ರತ್ನಾ ಮಾಮನಿ ನಾಮಪತ್ರ ಅಂಗೀಕಾರ
ಬೆಳಗಾವಿ ಜಿಲ್ಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರಗೊಂಡಿದೆ.
ಕಾಂಗ್ರೆಸ್ ತಕರಾರರು ಅರ್ಜಿಯನ್ನು ಪರಿಶೀಲಿಸಿ, ರತ್ನಾ ಮಾಮನಿ ಅವರಿಂದ ಸ್ಪಷ್ಟೀಕರಣ ಪಡೆದ ಚುನಾವಣಾ ಅಧಿಕಾರಿಗಳು ನಾಮಪತ್ರವನ್ನು ಅಂಗೀಕಾರಿಸಿದ್ದಾರೆ.
ರತ್ನಾ ಮಾಮನಿ ನಾಮಪತ್ರ ಅಂಗೀಕರಿಸುವಂತೆ ಸಿಎಂ ಕಚೇರಿಯಿಂದ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು.
ಟಿಪ್ಪು ಜಯಂತಿ ಕುರಿತು ಸಂಪುಟದಲ್ಲಿ ತೀರ್ಮಾನ
ರಾಷ್ಟ್ರೀಯ ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಟಿಪ್ಪು ಜಯಂತಿಯನ್ನು ಮರಳಿ ಆರಂಭಿಸುವಿರಾ ಎಂಬ ಪ್ರಶ್ನೆಗೆ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಸಿದ್ದರಾಮಯ್ಯರ ಈ ಹೇಳಿಕೆ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ದೆಹಲಿಗೆ ಹಿಂದಿರುಗಿದ ಅಮಿತ್ ಶಾ
ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಒಂದು ಗಂಟೆ ಸಭೆ ನಡೆಸಿದ ಬಿಜೆಪಿ ವರಿಷ್ಠ ನಾಯಕ ಅಮಿತ್ ಶಾ ದೆಹಲಿಗೆ ಹಿಂದಿರುಗಿದ್ದಾರೆ.
ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಅವರು ಚುನಾವಣಾ ತಂತ್ರಗಾರಿಕೆ ಕುರಿತು ಹಲವು ಸಭೆ ನಡೆಸಿ, ಮಾರ್ಗದರ್ಶನ ನೀಡಿದ್ದಾರೆ.
ಫೋಟೊಗೆ ಫೋಸ್ ಕೊಟ್ಟ ಕಾಂಗ್ರೆಸ್ ನಾಯಕರು
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಟ್ಟಿಗೇ ಫೋಟೊಗೆ ಫೋಸ್ ನೀಡಿ, ನಾವಿಬ್ಬರೂ ಒಟ್ಟಿಗ್ಗಿದ್ದೇವೆ ಎಂಬ ರಾಜಕೀಯ ಸಂದೇಶ ಸಾರಿದ್ದಾರೆ.
ರಾಜ್ಯ ಕಾಂಗ್ರೆಸ್ ಲ್ಲಿ ಸಿದ್ದರಾಮಯ್ಯ ಡಿಕೆಶಿ ನಡುವೆ ಭಿನ್ನಾಭಿಪ್ರಾಯ ಇದೆ ಎಂದು ಬಿಜೆಪಿ ಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇವರಿಬ್ಬರ ಈ ಫೋಟೊ ಫೋಸ್ ಮಹತ್ವ ಪಡೆದಿದೆ.
ಸಂತೋಷ್ ಬಂದಿರುವುದು ಗೊತ್ತಿಲ್ಲ
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ವರುಣ ಕ್ಷೇತ್ರಕ್ಕೆ ಭೇಟಿ ನೀಡಿರುವುದು ತಮಗೆ ಗೊತ್ತಿಲ್ಲ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹೇಳಿದ್ದಾರೆ.
ಅವರು ನನ್ನನ್ನು ಸಂಪರ್ಕಿಸಿಲ್ಲ, ನಾನೇ ಅವರನ್ನು ಮುಂದೆ ಸಂಪರ್ಕಿಸಿ, ಮಾರ್ಗದರ್ಶನ ಪಡೆಯುತ್ತೇನೆ ಎಂದು ಅವರು ಹೇಳಿದ್ದಾರೆ.