಿ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ದೇಶಕ್ಕೋಸ್ಕಕರವೇ ಮಗನನ್ನು ತನ್ನ ಒಡಲಿಂದ ಅರ್ಪಿಸಿದ ಶತಾಯುಷಿ ಹೀರಾ ಬೆನ್ ಮೋದಿ ಯವರು ಇಂದು ನಮ್ಮನ್ನೆಲ್ಲ ಅಗಲಿದ್ದಾರೆ. ಸರಳ ವ್ಯಕ್ತಿತ್ವ ವೇ ಆ ಮಾತೃಶ್ರೀ ಯವರ ಆಭರಣವಾಗಿತ್ತು. ಮೋದಿಯವರು ತಮ್ಮ ಅಮ್ಮನನ್ನು ಭೇಟಿಯಾದಾಗಲೆಲ್ಲಾ ಆ ತಾಯಿ ಮಗನೆಡೆಗೆ ತೋರಿಸುತ್ತಿದ್ದ ವಾತ್ಸಲ್ಯ ಕಣ್ಣೆದುರಿಗೆ ಬರುತ್ತಿದೆ.
ಅಮ್ಮನ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಕುಟುಂಬಕ್ಕೆ ದೇವರು ನೀಡಲೆಂದು ಪ್ರಾರ್ಥನೆ. ಓಂ ಶಾಂತಿ.

ಡಾ. ಕೆ. ಸುಧಾಕರ್‌, ಆರೋಗ್ಯ ಸಚಿವ
ಹಿಂದೂಸ್ಥಾನವು ಎಂದೂ ಮರೆಯದ ಭಾರತ ರತ್ನವನ್ನು ಹೆತ್ತ ಆ ಮಹಾ ತಾಯಿಯ ಆತ್ಮಕ್ಕೆ ಸದ್ಗತಿ ದೊರೆಯಲಿ. ಪ್ರಧಾನಿ ಮೋದಿ ಅವರಿಗೆ, ಅವರ ಕುಟುಂಬ ಸದಸ್ಯರಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಸಿ.ಸಿ. ಪಾಟೀಲ್‌, ಲೋಕೋಪಯೋಗಿ ಸಚಿವ
ಇಡೀ ವಿಶ್ವವೇ ಗೌರವಿಸುವಂತಹ, ನಮ್ಮೆಲ್ಲರ ಹೆಮ್ಮೆಯ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರ ಮಾತೋಶ್ರೀಯವರಾದ ಗೌರವಾನ್ವಿತ ಹೀರಾ ಬೆನ್ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ಹೀರಾಬೆನ್ ಅವರು ಭಾರತೀಯ ಮಹಿಳೆಯ, ತಾಯಿಯ ಆದರ್ಶ ಜೀವನಕ್ಕೆ ಸೂಕ್ತ ಮಾದರಿಯಾಗಿದ್ದರು. ಪುತ್ರ ಶ್ರೀ ನರೇಂದ್ರ ಮೋದಿಜಿಯವರಲ್ಲಿ ಅಪ್ರತಿಮ ದೇಶಪ್ರೇಮ, ತ್ಯಾಗದ ಮನೋಭಾವ ಮತ್ತು ದೇಶ ಸೇವೆಯ ಉದಾತ್ತ ಗುಣಗಳನ್ನು ಮತ್ತು ಮಾನವೀಯ ಮೌಲ್ಯಗಳನ್ನು ಬಾಲ್ಯದಿಂದಲೇ ಬೆಳೆಸುವಲ್ಲಿ ಹೀರಾ ಬೆನ್ ಅವರು ದೊಡ್ಡ ಶಕ್ತಿಯಾಗಿದ್ದರು.

ಗೋವಿಂದ ಕಾರಜೋಳ, ಜಲ ಸಂಪನ್ಮೂಲ ಸಚಿವ
ಈ ದೇಶಕ್ಕೆ ಮಹಾನ್ ನಾಯಕನನ್ನು ನೀಡಿದಂತಹ ಭಾರತೀಯರೆಲ್ಲರಿಗೂ ಮಾತೃ ಸ್ವರೂಪಿಯಾದ ಶ್ರೀಮತಿ ಹೀರಾ ಬೆನ್ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಭಾರತವನ್ನು ಮುನ್ನಡೆಸುವ ಸಮರ್ಥ ನಾಯಕನನ್ನು ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ ಆ ತಾಯಿಯ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ ಹಾಗೂ ಅವರ ನಿಧನದಿಂದ ಅವರ ಕುಟುಂಬಸ್ಥರಿಗೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಗಿರುವ ದುಃಖದಲ್ಲಿ ನಾನು ಭಾಗಿ. ಈ ದುಃಖವನ್ನು ಸೈರಿಸುವ ಶಕ್ತಿಯನ್ನು ದಯಾಘನನಾದ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

Latest

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಆತನಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಈ ತೀರ್ಪು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗುವವರಿಗೆ ಕಠಿಣ ಸಂದೇಶ ರವಾನಿಸಿದ್ದು, ಸಂತ್ರಸ್ತ ಆಟೋ ಚಾಲಕ ಮತ್ತು ಸಾರ್ವಜನಿಕರಿಗೆ ನ್ಯಾಯ ಸಿಕ್ಕಂತಾಗಿದೆ.

Continue Reading

Latest

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

VISTARANEWS.COM


on

ಹರಿಹರದ ಪಂಚಮಸಾಲಿ ಮಠದಲ್ಲಿ ದಶಕಗಳಿಂದ ಇದ್ದ ಭಿನ್ನಾಭಿಪ್ರಾಯ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಆಸ್ತಿ, ಭಕ್ತರ ದೇಣಿಗೆ ಮತ್ತು ಸರ್ಕಾರದ ಅನುದಾನದ ಲೆಕ್ಕಾಚಾರದ ವಿಚಾರವಾಗಿ ವಚನಾನಂದ ಸ್ವಾಮೀಜಿ ಹಾಗೂ ಮಠದ ಟ್ರಸ್ಟಿಗಳ ನಡುವೆ ತೀವ್ರ ಜಟಾಪಟಿ ಆರಂಭವಾಗಿದೆ. ಸೋಮವಾರ ಮಠದ ಆವರಣದಲ್ಲಿ ಉಭಯ ಬಣಗಳ ಬೆಂಬಲಿಗರು ಮುಖಾಮುಖಿಯಾಗಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸರು ಬಿಗಿ ಬಂದೋಬಸ್ತ್ ಮಾಡುವಂತಾಯಿತು.

ಈ ವಿವಾದದ ಕೇಂದ್ರಬಿಂದು ಸರ್ಕಾರದ 10 ಕೋಟಿ ರೂಪಾಯಿ ಅನುದಾನ. ಮಠದಲ್ಲಿ ವಸತಿಗೃಹ ಮತ್ತು ಹಾಸ್ಟೆಲ್ ನಿರ್ಮಾಣಕ್ಕಾಗಿ ಬಂದಿದ್ದ ಈ ಹಣದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಚನಾನಂದ ಶ್ರೀಗಳು ಆರೋಪಿಸಿದ್ದಾರೆ. ಟ್ರಸ್ಟಿಗಳು ನಕಲಿ ಸಹಿ ಮಾಡಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ, ಆದರೆ ಕಟ್ಟಡಗಳೇ ನಿರ್ಮಾಣವಾಗಿಲ್ಲ ಎಂಬುದು ಶ್ರೀಗಳ ವಾದ. ಇದಕ್ಕೆ ಪ್ರತಿಯಾಗಿ ಟ್ರಸ್ಟಿಗಳು, “ನಾವು ಯಾವುದೇ ತಪ್ಪು ಮಾಡಿಲ್ಲ, ಎಲ್ಲವೂ ಪಾರದರ್ಶಕವಾಗಿದೆ” ಎಂದು ಹೇಳುತ್ತಾ 2008 ರಿಂದ 2026ರವರೆಗಿನ ಲೆಕ್ಕಪತ್ರದ ದಾಖಲೆಗಳೊಂದಿಗೆ ಮಠಕ್ಕೆ ಆಗಮಿಸಿ ಶ್ರೀಗಳ ವಿರುದ್ಧವೇ ಹರಿಹಾಯ್ದಿದ್ದಾರೆ.

ಮಠದ ಆವರಣದಲ್ಲಿ ನಡೆದ ಈ ಹೈಡ್ರಾಮಾದಲ್ಲಿ ಟ್ರಸ್ಟಿಗಳು ಶ್ರೀಗಳ ಉಚ್ಚಾಟನೆಗೆ ಪಟ್ಟು ಹಿಡಿದರೆ, ಶ್ರೀಗಳು ಮಾತ್ರ ತಾವು ಮಠ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಮಠದಲ್ಲಿ ನಡೆದಿರುವ ಲೂಟಿಯ ಬಗ್ಗೆ ಪೂರ್ಣ ತನಿಖೆಯಾಗಲಿ” ಎಂದು ಸ್ವಾಮೀಜಿ ಪಟ್ಟು ಹಿಡಿದು ಕುಳಿತಿದ್ದಾರೆ. ಭಕ್ತರ ಆಸ್ತಿಯಾಗಿರುವ ಮಠದಲ್ಲಿ ಈ ರೀತಿ ಲೆಕ್ಕದ ವಿಚಾರವಾಗಿ ಹಗ್ಗಜಗ್ಗಾಟ ನಡೆಯುತ್ತಿರುವುದು ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ

Continue Reading

Latest

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

VISTARANEWS.COM


on

ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮೇ 1ರಂದು ತೈಲ ಕಂಪನಿಗಳು ಹೊಸ ದರಗಳನ್ನು ಪ್ರಕಟಿಸಲಿವೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಪೆಟ್ರೋಲ್, ಡೀಸೆಲ್ ಜೊತೆಗೆ ಗ್ಯಾಸ್ ಬೆಲೆಯೂ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಈ ಬೆಲೆ ಏರಿಕೆಯು ಸಾಮಾನ್ಯ ಜನರ ಮನೆ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿದೆ.

ಬೆಲೆ ಏರಿಕೆಯ ಜೊತೆಗೆ ಸರ್ಕಾರವು ಹೊಸ ಎಲ್‌ಪಿಜಿ ಸಂಪರ್ಕ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈಗ ಇರುವ ಗ್ರಾಹಕರಿಗೆ ಸಮರ್ಪಕವಾಗಿ ಗ್ಯಾಸ್ ಪೂರೈಸಲು ಪೆಟ್ರೋಲಿಯಂ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ, ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿಯೂ ಮಹತ್ವದ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ 25 ದಿನ ಮತ್ತು ಗ್ರಾಮೀಣ ಪ್ರದೇಶದಲ್ಲಿ 45 ದಿನಗಳ ಅಂತರವಿದ್ದರೆ ಮಾತ್ರ ಮರು ಬುಕಿಂಗ್ (Refilling) ಮಾಡಲು ಸಾಧ್ಯವಾಗುತ್ತದೆ. ಇದರಿಂದಾಗಿ ಬೇಕಾಬಿಟ್ಟಿ ಗ್ಯಾಸ್ ಬುಕ್ ಮಾಡುವುದಕ್ಕೆ ಬ್ರೇಕ್ ಬೀಳಲಿದೆ.

ಗ್ಯಾಸ್ ವಿತರಣೆಯಲ್ಲಿ ಪಾರದರ್ಶಕತೆ ತರಲು ‘ಒಟಿಪಿ’ (OTP) ಆಧಾರಿತ ವಿತರಣಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಗ್ರಾಹಕರು ಸಿಲಿಂಡರ್ ಪಡೆಯುವಾಗ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಕೋಡ್ ನೀಡಿದ ನಂತರವೇ ವಿತರಣೆ ಮಾಡಲಾಗುತ್ತದೆ. ಪೂರೈಕೆಯ ಕೊರತೆಯಿಂದಾಗಿ ಈಗಾಗಲೇ ಬೆಂಗಳೂರಿನಂತಹ ನಗರಗಳ ಹೋಟೆಲ್‌ಗಳಲ್ಲಿ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವುದು ಒಳಿತು.

Continue Reading
Advertisement
bigbreaking52 minutes ago

ಮೋದಿ ಅಥವಾ ದೀದಿ? ಪ.ಬಂಗಾಳದ ಭವಿಷ್ಯ ನಿರ್ಧರಿಸಲಿದೆ 142 ಸೀಟು

Latest59 minutes ago

ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’: ಸಿಎಂ ಬದಲಾವಣೆ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯ ಮರ್ಮವೇನು?

ಕ್ರೀಡೆ2 hours ago

ಕಿಂಗ್ ಕೊಹ್ಲಿಗೆ ಟಕ್ಕರ್ ಕೊಟ್ಟ ಯುವ ಕಿಡಿ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಹಿಂದಿಕ್ಕಿದ ವೈಭವ್ ಸೂರ್ಯವಂಶಿ!

Latest3 hours ago

ಅಪ್ಪು ಸರ್ ಕೊಟ್ಟ ಆ ಪ್ರೋತ್ಸಾಹವೇ ನನ್ನ ಯಶಸ್ಸಿನ ಗುಟ್ಟು: ಕನ್ನಡಿಗರ ನೆಚ್ಚಿನ ‘ಅಂಜನಿಪುತ್ರ’ನ ಬಗ್ಗೆ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಹೇಳಿದ್ದೇನು?

bigbreaking3 hours ago

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

Latest4 hours ago

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

Latest4 hours ago

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

Latest6 hours ago

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರಾ? ಪರಮೇಶ್ವರ್ ಮೌನದ ಹಿಂದೆ ಅಡಗಿದೆಯೇ ದೊಡ್ಡ ರಹಸ್ಯ?

Latest7 hours ago

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ! ಆರ್ಥಿಕ ಶಿಸ್ತಿನ ಬಗ್ಗೆ ಹೆಚ್‌ಡಿಕೆ ಆತಂಕ

Latest8 hours ago

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌