ನವದೆಹಲಿ/ಬೆಂಗಳೂರು: ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹ್ಮದ್ ಅವರು ಗುರುವಾರ (ಮಾರ್ಚ್ 9) ನವದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿಯಲ್ಲಿರುವ ಇ.ಡಿ ಕಚೇರಿಗೆ ತೆರಳಿದ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದರು ಎಂದು ತಿಳಿದುಬಂದಿದೆ. ವಿಧಾನಸಭೆ ಚುನಾವಣೆಗೆ ಮೊದಲೇ ಜಮೀರ್ ಅಹ್ಮದ್ ಅವರು ವಿಚಾರಣೆಗೆ ಹಾಜರಾಗಿರುವುದು ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ ಎನ್ನಲಾಗಿದೆ.
ಅಕ್ರಮವಾಗಿ ಹಣ ವರ್ಗಾವಣೆ ಹಾಗೂ ಅಕ್ರಮವಾಗಿ ಆಸ್ತಿ ಸಂಪಾದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ವರದಿ ಆಧಾರದಲ್ಲಿ ಕಳೆದ ವರ್ಷ ಭ್ರಷ್ಟಾಚಾರ ನಿಗ್ರಹ ಬ್ಯೂರೋ (ACB) ಅಧಿಕಾರಿಗಳು ಜಮೀರ್ ಅಹ್ಮದ್ ಅವರ ನಿವಾಸ ಸೇರಿ ಐದು ಕಡೆ ದಾಳಿ ನಡೆಸಿದ್ದರು. ಈಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಅವರು ಇ.ಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಇದನ್ನೂ ಓದಿ: ಇತ್ತ ಜೆಡಿಎಸ್ ಜತೆಗೆ ನಂಟು; ಅತ್ತ ಜಮೀರ್ ಅಹ್ಮದ್ ಜತೆಗೂ ಮಾತು: ಕುತೂಹಲ ಕೆರಳಿಸಿದ KCR ನಡೆ