ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬದಲಾದ ಹವಾ, ಕಾಂಗ್ರೆಸ್‌ಗೆ ಲಾಭ? ಬಜರಂಗದಳ ಎಫೆಕ್ಟ್‌ ಸಸ್ಪೆನ್ಸ್‌ - Vistara News

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಸಮೀಕ್ಷೆ: ಬದಲಾದ ಹವಾ, ಕಾಂಗ್ರೆಸ್‌ಗೆ ಲಾಭ? ಬಜರಂಗದಳ ಎಫೆಕ್ಟ್‌ ಸಸ್ಪೆನ್ಸ್‌

Karnataka Election 2023: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮತದಾರರ ಒಲವು ಬದಲಾಗಿರೋ ಲಕ್ಷಣ ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕೋಮು ದ್ವೇಷದ ವಿಚಾರಗಳು ಹಾಗೂ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಜನರಿಗೆ ಬೇಸರವಿದೆ. ಬಿಜೆಪಿ ಭದ್ರಕೋಟೆಯನ್ನು ಭೇದಿಸಲು ಈ ಬಾರಿ ಕಾಂಗ್ರೆಸ್‌ಗೆ ಉತ್ತಮ ಅವಕಾಶ ಇದೆ. ಆದರೆ ಮತದಾನ ಸಮೀಪಿಸುತ್ತಿದ್ದಂತೆ ಉದ್ಭವಿಸಿರುವ ಬಜರಂಗದಳ ವಿವಾದ ಬಿಜೆಪಿಗೆ ವರವಾಗಬಹುದೆ ಎಂಬ ಬಗ್ಗೆ ಕುತೂಹಲ ಮೂಡಿದೆ.

VISTARANEWS.COM


on

Dakshina Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜೇಶ್ ಪುತ್ತೂರು, ವಿಸ್ತಾರ ನ್ಯೂಸ್, ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 2013ರ ಇತಿಹಾಸ ಮರುಕಳಿಸುವ ಸಾಧ್ಯತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆಗ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಹಾಗಂತ ಈ ಬಾರಿ ಏಳು ವಿಧಾನಸಭಾ ಕ್ಷೇತ್ರ ಅಲ್ಲದೇ ಇದ್ರೂ ಕನಿಷ್ಠ 4ರಿಂದ 5 ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಬಹುದಾಗಿದೆ. ಜಿಲ್ಲೆಯಲ್ಲಿ ನಡೆದ ಕೋಮು ದ್ವೇಷದ ಕೆಲ ಸಂಗತಿಗಳು, ಪ್ರವೀಣ್ ನೆಟ್ಟಾರು ಹಾಗೂ ಫಾಝಿಲ್ ಕೊಲೆ ಪ್ರಕರಣದಲ್ಲಿ ಸರ್ಕಾರ ನಡೆದುಕೊಂಡ ರೀತಿ, ಬಳಿಕ ಹಿಜಾಬ್, ಆಝಾನ್, ಧರ್ಮ ದಂಗಲ್, ಮೀಸಲಾತಿ ರದ್ದತಿ ಇತ್ಯಾದಿ ವಿಚಾರಗಳು ಈ ಬಾರಿ ಚುನಾವಣೆಯ ಫಲಿತಾಂಶವನ್ನು ನಿರ್ಣಯಲಿಸಲಿವೆ. ಎಲ್ಲಾ ವಿಚಾರದಲ್ಲೂ ಮೌನವಹಿಸಿದ್ದ ಅಲ್ಪಸಂಖ್ಯಾತ ವರ್ಗದವರು ಚುನಾವಣೆಯಲ್ಲೇ ಉತ್ತರ ನೀಡುವ ಸಂಕಲ್ಪ ಮಾಡಿದ್ದಾರೆ. ಮತದಾನದಿಂದ ದೂರ ಉಳಿಯುತ್ತಿದ್ದವರೆಲ್ಲಾ ಈ ಬಾರಿ ಹೆಚ್ಚಿನ ಮತದಾನ ಮಾಡುವ ಸಂಕಲ್ಪ ಕೂಡಾ ಮಾಡಿದ್ದಾರೆ. ಜೊತೆಗೆ ಅಲ್ಪ ಸ್ವಲ್ಪ ಮತ ಪಡೆಯುತ್ತಿದ್ದ ಕಮ್ಯುನಿಸ್ಟ್ ಪಕ್ಷ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬಹಿರಂಗ ಬೆಂಬಲ ಸೂಚಿಸಿದೆ. ಹಾಗಾಗಿ, ಬಿಜೆಪಿಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಹಾಗಿದ್ದೂ, ಕೊನೆಯ ನಾಲ್ಕೈ ದಿನಗಳಲ್ಲಿನ ಬೆಳವಣಿಗೆಗಳ ಪರಿಣಾಮವನ್ನು ಊಹಿಸುವುದು ಕಷ್ಟ(Karnataka Election 2023). ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವುದು ಸಂಘ ಪರಿವಾರದ ಕಾರ್ಯಕರ್ತರನ್ನು ಕೆರಳಿಸಿದೆ. ಸಂಘ ಪರಿವಾರದ ಪ್ರಯೋಗಶಾಲೆ ಎನ್ನಲಾಗುವ ದಕ್ಷಿಣ ಕನ್ನಡದಲ್ಲಿ ಇದರ ಪರಿಣಾಮ ಎಷ್ಟು ಎನ್ನುವುದು ಕುತೂಹಲ ಕೆರಳಿಸಿದೆ.

ಮಂಗಳೂರು: ಅನಾಯಾಸವಾಗಿ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್

ಹಿಂದೆ ಉಳ್ಳಾಲ ಕ್ಷೇತ್ರವಾಗಿದ್ದ ಮಂಗಳೂರು ಕ್ಷೇತ್ರವು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ. 2006ರ ಉಪಚುನಾವಣೆಯಲ್ಲಿ ತಂದೆ ಯು.ಟಿ. ಫರೀದ್ ಅವರ ಸ್ಥಾನ ತುಂಬಿದವರು ಯು.ಟಿ. ಖಾದರ್. 2008ರಲ್ಲಿ ಕ್ಷೇತ್ರ ಪುನರ್ವಿಂಗಡನೆಯಾಗಿ ವಿಟ್ಲ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳು ಈ ಕ್ಷೇತ್ರದ ಪಾಲಾಗಿತ್ತು. ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳು ಉಳ್ಳಾಲ ವಿಧಾನಸಭಾ ಕ್ಷೇತ್ರದ ಜೊತೆ ಸೇರಿ ಮಂಗಳೂರು ವಿಧಾನಸಭಾ ಕ್ಷೇತ್ರ ರಚನೆ ಆಗಿತ್ತು. ಆರಂಭದಿಂದಲೂ ಮಂಗಳೂರು ಕ್ಷೇತ್ರದಲ್ಲಿ ಬಿಗಿ ಹಿಡಿತ ಸಾಧಿಸಿರುವ ಯು.ಟಿ. ಖಾದರ್ ಅವರನ್ನು ಕಟ್ಟಿ ಹಾಕಲು ಇಲ್ಲಿ ಬಿಜೆಪಿಗೆ ಸಮರ್ಥ ಅಭ್ಯರ್ಥಿ ಇಲ್ಲ ಅನ್ನೋದೇ ಕಾಂಗ್ರೆಸ್ ಪ್ಲಸ್ ಪಾಯಿಂಟ್ . ಸತೀಶ್ ಕುಂಪಲ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಳೆದ ಚುನಾವಣೆಯಲ್ಲಿ ಗೆಲುವಿನ ಅಂತರ ಕಡಿಮೆ‌ ಆಗಿತ್ತಾದ್ರೂ ಅದು ಈ ಬಾರಿ ಮತ್ತೆ‌ ಏರಿಕೆಯಾಗುವ ನಿರೀಕ್ಷೆ‌ ಇದೆ. ಈ ನಡುವೆ ಎಸ್‌ಡಿಎಫ್‌ಐ ಪ್ರಭಾವಿ ನಾಯಕ ರಿಯಾಜ್‌ ಫರಂಗಿಪೇಟೆ ಇಲ್ಲಿ ಸ್ಪರ್ಧೆಗಿಳಿದಿದ್ದಾರೆ. ಅವರು ಮುಸ್ಲಿಮರ ಎಷ್ಟು ಮತ ಸೆಳೆಯುತ್ತಾರೆ ಎನ್ನುವುದರ ಮೇಲೆ ಯು ಟಿ ಖಾದರ್‌ ಅವರ ಗೆಲುವಿನ ಅಂತರ ನಿಂತಿದೆ.

ಕಳೆದ ಬಾರಿಯ ಫಲಿತಾಂಶ
ಯು.ಟಿ. ಖಾದರ್ (ಕಾಂಗ್ರೆಸ್‌): 80813, ಸಂತೋಷ್ ಕುಮಾರ್ ರೈ (ಬಿಜೆಪಿ): 61074, ಗೆಲುವಿನ ಅಂತರ: 19739

ಮಂಗಳೂರು ನಗರ ದಕ್ಷಿಣ: ಬಿಜೆಪಿ ಅಭ್ಯರ್ಥಿಗೆ ಕಾಂಗ್ರೆಸ್ ಟಫ್ ಫೈಟ್

ಹಿಂದೆ ಮಂಗಳೂರು ವಿಧಾನಸಭಾ ಕ್ಷೇತ್ರವಾಗಿದ್ದ ಕ್ಷೇತ್ರ ಈಗ ಮಂಗಳೂರು ನಗರ ದಕ್ಷಿಣ ಕ್ಷೇತ್ರವಾಗಿ ಬದಲಾಗಿದೆ. ಬಹುತೇಕ ಬಿಜೆಪಿ ಪ್ರಾಬಲ್ಯವಿದೆ. 2013ರಲ್ಲಿ ಕಾಂಗ್ರೆಸ್ ಗೆದ್ದಿತ್ತು. ಕೆಎಎಸ್ ಅಧಿಕಾರಿಯಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರೂ ಆಗಿದ್ದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಮೂಲಕ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಕೆಲಸ ಮಾಡಿದ್ದರೂ ಕಳೆದ ಚುನಾವಣೆಯಲ್ಲಿ ಬಿಜೆಪಿಯ ಹೊಸ ಅಭ್ಯರ್ಥಿ ವೇದವ್ಯಾಸ ಕಾಮತ್ ಎದುರು ಲೋಬೋ ಸೋಲನುಭವಿಸಿದರು. ಈ ಬಾರಿ ಮತ್ತೆ ವೇದವ್ಯಾಸ ಕಾಮತ್ ಹಾಗೂ ಜೆ.ಆರ್ ಲೋಬೋ ನಡುವೆ ನೇರ ಹಣಾಹಣಿ ನಡೆಯಲಿದೆ. ಕಳೆದ ಐದು ವರ್ಷಗಳಲ್ಲಿ ಮಂಗಳೂರು ನಗರಕ್ಕೆ ದೊರೆತ ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನ ವೇದವ್ಯಾಸ್ ಕಾಮತ್ ಅವರಿಗೆ ಪ್ಲಸ್ ಪಾಯಿಂಟ್ ಆಗಬಹುದು. ಸೋತರೂ ಕ್ಷೇತ್ರದಲ್ಲಿ ಓಡಾಡಿ ಜನರ ಸಮಸ್ಯೆಗಳನ್ನು ಆಲಿಸುವ ಮೂಲಕ ಜೆ.ಆರ್.ಲೋಬೋ ಜನರ ಜೊತೆಗಿದ್ದೇನೆ ಎಂದು ತೋರಿಸಿ ಕೊಟ್ಟಿದ್ದಾರೆ. ಹೀಗಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಇಲ್ಲಿ ಗೆಲ್ಲುವ ಅಭ್ಯರ್ಥಿ ಅಂತ ಕಾಣಿಸಿಕೊಂಡ್ರೂ ಬಿಜೆಪಿಯ ವೇದವ್ಯಾಸ ಕಾಮತ್ ಅವರಿಗೆ ತೀವ್ರ ಸ್ಪರ್ಧೆ ಇದೆ ಎನ್ನಬಹುದು.

ಕಳೆದ ಬಾರಿಯ ಫಲಿತಾಂಶ
ಜೆ.ಆರ್.ಲೋಬೋ (ಕಾಂಗ್ರೆಸ್‌): 70470, ವೇದವ್ಯಾಸ ಕಾಮತ್ (ಬಿಜೆಪಿ): 86545, ಗೆಲುವಿನ ಅಂತರ: 16075

ಮಂಗಳೂರು ನಗರ ಉತ್ತರ: ಜೆಡಿಎಸ್ ಪ್ರದರ್ಶನ ಮೇಲೆ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿ ಗೆಲುವು ನಿರ್ಧಾರ!

2008ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಸೇರ್ಪಡೆಗೊಂಡು ಮಂಗಳೂರು ನಗರ ಉತ್ತರ ಕ್ಷೇತ್ರವಾಗಿ ಹೆಸರು ಪಡೆದುಕೊಂಡಿದೆ. ಜಿಲ್ಲೆಯ ಅತೀ ಸೂಕ್ಷ್ಮ ಮತಗಟ್ಟೆಗಳು ಇಲ್ಲಿವೆ. ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ನಿರಂತರ ಎರಡು ಬಾರಿ ಆಯ್ಕೆಯಾಗಿದ್ದರು. ಆದರೆ ಒಮ್ಮೆ ಕ್ಷೇತ್ರ ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿತ್ತು ಹಾಗೂ ಮತ್ತೊಮ್ಮೆ ಆಯ್ಕೆಯಾದಾಗ ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿತ್ತು. ಬಿಜೆಪಿಯು ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರಿಗೆ ಮತ್ತೆ ಟಿಕೆಟ್ ನೀಡಿದೆ. ಆದರೆ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮೊಯಿದಿನ್ ಬಾವ ಜೆಡಿಎಸ್ ಮೂಲಕ ಸ್ಪರ್ಧಿಸಿದ್ದಾರೆ. ಅಲಿ ಸಮಾಜ ಸೇವೆ ಮೂಲಕ ಹೆಸರುವಾಸಿಯಾಗಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ನಡೆದ ಫಾಸೀಲ್ ಹತ್ಯೆಯ ವೇಳೆ ಶಾಸಕ ಭರತ್ ಶೆಟ್ಟಿ ಅವರು ನಡೆದುಕೊಂಡ ರೀತಿ ಕ್ಷೇತ್ರದ ಜನರಲ್ಲಿ ತೀವ್ರವಾದ ಅಸಮಾಧಾನ ಮೂಡಿಸಿದೆ. ಅಭಿವೃದ್ಧಿ ವಿಚಾರದಲ್ಲೂ ಕೊನೆಯ ಕ್ಷಣದಲ್ಲಿ ಫೀಲ್ಡ್ ಗೆ ಇಳಿದ ಭರತ್ ಶೆಟ್ಟಿ ಅವರ ಬಗ್ಗೆ ಸ್ವಪಕ್ಷೀಯರಲ್ಲೇ ಅಸಮಧಾನ ಇದೆ. ಹೀಗಾಗಿ ಈ ಬಾರಿ ಮಂಗಳೂರು ನಗರ ಉತ್ತರದಲ್ಲಿ ತೀವ್ರ ಪೈಪೋಟಿ ಕಂಡು ಬಂದಿದೆ. ಜೆಡಿಎಸ್ ಅಭ್ಯರ್ಥಿ ಎಷ್ಟು ಮತ ಪಡೆಯುತ್ತಾರೆ ಅನ್ನೋ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.

ಕಳೆದ ಬಾರಿಯ ಫಲಿತಾಂಶ: ಮೊಯಿದ್ದೀನ್ ಬಾವ(ಕಾಂಗ್ರೆಸ್‌): 72000, ಡಾ.ವೈ.ಭರತ್ ಶೆಟ್ಟಿ (ಬಿಜೆಪಿ): 98648, ಗೆಲುವಿನ ಅಂತರ: 26648

ಮೂಡುಬಿದರೆ : ಜೆಡಿಎಸ್ ತನ್ನ ಮತಗಳನ್ನು ಪಡೆದರೆ ಕಾಂಗ್ರೆಸ್ ಗೆಲುವು ಸಲೀಸು!

ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯ ಕ್ಷೇತ್ರವಾಗಿತ್ತು. 2018ರಲ್ಲಿ ಈ ಕೋಟೆಯನ್ನು ಬಿಜೆಪಿಯ ಉಮಾನಾಥ ಕೋಟ್ಯಾನ್ ಭೇದಿಸಿದರು. ಆದರೆ, ಮತ್ತೆ ಜೆಡಿಎಸ್ ಇಲ್ಲಿ ಸಕ್ರಿಯವಾಗಿದೆ. ಅಮರನಾಥ ಶೆಟ್ಟಿ ಅವರ ಮಗಳು ಡಾ. ಅಮರಶ್ರೀ ಶೆಟ್ಟಿ ಕಣಕ್ಕೆ ಇಳಿದಿದ್ದಾರೆ. ಐದು ವರ್ಷಗಳ ಹಿಂದೆಯೇ ಅಭಯಚಂದ್ರ ಜೈನ್ ಮುಂದಿನ ಅಭ್ಯರ್ಥಿ ಮಿಥುನ್ ರೈ ಅಂತ ಘೋಷಣೆ ಮಾಡಿದ್ದರು. ಹೀಗಾಗಿ ಐದು ವರ್ಷಗಳಿಂದ ಮಿಥುನ್ ರೈ ಮೂಡಬಿದ್ರೆ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಶಾಸಕರಾಗಿ ಉಮಾನಾಥ ಕೋಟ್ಯಾನ್ ಕೂಡ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸರಳ ಸಜ್ಜನಿಕೆಯ ಉಮಾನಾಥ ಕೊಟ್ಯಾನ್ ವಿಚಾರವಾಗಿ ಕ್ಷೇತ್ರದ ಜನರಲ್ಲಿ ಒಳ್ಳೆಯ ಅಭಿಪ್ರಾಯ ಇದೆ‌. ಆದರೆ ಜೆಡಿಎಸ್ ಸಾಂಪ್ರದಾಯಿಕ ಮತಗಳು ಮತ್ತೆ ಜೆಡಿಎಸ್ ನ ಅಮರಶ್ರೀ ಪಾಲಾದ್ರೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರಿಗೆ ಗೆಲುವಾಗುವ ಸಾಧ್ಯತೆ ಇದೆ. ಒಂದು ವೇಳೆ ಜೆಡಿಎಸ್ ಇಲ್ಲಿ ಮತ ವಿಭಜನೆ ಮಾಡದೇ ಇದ್ದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿ ನಡುವೇ ಟೈಟ್ ಫೈಟ್ ಎದುರಾಗಲಿದೆ.

ಕಳೆದ ಬಾರಿಯ ಫಲಿತಾಂಶ
ಅಭಯ ಚಂದ್ರ ಜೈನ್ (ಕಾಂಗ್ರೆಸ್): 57645, ಉಮಾನಾಥ ಕೊಟ್ಯಾನ್ (ಬಿಜೆಪಿ): 87444, ಗೆಲುವಿನ ಅಂತರ: 29799

ಬೆಳ್ತಂಗಡಿ: ಬಿಜೆಪಿಗೆ ಅಂಡರ್ ಕರೆಂಟ್ ಶಾಕ್ ಹೊಡೆಯುವ ಸಾಧ್ಯತೆ

ಳೆದ ಚುನಾವಣೆಯಲ್ಲಿ ಬಿಜೆಪಿಗೆ ಎಂಟ್ರಿಕೊಟ್ಟ ಯುವ ನಾಯಕ ಹರೀಶ್ ಪೂಂಜಾ ಕಾಂಗ್ರೆಸ್‌ನ ವಸಂತ ಬಂಗೇರ ಅವರನ್ನು ಭಾರೀ ಅಂತರದಿಂದ ಸೋಲಿಸುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದ್ದರು. ಈ ಬಾರಿ ವಸಂತ ಬಂಗೇರ ಕಣದಿಂದ ಹಿಂದೆ ಸರಿದಿದ್ದು, ಅವರ ಜಾಗವನ್ನು ಯುವ ನಾಯಕ ರಕ್ಷಿತ್ ಶಿವರಾಂ ತುಂಬಿದ್ದಾರೆ. ಕಳೆದ ಮೂರುವರೆ ವರ್ಷದಿಂದ ಕ್ಷೇತ್ರದಲ್ಲಿ ಓಡಾಡಿ ಇಮೇಜ್ ಹೆಚ್ಚಿಸಿಕೊಂಡಿರೋ ರಕ್ಷಿತ್ ಶಿವರಾಂ ಸದ್ಯ ಹರೀಶ್ ಪೂಂಜಾ ಅವರಿಗೆ ಸವಾಲೊಡ್ಡಿದ್ದಾರೆ. ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಮಾಡಿದ್ದು ಬಿಟ್ಟರೆ ಬೇರೇನೂ ದೊಡ್ಡ ಕೊಡುಗೆ ನೀಡಿಲ್ಲ. ಹಿಂದುತ್ವವನ್ನೇ ಅಸ್ತ್ರಮಾಡಿಕೊಂಡ ಹರೀಶ್ ಪೂಂಜಾ ಸದ್ಯ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರನ್ನೇ ಎದುರು ಹಾಕಿಕೊಂಡಿದ್ದಾರೆ. ದೇವಸ್ಥಾನದ ಅಭಿವೃದ್ಧಿಗೆ ರಕ್ಷಿತ್ ಶಿವಾರಂ ನೀಡುವ ದೇಣಿಗೆ ಪಡೆಯದಂತೆ ದೇವಸ್ಥಾನಗಳ ಆಡಳಿತ ಮಂಡಳಿಗೆ ಒತ್ತಾಯ ಹೇರಿದ್ದು, ದೇವಸ್ಥಾನದ ಕಾರ್ಯಕ್ರಮಗಳಿಗೆ ಆಹ್ವಾನ ನೀಡದಂತೆ ಮಾಡಿದ್ದು, ಶಾಲಾ ಮಕ್ಕಳಿಗೆ ಪುಸ್ತಕ ಹಂಚಿಕೆಗೂ ಅಡ್ಡಿಪಡಿಸಿದ್ದು ಎಲ್ಲವೂ ಹರೀಶ್ ಪೂಂಜಾ ವಿರುದ್ದ ಒಂದಷ್ಟು ಜನರಿಗೆ ಅಸಮಧಾನ ಮೂಡಿಸಿತ್ತು. ಆದರೆ ಬಿಲ್ಲವ ಸಮುದಾಯದವರ ವಿರೋಧದ ನಡುವೆಯೂ ವೇಣೂರು ದೇವಸ್ಥಾನದ ಬ್ರಹ್ಮಕಲಶಕ್ಕೆ ಪಠ್ಯಪುಸ್ತಕ ಸಮಿತಿಯ ರೋಹಿತ್ ಚಕ್ರತೀರ್ಥ ಅವರನ್ನು ಕರೆಸಿ ಸನ್ಮಾನಿಸಿದ್ದು ಬಿಲ್ಲವರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಈ ಬಾರಿ ಗೆಲ್ಲುವ ಅಭ್ಯರ್ಥಿ ಹರೀಶ್ ಪೂಂಜಾ ಅಂತ ಅನಿಸಿದ್ದರೂ ಬೆಳ್ತಂಗಡಿಯಲ್ಲಿನ ಜನಮನದ ಅಂಡರ್ ಕರೆಂಟ್ ಹರೀಶ್ ಪೂಂಜಾಗೆ ಶಾಕ್ ನೀಡಿದರೂ ನೀಡಬಹುದು.

ಕಳೆದ ಬಾರಿಯ ಫಲಿತಾಂಶ
ವಸಂತ ಬಂಗೇರ (ಕಾಂಗ್ರೆಸ್): 74530 ಮತ್ತು ಹರೀಶ್ ಪೂಂಜಾ(ಬಿಜೆಪಿ): 98417, ಗೆಲುವಿನ ಅಂತರ: 23880

ಬಂಟ್ವಾಳ: ಬಿಜೆಪಿ- ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ

ಬಂಟ್ವಾಳ ವಿಧಾನಸಭಾ‌ಕ್ಷೇತ್ರದಲ್ಲೂ ಈ ಬಾರಿ ಗೆಲುವು ಯಾರಿಗಾಗಬಹುದು ಅಂತ ಹೇಳೋದು ಕಷ್ಟ. ಯಾಕೆಂದರೆ 9ನೇ ಬಾರಿ ತನ್ನ ಅದೃಷ್ಟ ಪರೀಕ್ಷೆಗೆ ಇಳಿದಿರೋ ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ ರೈ ಇದು ತಮ್ಮ ಕೊನೇ ಚುನಾವಣೆ ಅಂತ ಸೆಂಟಿಮೆಂಟ್ ಕಾರ್ಡ್ ಪ್ಲೇ ಮಾಡಿದ್ದಾರೆ. ಜೊತೆಗೆ ಕಳೆದ ಚುನಾವಣೆಯಲ್ಲಿ ತಮ್ಮ ವಿರುದ್ಧ ಅಪಪ್ರಚಾರ ಮಾಡಿ ಸೋಲಿಸಿದ್ರು ಅಂತ ಜನರಿಗೆ ಸಾಬೀತುಪಡಿಸಲು ಹಲವು ದೈವಗಳ ಮುಂದೆ ಅಪಪ್ರಚಾರ ಮಾಡಿದವರನ್ನು ಆಣೆ ಪ್ರಮಾಣಕ್ಕೆ ಕರೆದು ಸವಾಲೊಡ್ಡಿದ್ದರು. ಇತ್ತ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಕೂಡಾ ಜನ ಮೆಚ್ಚುಗೆ ಪಡೆದಿದ್ದಾರೆ. ಎಲ್ಲಾ ಸಮುದಾಯದವರೊಂದಿಗೆ ಉತ್ತಮ ಸಂಬಂಧ ಇರಿಸಿಕೊಂಡಿರುವ ರಾಜೇಶ್ ನಾಯ್ಕ್ ಕಟ್ಟಾ ಹಿಂದುತ್ವವಾದಿಯೂ ಅಲ್ಲ. ತಮ್ಮ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಕ್ಷೇತ್ರದಲ್ಲಿ ಶಾಂತಿ ಸಾಮರಸ್ಯವನ್ನೂ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರಮಾನಾಥ ರೈ ಅವರಿಗೆ ಅನುಕಂಪ ಹಾಗೂ ಅವರ ಅವಧಿಯ ಅಭಿವೃದ್ಧಿ ಮತಕೇಳಲು ಅಸ್ತ್ರವಾಗಿದ್ದರೆ; ರಾಜೇಶ್ ನಾಯ್ಕ್ ಅವರಿಗೂ ಇದೇ ಅಸ್ತ್ರವಾಗಿದೆ. ಹಾಗಾಗಿ ರಮಾನಾಥ ರೈ ಮತ್ತು ರಾಜೇಶ್‌ ನಾಯ್ಕ ತೀವ್ರ ಹಣಾಹಣಿ ಇದೆ.

ಕಳೆದ ಬಾರಿಯ ಫಲಿತಾಂಶ
ರಮಾನಾಥ ರೈ ( ಕಾಂಗ್ರೆಸ್ )81665 ರಾಜೇಶ್ ನಾಯ್ಕ್ ( ಬಿಜೆಪಿ )97802 ಗೆಲುವಿನ ಅಂತರ : 16137

ಪುತ್ತೂರು: ಬಿಜೆಪಿಗೆ ಬಂಡಾಯದ ಬಿಸಿ, ಸಿಗುವುದೇ ಕಾಂಗ್ರೆಸ್‌ಗೆ ಗೆಲುವಿನ ಖುಷಿ?

ಪುತ್ತೂರು ಬಿಜೆಪಿಯ ಶಕ್ತಿ ಕೇಂದ್ರ. ಅದೀಗ ಒಡೆದ ಮನೆಯಾಗಿದೆ. ಮನೆಯೊಂದು ಮೂರು ಬಾಗಿಲಾಗಿದ್ದು, ಮೂವರು ಬಿಜೆಪಿಗರೇ ಚುನಾವಣಾ ಕಣದಲ್ಲಿದ್ದಾರೆ. ಹೀಗಾಗಿ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್ ಗೆಲ್ಲುವ ಹೆಚ್ಚು ಅವಕಾಶಗಳು ಸೃಷ್ಟಿಯಾಗಿವೆ. ಬಿಜೆಪಿಯಿಂದ ಮುನಿಸಿಕೊಂಡು ಕಾಂಗ್ರೆಸ್ ಸೇರಿ ಟಿಕೆಟ್ ಪಡೆದ ಅಶೋಕ್ ರೈಗೆ ಕೈ ಪಕ್ಷದ ಸಾಂಪ್ರದಾಯಿಕ ಮತ ಹಾಗೂ ತಮ್ಮ ವಿಶ್ವಾಸಿಕ ಕಾರ್ಯಕರ್ತರು ಹಾಗೂ ಸಾವಿರಾರು ಫಲಾನುಭವಿಗಳ ಬೆಂಬಲದ ನಿರೀಕ್ಷೆಯಲ್ಲಿದ್ದಾರೆ. ಇನ್ನು ಬಿಜೆಪಿಯಿಂದ ಸಿಡಿದು ಬಂಡಾಯವೆದ್ದಿರುವ ಹಿಂದೂ ಸಂಘಟನೆ ಮುಖಂಡ ಅರಣ್ ಕುಮಾರ್ ಪುತ್ತಿಲ ಬಿಜೆಪಿ‌ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಬಿಜೆಪಿ ಅಧಿಕೃತ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಗೆ ಸದ್ಯ ಬಿಜೆಪಿಯ ಕಟ್ಟಾ ಬೆಂಬಲಿಗರ ಬೆಂಬಲ ಇದೆ. ಬಿಜೆಪಿ ಮತಗಳು ಹೀಗೆ ಮೂರು ಹೋಳಾಗಿ ಒಡೆದು ಹೋಗುವ ಸಾಧ್ಯತೆ ಇದೆ. ಸದ್ಯ ಈ ಕ್ಷೇತ್ರದಲ್ಲಿ ಬಿಜೆಪಿಯ ಭಿನ್ನಾಭಿಪ್ರಾಯ ಕಾಂಗ್ರೆಸ್ ಪಕ್ಷಕ್ಕೆ ಗೆಲುವಿನ ಹಾದಿ ಸುಲಭವಾಗಿಸಿದೆ.
ಬಂಡಾಯದ ಬಿಸಿ: ಈ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟುತ್ತಿದೆ. ಒಕ್ಕಲಿಗರಿಗೇ ಟಿಕೇಟ್ ನೀಡಲು ತೀರ್ಮಾನಿಸಿ ಒಕ್ಕಲಿಗರು ಬಹು ಸಂಖ್ಯಾತರಾಗಿರೋ ಸುಳ್ಯ ಕ್ಷೇತ್ರದ ಆಶಾ ತಿಮ್ಮಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಪರಿಣಾಮವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಟಿಕೇಟ್ ನಿರೀಕ್ಷೆಯಲ್ಲಿದ್ದ ಹಿಂದೂ ಸಂಘಟನೆಯ ಮುಖಂಡ ಅರುಣ್ ಪುತ್ತಿಲ್ಲ ಸಿಡಿದೆದ್ದಿದ್ದಾರೆ. ಟಿಕೆಟ್ ಘೋಷಣೆಯಾಗಿ ಎರಡೇ ಗಂಟೆಯಲ್ಲಿ ಅವರು ಪಕ್ಷೇತರರಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಂಡರು. ಪುತ್ತಿಲ ಅವರ ಬೆನ್ನಿಗೆ ಸಾವಿರಾರು ಕಾರ್ಯಕರ್ತರು ನಿಂತಿದ್ದಾರೆ. ಹಾಗಾಗಿ ಬಿಜೆಪಿಗೆ ಈ ಕ್ಷೇತ್ರದಲ್ಲಿ ಬಿಂಡಾಯದ ಬಿಸಿ ತಗುಲಿದೆ. ಸಂಘ ಪರಿವಾರದ ಹಿರಿಯ ಮುಖಂಡರು, ಯೋಗಿ ಆದಿತ್ಯನಾಥ ಮುಂತಾದ ಪ್ರಭಾವಿ ನಾಯಕರು ಈ ಕ್ಷೇತ್ರದಲ್ಲಿ ಸುತ್ತಾಡಿ ಬಿಜೆಪಿ ಮತ ಒಡೆಯುವುದನ್ನು ತಪ್ಪಿಸಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.

ಕಳೆದ ಬಾರಿಯ ಫಲಿತಾಂಶ
ಸಂಜೀವ ಮಠಂದೂರು ( ಬಿಜೆಪಿ) 90,073 ಶಕುಂತಳಾ ಶೆಟ್ಟಿ (ಕಾಂಗ್ರೆಸ್) 66,345 ಗೆಲುವಿನ ಅಂತರ : 33,728

ಸುಳ್ಯ: ಬಿಜೆಪಿ- ಕಾಂಗ್ರೆಸ್ ಮಧ್ಯೆ ತೀವ್ರ ಹಣಾಹಣಿ

30 ವರ್ಷಗಳಿಂದ ಬಿಜೆಪಿ ವಶದಲ್ಲಿರುವ ಸುಳ್ಯ ವಿಧಾನಸಭಾ ಮೀಸಲು ಕ್ಷೇತ್ರ ಬಿಜೆಪಿಯ ಭದ್ರ ಕೋಟೆ. ಅಭಿವೃದ್ಧಿ ವಿಚಾರದಲ್ಲಿ ಇನ್ನೂ ಸಾಕಷ್ಟು ಹಿಂದೆ ಉಳಿದಿದೆ. ಆರು ಅವಧಿಗೆ ಶಾಸಕರಾಗಿದ್ದ ಎಸ್ ಅಂಗಾರ ಇಲ್ಲಿ ಸೋಲಿಲ್ಲದ ಸರದಾರ ಆಗಿದ್ದರು. ಆದರೆ ಈ ಬಾರಿ ಅಂಗಾರ ಅವರ ವಿರುದ್ದ ಜನಾಕ್ರೋಶವಿದೆ ಎಂಬ ಕಾರಣಕ್ಕೆ ಟಿಕೆಟ್ ನಿರಾಕರಿಸಲಾಗಿದೆ. ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಭಾಗೀರಥಿ ಮುರಳ್ಯ ಅವರು ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ ಇಲ್ಲಿ ಕಳೆದ ನಾಲ್ಕು ಬಾರಿ ಡಾ. ರಘು ಅವರನ್ನು ಕಣಕ್ಕಿಳಿಸಿತ್ತಾದ್ರೂ ಗೆಲುವಿನ ಸಮೀಪ ಬಂದಿದ್ದ ಅವರಿಗೆ ಗೆಲುವು ಒಲಿದಿಲ್ಲ. ಈ ಬಾರಿ ಅಭ್ಯರ್ಥಿಯನ್ನು ಬದಲಾಯಿಸಿ ಜಿ. ಕೃಷ್ಣಪ್ಪ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಸದ್ಯ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟೈಟ್ ಫೈಟ್ ಏರ್ಪಟ್ಟಿದ್ದು, ಬಿಜೆಪಿ ಓಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕೊತ್ತಾ ನೋಡಬೇಕಿದೆ. ಬಿಜೆಪಿ ಇಲ್ಲಿ ಗೆಲ್ಲುವ ಫೇವರೆಟ್ ಆದ್ರೂ ಅಭಿವೃದ್ಧಿ ವಿಚಾರದಲ್ಲಿ ಜನ ಈ ಬಾರಿ ತಮ್ಮ ಮನಸು ಬದಲಾಯಿಸಿದರೆ ಅಚ್ಚರಿ ಏನಿಲ್ಲ.

ಕಳೆದ ಬಾರಿಯ ಫಲಿತಾಂಶ
ಎಸ್ ಅಂಗಾರ ( ಬಿಜೆಪಿ) 95205 ಡಾ.ರಘು ( ಕಾಂಗ್ರೆಸ್ ) 69137 ಗೆಲುವಿನ ಅಂತರ : 26068

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Honnavar News: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ರಾಮಕ್ಷತ್ರಿಯ ಸಂಘದಿಂದ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಸ್ವರ್ಣವಲ್ಲೀ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

VISTARANEWS.COM


on

Honnavar News
Koo

ಹೊನ್ನಾವರ: ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ದೊರೆತಾಗ, ಆ ಮಗು ಸಮಾಜದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ. ಹಾಗೆಯೇ ಉಪನಯನವನ್ನು ಕೂಡ ಚಿಕ್ಕ ವಯಸ್ಸಿನಲ್ಲಿ ಮಾಡುವುದರಿಂದ ಹೆಚ್ಚಿನ ಫಲ ಪ್ರಾಪ್ತಿಯಾಗುತ್ತದೆ. ಅದೇ ರೀತಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ, ಸಂಸ್ಕಾರಯುತ ಸಮಾಜ ನಿರ್ಮಾಣದ ಜವಾಬ್ದಾರಿ ಕೂಡ ಪಾಲಕರ ಮೇಲಿದೆ ಎನ್ನುವುದನ್ನು ಅರಿಯಬೇಕಾಗಿದೆ ಎಂದು ಸ್ವರ್ಣವಲ್ಲೀ ಮಠದ ಮಠಾಧೀಶರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ತಿಳಿಸಿದರು.

ಪಟ್ಟಣದಲ್ಲಿ ಹೊನ್ನಾವರದ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ಅಡಕಾರದ ರಾಮಕ್ಷತ್ರಿಯ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಗವದ್ಗೀತೆ, ರಾಮರಕ್ಷಾ ಸ್ತೋತ್ರ ಮತ್ತು ರಾಮ ತಾರಕ ಮಂತ್ರಗಳ ಪಠಣ ಮಾಡುವುದನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ರೂಢಿಸಿದಾಗ ಮಕ್ಕಳಲ್ಲಿ ಆಧ್ಯಾತ್ಮಿಕ ಒಲವು ಮೂಡಲು ಸಾಧ್ಯ. ಈ ಆಧ್ಯಾತ್ಮಿಕ ಒಲವು ಸಂಸ್ಕಾರಯುತ ಮನುಷ್ಯನನ್ನು ನಿರ್ಮಾಣ ಮಾಡುತ್ತದೆ ಎಂದರು. ಇದೇ ವೇಳೆ ಪ್ರತಿವರ್ಷ ದಂಪತಿಗಳ ಶಿಬಿರ, ಯೋಗ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ರಾಮಕ್ಷತ್ರಿಯ ಪರಿಷದ್‌ನ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮಾತನಾಡಿ, ಸ್ವರ್ಣವಲ್ಲೀ ಮಠಾಧೀಶರ ಮಾರ್ಗದರ್ಶನದಲ್ಲಿ ರಾಮಕ್ಷತ್ರಿಯ ಪರಿಷದ್ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕೆಲಸಗಳ ಮೂಲಕ ಸಂಘಟಿತರಾಗೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಮಕ್ಷತ್ರಿಯ ಸಮಾಜದ 33 ವಟುಗಳಿಗೆ ಸಾಮೂಹಿಕ ಉಪನಯನ ನಡೆಯಿತು. ಪ್ರಾರಂಭದಲ್ಲಿ ಸೀತಾರಾಮ ನಾಯ್ಕ ಹಳದಿಪೂರ ಪ್ರಾರ್ಥಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ ನಾಯ್ಕ ಸ್ವಾಗತಿಸಿದರು. ಅಡಕಾರ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ರಾಮದಾಸ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಷದ್‌ನ ಪ್ರಧಾನ ಕಾರ್ಯದರ್ಶಿ ರಾಜೇಶ ಸಾಳೇಹಿತ್ತಲ್ ಐದು ವರ್ಷಗಳ ವರದಿ ವಾಚಿಸಿದರು. ರವಿ ನಾಯ್ಕ ನಿರೂಪಿಸಿದರು. ಮಹೇಶ ನಾಯ್ಕ ವಂದಿಸಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ವೇದಿಕೆಯಲ್ಲಿ ಪರಿಷದ್‌ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮತ್ತು ಶ್ರೀನಿವಾಸ ನಾಯ್ಕ ಮುಂಬಯಿ ಇವರಿಗೆ ಅಡಕಾರ ಸಂಘದಿಂದ ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ ಸಿಲ್ಕ್ಸ್ ಇದರ ಮಾಲಿಕರಾದ ರತ್ನಾಕರ ನಾಯ್ಕರವರು 33 ವಟುಗಳಿಗೆ ವಿಶೇಷ ಉಡುಗೊರೆಯೊಂದಿಗೆ ಗೌರವಿಸಿದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಕರ್ನಾಟಕ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರು
ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ನಿಧನರಾಗಿದ್ದಾರೆ.

VISTARANEWS.COM


on

M P Rudramba
Koo

ವಿಜಯನಗರ: ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಧರ್ಮ ಪತ್ನಿ ಎಂ.ಪಿ.ರುದ್ರಾಂಬಾ (M P Rudramba) (83) ಅವರು ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾದರು. ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಪುತ್ರಿಯರಲ್ಲಿ ಲತಾ ಮಲ್ಲಿಕಾರ್ಜುನ ಅವರು ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿಯಾಗಿದ್ದಾರೆ. ಸುಮಾ ಹಾಗೂ ವೀಣಾ ಇನ್ನಿಬ್ಬರು ಪುತ್ರಿಯರು. ಅವರ ಪುತ್ರ, ಹರಪನಹಳ್ಳ ಕ್ಷೇತ್ರದ ಶಾಸಕರಾಗಿದ್ದ ಎಂ.ಪಿ.ರವೀಂದ್ರ ಕೆಲ ವರ್ಷದ ಹಿಂದೆಯೇ ತೀರಿಕೊಂಡಿದ್ದರು. ಎಂ.ಪಿ. ಪ್ರಕಾಶ್‌ ಅವರೂ ದಶಕಗಳ ಹಿಂದೆಯೇ ವಿಧಿವಶರಾಗಿದ್ದರು.

ಸಾಂಸ್ಕೃತಿಕ ಹಾಗೂ ಚಿಂತನ ಶೀಲ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಂ.ಪಿ. ಪ್ರಕಾಶ್‌ ಅವರನ್ನು ಮದುವೆಯಾಗಿದ್ದ ರುದ್ರಾಂಬಾ ಅವರು ಕೂಡ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇತ್ತೀಚಿಗೆ ಆರೋಗ್ಯದ ಕಾರಣದಿಂದ ಸಾರ್ವಜನಿಕ ಜೀವನದ ಒಡನಾಟ ಕಡಿಮೆಯಾಗಿತ್ತು.

ಇದನ್ನೂ ಓದಿ | Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

ಹೂವಿನ ಹಡಗಲಿಯಲ್ಲಿ ಮಂಗಳವಾರ ಸಂಜೆ 4.30 ಕ್ಕೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ. ದಿ.‌ ಎಂ.ಪಿ. ಪ್ರಕಾಶ್‌ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ರುದ್ರಾಂಬಾ ಅವರು ತಮ್ಮ ಪತಿಯ ಆದರ್ಶಗಳನ್ನು ಪಾಲಿಸುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ನೊಂದ ಜನರ ಬದುಕಿಗೆ ಬೆಳಕಾಗಿದ್ದವರು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading
Advertisement
dina bhavishya read your daily horoscope predictions for April 30 2024
ಭವಿಷ್ಯ58 mins ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Pakistan Inflation
ವಿದೇಶ6 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ6 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು6 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ7 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ7 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ7 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ7 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ7 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ8 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ58 mins ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202417 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202418 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌