ಬೆಂಗಳೂರು: ಕಾಂಗ್ರೆಸ್‌ನಲ್ಲಿ ಎರಡನೇ ಪಟ್ಟಿ ಬಿಡುಗಡೆಗೆ ದಿನಗಣನೆ ಆರಂಭವಾಗುತ್ತಿರುವಂತೆ ಅನೇಕ ಕ್ಷೇತ್ರಗಳಲ್ಲಿ ಸಾಮೂಹಿಕ ರಾಜೀನಾಮೆ, ಎಚ್ಚರಿಕೆ ಪಾಲಿಟಿಕ್ಸ್ ಆರಂಭವಾಗಿದೆ.
ಅನ್ಯ ಪಕ್ಷದಿಂದ ಬಂದವರಿಗೆ ಟಿಕೆಟ್ ಕೊಡಬೇಡಿ. ಟಿಕೆಟ್ ಕೊಟ್ರೆ ನಾವು ಸಾಮೂಹಿಕ ರಾಜೀನಾಮೆ ಕೊಡ್ತೇವೆ ಎಂದು ಎಚ್ಚರಿಕೆ ಅನೇಕ ಕಡೆಗಳಿಂದ ಕೇಳಿಬರುತ್ತಿದೆ. ಪಕ್ಷದಲ್ಲಿ ದುಡಿದ ಹಾಗೂ ಸ್ಥಳೀಯರಿಗೆ ಟಿಕೆಟ್ ಕೊಡಬೇಕು. ಇಲ್ಲವಾದಲ್ಲಿ ಸಾಮೂಹಿಕ ರಾಜೀನಾಮೆ ಕೊಡ್ತೇವೆ ಎಂಬ ಖಡಕ್ ಎಚ್ಚರಿಕೆ ನೀಡಲಾಗುತ್ತಿದೆ.
ದಾಸರಹಳ್ಳಿ ಹಾಗೂ ಶಿವಮೊಗ್ಗ ಸೇರಿದಂತೆ ಕೆಲ ಕ್ಷೇತ್ರಗಳಲ್ಲಿ ಎಚ್ಚರಿಕೆ ಪಾಲಿಟಿಕ್ಸ್ ನಡೆಯುತ್ತಿದೆ. ದಾಸರಹಳ್ಳಿ ಕ್ಷೇತ್ರದಲ್ಲಿ ಮಾಜಿ ಸಚಿವ ಎಚ್. ಎಂ. ರೇವಣ್ಣ ಹಾಗೂ ಧನಂಜಯ ಹೆಸರು ಮುನ್ನೆಲೆಗೆ ಬಂದಿದೆ. ಸ್ಥಳೀಯರಿಗೆ ಟಿಕೆಟ್ ಕೊಡಿ. ಧನಂಜಯ ಬಿಜೆಪಿಯಿಂದ ಬಂದವರುಮ ರೇವಣ್ಣನವರು ಕ್ಷೇತ್ರದವರೇ ಅಲ್ಲ, ಆದ್ದರಿಂದ ಅಲ್ಲಿ ಅವರಿಗೆ ಟಿಕೆಟ್ ಬೇಡ.
ಶಿವಮೊಗ್ಗದಲ್ಲಿ ಎಂಎಲ್‌ಸಿ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ. ಸೇರ್ಪಡೆಗೆ ಡಿಕೆಶಿ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಅವರು ಬಂದರೆ ಅವರಿಗೆ ಟಿಕೆಟ್ ನೀಡಿಬಾರದು ಎಂದು ಮೂಲ ಕಾಂಗ್ರೆಸಿಗರಿಂದ ಎಚ್ಚರಿಕೆ ನೀಡಲಾಗುತ್ತಿದೆ. ನಮ್ಮಲ್ಲಿ ಯಾರಿಗಾದರೂ ಟಿಕೆಟ್ ನೀಡಲಿ. ನೀಡದಿದ್ದರೆ ನಾವು ಸಾಮೂಹಿಕ ರಾಜೀನಾಮೆ ಕೊಡ್ತೇವೆ ಎಂದಿದ್ದಾರೆ.
ಟಿಕೆಟ್ ಕೈತಪ್ಪುವ ಆತಂಕ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಅಖಂಡ ಶ್ರೀನಿವಾಸ್ ಮೂರ್ತಿ ಮಾತುಕತೆ ನಡೆಸಿದರು. ಪುಲಕೇಶಿನಗರ ಕಾಂಗ್ರೆಸ್ ಶಾಸಕ ಶ್ರೀನಿವಾಸ ಮೂರ್ತಿ ಜತೆಗೆ ಮಾಜಿ ಸಚಿವ ಜಮೀರ್ ಅಹಮ್ಮದ್ ಸೇರಿ ಅನೇಕರು ಆಗಮಿಸಿದರು. ಕ್ಷೇತ್ರಿದಲ್ಲಿ ಶ್ರೀನಿವಾಸಮೂರ್ತಿ ಅವರಿಗೇ ಟಿಕೆಟ್ ನೀಡಬೇಕು ಎಂದು ನಿಯೋಗವು ಮನವಿ ಮಾಡಿತು.
ಇದನ್ನೂ ಓದಿ: Zamir Ahmed Khan : ಅಕ್ರಮ ಗಳಿಕೆ ಆರೋಪ; ಎಸಿಬಿ ಎಫ್‌ಐಆರ್ ರದ್ದತಿ ಕೋರಿದ ಜಮೀರ್, ತೀರ್ಪು ಕಾಯ್ದಿರಿಸಿದ ಕೋರ್ಟ್