Site icon Vistara News

Karnataka Election 2023: ಬಿಜೆಪಿ, ಸಿಪಿಎಂ ನಾಯಕರ ಮೇಲೆ ಹಲ್ಲೆ, ಪ್ರಕರಣ ದಾಖಲು

Karnataka Election 2023, attacked on BJP and CPM candidate

#image_title

ಚಿತ್ರದುರ್ಗ, ಕರ್ನಾಟಕ: ಚುನಾವಣೆ ಸಂಬಂಧ ಗಲಾಟೆಗಳಲ್ಲಿ ಅಲ್ಲಲ್ಲಿ ವರದಿಯಾಗಿವೆ. ಅದೇ ರೀತಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೆಳ್ಳಘಟ್ಟ ಗ್ರಾಮದಲ್ಲಿ ನಡೆದ ಗಲಾಟೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಅವರಿಗೆ ಗಾಯಗಳಾಗಿವೆ. ಕಾಂಗ್ರೆಸ್ ಕಾರ್ಯಕರ್ತರು ಈ ದಾಳಿಯನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ(Karnataka Election 2023).

ನಿನ್ನೆ ರಾತ್ರಿ 10:30ರ ಸಮಾರಿಗೆ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಈ ದಾಲಿ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಣಾಂತಿಕ ದಾಳಿ ನಡೆದಿದೆ ಎನ್ನಲಾಗಿದೆ. ಗ್ರಾಮದ ತೂರುವನೂರು ರಸ್ತೆ ಮಧ್ಯದಲ್ಲಿ ಶ್ರೀನಿವಾಸ್ ಕಾರಿನ ಮೇಲೆ ದಾಳಿ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರು ಮಚ್ಚು, ಚೂರಿ, ರಾಡುಗಳಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.

ಶ್ರೀನಿವಾಸ್ ಹೆಂಡತಿ ಕಾರು ಪೂರ್ತಿ ಪುಡಿ ಪುಡಿಯಾಗಿದೆ. ಶ್ರೀನಿವಾಸ್ ತಕ್ಷಣ ತುರುವನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗಿದೆ. ಈ ದಾಳಿಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಮತ್ತು ಬಾಳೆ ಮಂಡಿ ರಾಮದಾಸ್ ಅವರು ತುರುವನೂರು ಪೊಲೀಸ್ ಠಾಣೆ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರು. ತುರುವನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಿಪಿಐಎಂ ಅಭ್ಯರ್ಥಿಗಳ ಮೇಲೆ ದಾಳಿ

ಬಾಗೇಪಲ್ಲಿ ಸಿಪಿಐಎಂ ಅಭ್ಯರ್ಥಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಸಿಪಿಐಎಂ ಅಭ್ಯರ್ಥಿ ಡಾ. ಅನಿಲ್ ಕುಮಾರ್ ಮೇಲೆ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆನೇಕಲ್ ಮೂಲದ ಮೂವತ್ತು ಜನರ ಮೇಲೆ ದೂರು ದಾಖಲಾಗಿದೆ.

ಇದನ್ನೂ ಓದಿ: Karnataka Election 2023: ಚುನಾವಣೆ ಅಶಯ: ಕಳೆಯಿಲ್ಲದ ಕರಾವಳಿ ಕರ್ನಾಟಕ ಹೊಳೆಯುವುದು ಹೇಗೆ?

ಬಿಜೆಪಿ ಅಭ್ಯರ್ಥಿ ಮುನಿರಾಜು ಕೊಲೆ ಸಂಚು ರೂಪಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಆರೋಪಿಗಳು ಮಾರಕಾಸ್ತ್ರಗಳ ಬ್ಯಾಗ್‌ನಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದರು ಎನ್ನಲಾಗಿದೆ. ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಿಪಿಐಎಂ ಕಾರ್ಯಕರ್ತರು. 10ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಗೇಪಲ್ಲಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಾಗೇಪಲ್ಲಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದ ಸಿಪಿಐಎಂ ಕಾರ್ಯಕರ್ತರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು. ರಾತ್ರಿಯಿಡೀ ಧರಣಿ ನಡೆಸಿ ಆಕ್ರೋಶ ಹೋರ ಹಾಕಿದ ಪ್ರತಿಭಟನಾಕಾರರು.

Exit mobile version