ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಸ್ಟಾರ್ ಪ್ರಚಾರಕರು ಆಗಮಿಸಿ ಅಭ್ಯರ್ಥಿಗಳ ಪರ ಪ್ರಚಾರದ ಅಲೆ ಎಬ್ಬಿಸುತ್ತಿದ್ದಾರೆ. ಇಂದು ಮೋದಿಯವರ ಹಲವು ಕಾರ್ಯಕ್ರಮಗಳು ಮತದಾರರನ್ನು ಸೆಳೆಯಲಿವೆ.
ಕೂಡ್ಲಿಗಿಯಲ್ಲಿ ಕುಸಿದು ಬಿದ್ದ ಸಿದ್ದರಾಮಯ್ಯ
ಚುನಾವಣಾ ಪ್ರಚಾರಕ್ಕಾಗಿ ವಿಜಯನಗರ ಜಿಲ್ಲೆ ಕೂಡ್ಲಿಗಿಗೆ ಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರು ಹತ್ತುವಾಗ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಜತೆಗಿದ್ದ ವೈದ್ಯರು ಹಿಡಿದುಕೊಂಡಿದ್ದು, ಉಪಚರಿಸಿದ್ದಾರೆ.
ಬೀದರ್‌ಗೆ ಆಗಮಿಸಿದ ಪ್ರಧಾನಿ
ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಬೀದರ್‌ಗೆ ಆಗಮಿಸಿದ್ದಾರೆ. ಬೀದರ್ ಹೆಲಿಪ್ಯಾಡ್‌ಗೆ ಬಂದಿಳಿದ ಅವರನ್ನು ಬಿಜೆಪಿ ನಾಯಕರು ಬರಮಾಡಿಕೊಂಡರು.
ಹುಮ್ನಾಬಾದ್‌ನಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಅವರು ಮಾತನಾಡಲಿದ್ದಾರೆ.
ಇಂದಿನಿಂದ ಮನೆ ಮನೆ ಮತದಾನ ಆರಂಭ
ಬೆಂಗಳೂರು: ಇಂದಿನಿಂದ ಬೆಂಗಳೂರು ಸೇರಿ ಹಲವೆಡೆ ವಿಧಾನಸಭಾ ಚುನಾವಣೆಗೆ ಮತದಾನ ಶುರುವಾಗುತ್ತಿದೆ. ಇಂದಿನಿಂದ ಮೇ 6ರವರೆಗೆ ಬ್ಯಾಲೆಟ್ ಮತದಾನಕ್ಕೆ ಆಯೋಗ ಅವಕಾಶ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲಚೇತನರಿಗೆ ಮನೆಯಲ್ಲೇ ಮತದಾನದ ಅವಕಾಶ ನೀಡಲಾಗಿದೆ. ಚುನಾವಣೆಯಲ್ಲಿ ಭಾಗವಹಿಸುವ ಪೊಲೀಸ್, ಚುನಾವಣೆ ಸಿಬ್ಬಂದಿಗಳೂ ಈಗ ಮತದಾನ ಮಾಡಬಹುದು.
ಅರಸೀಕೆರೆಯಲ್ಲಿ ಜೆಡಿಎಸ್ ಕಾರ್ಯಕರ್ತನಿಗೆ ಬ್ಲೇಡ್‌ನಿಂದ ಹಲ್ಲೆ
ಹಾಸನ: ಜಿಲ್ಲೆಯ ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾರೆ (assault case) ಎಂದು ಗಾಯಾಳು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮೋದಿ ಪ್ರಚಾರದ ಮೋಡಿ
ಬೆಂಗಳೂರು: ಇಂದು ಶನಿವಾರ (ಏ.29) ಪ್ರಧಾನಿ ನರೇಂದ್ರ ಮೋದಿ (PM Narendra Modi visit) ಸೇರಿದಂತೆ ಪ್ರಮುಖ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರಿಗೆ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗದಂತೆ ಕ್ರಮ ವಹಿಸಲು ಮಾರ್ಗ ಬದಲಾವಣೆ (Route Change) ಮಾಡಲಾಗುತ್ತಿದೆ.