Site icon Vistara News

Karnataka election 2023: ಕಲ್ಲಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 5 ಲಕ್ಷ ರೂಪಾಯಿ ವಶ

Karnataka election 2023 5 lakh money carried without documents seized

ವಿಜಯನಗರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ (Karnataka election 2023) ಕಾವು ಜೋರಾಗಿದ್ದು, ಜಿಲ್ಲಾಡಳಿತ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳುತ್ತಿದೆ. ಸೋಮವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂಪಾಯಿ ಹಣವನ್ನು ತಾಲೂಕಿನ ಕಲ್ಲಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಾಹನವೊಂದು ಸಂಡೂರಿನಿಂದ ಜಿಲ್ಲಾ ಕೇಂದ್ರ ಹೊಸಪೇಟೆ ಕಡೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ವಾಹನವನ್ನು ತಪಾಸಣೆ ನಡೆಸಿದಾಗ ಐದು ಲಕ್ಷ‌ ರೂಪಾಯಿ ನಗದು ಪತ್ತೆಯಾಗಿದೆ.

ಇದನ್ನೂ ಓದಿ: Karnataka Election: 2019ರ ಲೋಕಸಭಾ ಚುನಾವಣೆ ಸೋಲನ್ನು ನೆನೆದು ಎಚ್‌.ಡಿ ದೇವೇಗೌಡ ಭಾವುಕ

ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ ಪಿಎಸ್ಐ ಬಾಳನಗೌಡ, ಚಿತ್ತವಾಡ್ಗಿ ಪಿಎಸ್ಐ ಉಮೇಶ್ ಕಾಂಬ್ಳೆ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಗದು ಪತ್ತೆ ಆಗಿದೆ. ಚುನಾವಣೆ ಅಧಿಕಾರಿಗಳೂ ಸಹ ಈ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಸದ್ಯ ವಶಪಡಿಸಿಕೊಂಡಿರುವ ಹಣವನ್ನು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಗೆ ರವಾನಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಇದೇ ಕಲ್ಲಹಳ್ಳಿ ಚೆಕ್‌ಪೋಸ್ಟ್‌ನಲ್ಲಿ 2.50 ಲಕ್ಷ ರೂಪಾಯಿ ನಗದು ಪತ್ತೆಯಾಗಿತ್ತು.

Exit mobile version