Karnataka election 2023 BJP ticket aspirant Pushpanjali Gunnal many BJP leaders join Congress Karnataka Election 2023: ಮುಂದುವರಿದ ಬಿಜೆಪಿ ಬಂಡಾಯ; ಪುಷ್ಪಾಂಜಲಿ ಗುನ್ನಾಳ್ ಸೇರಿ ಅನೇಕರು ಕಾಂಗ್ರೆಸ್‌ ಸೇರ್ಪಡೆ - Vistara News

ಕರ್ನಾಟಕ

Karnataka Election 2023: ಮುಂದುವರಿದ ಬಿಜೆಪಿ ಬಂಡಾಯ; ಪುಷ್ಪಾಂಜಲಿ ಗುನ್ನಾಳ್ ಸೇರಿ ಅನೇಕರು ಕಾಂಗ್ರೆಸ್‌ ಸೇರ್ಪಡೆ

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಶಾಸಕ ಬಸವರಾಜ್ ದಡೇಸುಗೂರು ಮತ್ತು ಪಕ್ಷದ ಹಿರಿಯ ಮುಖಂಡರ ನಿರ್ಲಕ್ಷ್ಯ ಧೋರಣೆ ಖಂಡಿಸಿ, ಬಿಜೆಪಿಯ ಪುಷ್ಪಾಂಜಲಿ ಗುನ್ನಾಳ್ ಸೇರಿದಂತೆ ಅನೇಕ ಮುಖಂಡರು ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

VISTARANEWS.COM


on

Karnataka election 2023 BJP ticket aspirant Pushpanjali Gunnal many BJP leaders join Congress
ಬಿಜೆಪಿಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪುಷ್ಪಾಂಜಲಿ ಗುನ್ನಾಳ್ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರಟಗಿ: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ (Karnataka election 2023) ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪುಷ್ಪಾಂಜಲಿ ಗುನ್ನಾಳ್ ಸೇರಿದಂತೆ ಅನೇಕ ಮುಖಂಡರು ಶನಿವಾರ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.

ಸಿದ್ದಾಪುರದ ಬಿಜೆಪಿ ಮುಖಂಡ ಮಲ್ಲಿಕಾರ್ಜುನಗೌಡ ಹೊಸಮನಿ ಅವರ ಮನೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪುಷ್ಪಾಂಜಲಿ ಗುನ್ನಾಳ್ ಅವರ ಜತೆಯಲ್ಲಿ ವೀರೇಶಪ್ಪ ಸುಂಕದ್, ಶರಣೇಗೌಡ ಮಾಲಿಪಾಟೀಲ್, ಪಂಪನಗೌಡ ಹೊಸಮನಿ, ಬುಡ್ಡನಗೌಡ ಹೊಸಮನಿ, ವರುಣ್ ಗುನ್ನಾಳ್, ಶಿವಕುಮಾರ್ ಸುಂಕದ್ ಸೇರಿದಂತೆ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ಮುಖಂಡರು ಈ ವೇಳೆ ಮಾತನಾಡಿ, ಕಳೆದ ಹದಿನೇಳು ವರ್ಷಗಳಿಂದ ಬಿಜೆಪಿ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದು, ವಿವಿಧ ಸ್ತರದಲ್ಲಿ ಪದಾಧಿಕಾರಿಯಾಗಿ ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮಿಸಿದ್ದೆವು. ಆದರೆ, ಶಾಸಕ ಬಸವರಾಜ್ ದಡೇಸುಗೂರು ಹಾಗೂ ಕೆಲ ಬಿಜೆಪಿಯ ಹಿರಿ ಮುಖಂಡರು ನಿಷ್ಠಾವಂತ ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡಿರುವುದು ಮತ್ತು ಇವರುಕ್ಷೇತ್ರದಲ್ಲಿ ಮಾಡುತ್ತಿರುವ ಭ್ರಷ್ಟಾಚಾರ, ದುರಾಡಳಿತ, ಗೂಂಡಾಗಿರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ಆರೋಪಿಸಿದ ಅವರು, ಇದರಿಂದಾಗಿ ಕ್ಷೇತ್ರದ ಜನಮಾನಸದಲ್ಲಿ ಅಸಮಾಧಾನ ಹೆಚ್ಚಾಗಿದ್ದರಿಂದ ಬೇಸತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ

Murder Case : ಸದಾ ಕಾಲ ತಾಯಿಯನ್ನು ಹಣಕ್ಕಾಗಿ ಪೀಡಿಸುತ್ತಿದ್ದ, ಜಾಗ ತನ್ನ ಹೆಸರಿಗೆ ಬರೆದುಕೊಡು ಎಂದು ಕಿರಿಕಿರಿ ಮಾಡುತ್ತಿದ್ದ ಮಗನೊಬ್ಬ ಕೊನೆಗೆ ಅಮ್ಮನನ್ನೇ ಕೊಂದು ಹಾಕಿದ್ದಾನೆ. ಜತೆಗೆ ತಾನೂ ಪ್ರಾಣ ಕಳೆದುಕೊಂಡಿದ್ದಾನೆ.

VISTARANEWS.COM


on

Murder Case Son kills Mother
Koo

ಧಾರವಾಡ: ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ (Man kills mother and ends life) ಧಾರವಾಡ ಹೊಸ ಯಲ್ಲಾಪೂರ (Dharwad News) ನಗರದಲ್ಲಿ ನಡೆದ ಘಟನೆ ಇದಾಗಿದೆ. ಹಣಕ್ಕಾಗಿ ಸದಾ ತಾಯಿಯನ್ನು ಪೀಡಿಸುತ್ತಿದ್ದ ಈತ ಇದೀಗ ಆಕೆಯನ್ನೇ ಕೊಂದು ಹಾಕಿದ್ದಾನೆ (Murder Case). ಬಳಿಕ ತಾನೂ ನೇಣು ಬಿಗಿದುಕೊಂಡು ಸತ್ತಿದ್ದಾನೆ (Suicide Case).

ಶಾರದಾ ಭಜಂತ್ರಿ (60) ಕೊಲೆಯಾದ ದುರ್ದೈವಿ. ರಾಜೇಂದ್ರ ಭಜಂತ್ರಿ (40) ಕೊಲೆ ಮಾಡಿದ ಧೂರ್ತ ಮಗ. ರಾಜೇಂದ್ರ ಭಜಂತ್ರಿ ತನ್ನ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಮತ್ತು ಬಳಿಕ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

ಧೂರ್ತ ಮಗ ರಾಜೇಶ್‌ ಹಣಕ್ಕಾಗಿ ಸದಾ ತನ್ನ ತಾಯಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಸರ್ಕಾರಿ ಉದ್ಯೋಗದಲ್ಲಿದ್ದು ನಿವೃತ್ತರಾಗಿದ್ದ ತಾಯಿಗೆ ಬರುತ್ತಿದ್ದ ಪಿಂಚಣಿಯ ಮೇಲೆ ಆತ ಕಣ್ಣಿಟ್ಟು ಕಾಟ ಕೊಡುತ್ತಿದ್ದ. ಅದರ ಜತೆಗೆ ಜಾಗವನ್ನು ತನ್ನ ಹೆಸರಿಗೆ ಬರೆದುಕೊಡು ಎಂದು ಕೂಡಾ ಬೆನ್ನು ಬಿದ್ದಿದ್ದ ಎನ್ನಲಾಗಿದೆ.

ಆ ಜಾಗ ನನಗೆ ಕೊಡು, ಅಲ್ಲಿ ನಾನೇ ಮನೆ ಕಟ್ಟಿಕೊಳ್ಳುತ್ತೇನೆ ಎಂದು ಆತ ಹೇಳಿದ್ದ. ಆದರೆ ಈ ಜಾಗವನ್ನು ಅವನಿಗೆ ಕೊಟ್ಟರೆ ಅದನ್ನೂ ಮಾರಿ ಹಾಳು ಮಾಡುತ್ತಾನೆ ಎಂಬ ಕಾರಣಕ್ಕಾಗಿ ಅಮ್ಮ ನಿರಾಕರಿಸಿದ್ದರು. ಜಾಗ ಕೊಡಲು ನಿರಾಕರಿಸಿದ್ದಕ್ಕೆ ಅವರಿಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಮಗನೇ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದುಷ್ಟ ಮಗ ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಇದು ಪೊಲೀಸ್‌ ಕೇಸ್‌ನಲ್ಲಿ ಕೋರ್ಟ್‌ ವಿಚಾರಣೆ ವೇಳೆ ತಪ್ಪಿಸಿಕೊಳ್ಳುವ ಪ್ರಯತ್ನ ಎಂದು ಕೂಡಾ ಹೇಳಲಾಗುತ್ತಿದೆ.

ಒಂಟಿ ಮನೆಯಲ್ಲಿ ಫೈರಿಂಗ್‌ ಸೌಂಡ್‌; ನಿಗೂಢವಾಗಿ ಕೊಲೆ ಮಾಡಿದವರು ಯಾರು?

ಉಡುಪಿ: ಉಡುಪಿ ಜಿಲ್ಲೆಯ (Udupi News) ಬ್ರಹ್ಮಾವರ ತಾಲೂಕಿನ ಹನೇಹಳ್ಳಿಯಲ್ಲಿ ಶನಿವಾರ ರಾತ್ರಿ ಶೂಟೌಟ್ (Shoot out at Hanehalli) ಪ್ರಕರಣವೊಂದು ನಡೆದಿದೆ. ಒಂಟಿ ಮನೆಯಲ್ಲಿ ಒಬ್ಬ ವ್ಯಕ್ತಿಯನ್ನು ನಿಗೂಢವಾಗಿ ಕೊಲೆ (Murder Case) ಮಾಡಲಾಗಿದೆ.

ಮಣಿಪಾಲದಲ್ಲಿ ಕೆಲಸ ಮಾಡುತ್ತಿರುವ ಕೃಷ್ಣ ಎಂಬವರು ಕೊಲೆಯಾದವರು. ಅವರು ಹನೆಹಳ್ಳಿಯ ಒಂಟಿ ಮನೆಯಲ್ಲಿ ಏಕಾಂಗಿಯಾಗಿ ವಾಸ ಮಾಡುತ್ತಿದ್ದರು. ಶನಿವಾರ ರಾತ್ರಿ 9.30ರ ಸುಮಾರಿಗೆ ಈ ಮನೆಯಿಂದ ಗುಂಡಿನ ಸದ್ದು (Firing sound) ಕೇಳಿಬಂದಿತ್ತು. ಅದು ಪ್ರಾಣಿಗಳನ್ನು ಓಡಿಸಲು ಪಟಾಕಿ ಬಿಟ್ಟಿರಬಹುದು ಎಂದು ಆಸುಪಾಸಿನವರು ಸುಮ್ಮನಿದ್ದರು. ಆದರೆ, ಬೆಳಗ್ಗೆ ಹೋಗಿ ನೋಡಿದಾಗ ಕೃಷ್ಣ ಅವರು ರಕ್ತದ ಮಡುವಿನಲ್ಲಿ ಶವವಾಗಿ ಮಲಗಿದ್ದರು.

Murder Case _ Shootout

ಹಾಗಿದ್ದರೆ ರಾತ್ರಿ ಆ ಮನೆಗೆ ಬಂದು ಶೂಟ್‌ ಮಾಡಿ ಕೃಷ್ಣ ಅವರನ್ನು ಸಾಯಿಸಿದ್ದು ಯಾರು ಎನ್ನುವುದು ನಿಗೂಢವಾಗಿದೆ. ಕೃಷ್ಣ ಅವರು ತಾವೇ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಂತೆ ಕಾಣುತ್ತಿಲ್ಲ. ಬದಲಾಗಿ ಯಾರೋ ಬಂದು ಅವರಿಗೆ ಗುಂಡಿಕ್ಕಿದಂತೆ ಕಾಣುತ್ತಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ಭೇಟಿ ನೀಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಹನೆಹಳ್ಳಿಯಲ್ಲಿ ನಡೆದ ಘಟನೆ ಘಟನೆ ಇದಾಗಿದ್ದು, ಕೃಷ್ಣ ಅವರ ಹಿನ್ನೆಲೆ, ಅವರನ್ನು ಯಾರು ಕೊಲೆ ಮಾಡಿರಬಹುದು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶೂಟ್ ಔಟ್ ನಡೆಸಿದವರಿಗಾಗಿ ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

ಇದನ್ನೂ ಓದಿ : Bengaluru News : ಛೇ.. ಇವಳೆಂಥಾ ತಾಯಿ? ಬುದ್ಧಿ ಕಲಿಸಲು 3 ವರ್ಷದ ಮಗುವನ್ನು ಕೂಡಿಹಾಕಿದ್ದಳಂತೆ!

Continue Reading

ಉಡುಪಿ

Murder Case : ಒಂಟಿ ಮನೆಯಲ್ಲಿ ಫೈರಿಂಗ್‌ ಸೌಂಡ್‌, ನಿಗೂಢವಾಗಿ ಕೊಲೆ ಮಾಡಿ ಹೋದವರು ಯಾರು?

Murder Case : ಉಡುಪಿ ಜಿಲ್ಲೆಯ ಒಂಟಿ ಮನೆಯಲ್ಲಿ ಶನಿವಾರ ರಾತ್ರಿ ಫೈರಿಂಗ್‌ ಸೌಂಡ್‌ ಕೇಳಿಬಂದಿತ್ತು. ಮರುದಿನ ಮುಂಜಾನೆ ನೋಡಿದರೆ ಅಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿ ಹೆಣವಾಗಿ ಮಲಗಿದ್ದಾರೆ.

VISTARANEWS.COM


on

Murder Case _ Shootout
Koo

ಉಡುಪಿ: ಉಡುಪಿ ಜಿಲ್ಲೆಯ (Udupi News) ಬ್ರಹ್ಮಾವರ ತಾಲೂಕಿನ ಹನೇಹಳ್ಳಿಯಲ್ಲಿ ಶನಿವಾರ ರಾತ್ರಿ ಶೂಟೌಟ್ (Shoot out at Hanehalli) ಪ್ರಕರಣವೊಂದು ನಡೆದಿದೆ. ಒಂಟಿ ಮನೆಯಲ್ಲಿ ಒಬ್ಬ ವ್ಯಕ್ತಿಯನ್ನು ನಿಗೂಢವಾಗಿ ಕೊಲೆ (Murder Case) ಮಾಡಲಾಗಿದೆ.

ಮಣಿಪಾಲದಲ್ಲಿ ಕೆಲಸ ಮಾಡುತ್ತಿರುವ ಕೃಷ್ಣ ಎಂಬವರು ಕೊಲೆಯಾದವರು. ಅವರು ಹನೆಹಳ್ಳಿಯ ಒಂಟಿ ಮನೆಯಲ್ಲಿ ಏಕಾಂಗಿಯಾಗಿ ವಾಸ ಮಾಡುತ್ತಿದ್ದರು. ಶನಿವಾರ ರಾತ್ರಿ 9.30ರ ಸುಮಾರಿಗೆ ಈ ಮನೆಯಿಂದ ಗುಂಡಿನ ಸದ್ದು (Firing sound) ಕೇಳಿಬಂದಿತ್ತು. ಅದು ಪ್ರಾಣಿಗಳನ್ನು ಓಡಿಸಲು ಪಟಾಕಿ ಬಿಟ್ಟಿರಬಹುದು ಎಂದು ಆಸುಪಾಸಿನವರು ಸುಮ್ಮನಿದ್ದರು. ಆದರೆ, ಬೆಳಗ್ಗೆ ಹೋಗಿ ನೋಡಿದಾಗ ಕೃಷ್ಣ ಅವರು ರಕ್ತದ ಮಡುವಿನಲ್ಲಿ ಶವವಾಗಿ ಮಲಗಿದ್ದರು.

ಹಾಗಿದ್ದರೆ ರಾತ್ರಿ ಆ ಮನೆಗೆ ಬಂದು ಶೂಟ್‌ ಮಾಡಿ ಕೃಷ್ಣ ಅವರನ್ನು ಸಾಯಿಸಿದ್ದು ಯಾರು ಎನ್ನುವುದು ನಿಗೂಢವಾಗಿದೆ. ಕೃಷ್ಣ ಅವರು ತಾವೇ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಂತೆ ಕಾಣುತ್ತಿಲ್ಲ. ಬದಲಾಗಿ ಯಾರೋ ಬಂದು ಅವರಿಗೆ ಗುಂಡಿಕ್ಕಿದಂತೆ ಕಾಣುತ್ತಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ಭೇಟಿ ನೀಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಹನೆಹಳ್ಳಿಯಲ್ಲಿ ನಡೆದ ಘಟನೆ ಘಟನೆ ಇದಾಗಿದ್ದು, ಕೃಷ್ಣ ಅವರ ಹಿನ್ನೆಲೆ, ಅವರನ್ನು ಯಾರು ಕೊಲೆ ಮಾಡಿರಬಹುದು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶೂಟ್ ಔಟ್ ನಡೆಸಿದವರಿಗಾಗಿ ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

ಇದನ್ನೂ ಓದಿ : Bengaluru News : ಛೇ.. ಇವಳೆಂಥಾ ತಾಯಿ? ಬುದ್ಧಿ ಕಲಿಸಲು 3 ವರ್ಷದ ಮಗುವನ್ನು ಕೂಡಿಹಾಕಿದ್ದಳಂತೆ!

ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ

ಧಾರವಾಡ: ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ (Man kills mother and ends life) ಧಾರವಾಡ ಹೊಸ ಯಲ್ಲಾಪೂರ (Dharwad News) ನಗರದಲ್ಲಿ ನಡೆದ ಘಟನೆ ಇದಾಗಿದೆ. ಹಣಕ್ಕಾಗಿ ಸದಾ ತಾಯಿಯನ್ನು ಪೀಡಿಸುತ್ತಿದ್ದ ಈತ ಇದೀಗ ಆಕೆಯನ್ನೇ ಕೊಂದು ಹಾಕಿದ್ದಾನೆ.

ಶಾರದಾ ಭಜಂತ್ರಿ (60) ಕೊಲೆಯಾದ ದುರ್ದೈವಿ. ರಾಜೇಂದ್ರ ಭಜಂತ್ರಿ (40) ಕೊಲೆ ಮಾಡಿದ ಧೂರ್ತ ಮಗ. ರಾಜೇಂದ್ರ ಭಜಂತ್ರಿ ತನ್ನ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಮತ್ತು ಬಳಿಕ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

Son Kills Mother

ಧೂರ್ತ ಮಗ ರಾಜೇಶ್‌ ಹಣಕ್ಕಾಗಿ ಸದಾ ತನ್ನ ತಾಯಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಸರ್ಕಾರಿ ಉದ್ಯೋಗದಲ್ಲಿದ್ದು ನಿವೃತ್ತರಾಗಿದ್ದ ತಾಯಿಗೆ ಬರುತ್ತಿದ್ದ ಪಿಂಚಣಿಯ ಮೇಲೆ ಆತ ಕಣ್ಣಿಟ್ಟು ಕಾಟ ಕೊಡುತ್ತಿದ್ದ. ಅದರ ಜತೆಗೆ ಜಾಗವನ್ನು ತನ್ನ ಹೆಸರಿಗೆ ಬರೆದುಕೊಡು ಎಂದು ಕೂಡಾ ಬೆನ್ನು ಬಿದ್ದಿದ್ದ ಎನ್ನಲಾಗಿದೆ.

ಆ ಜಾಗ ನನಗೆ ಕೊಡು, ಅಲ್ಲಿ ನಾನೇ ಮನೆ ಕಟ್ಟಿಕೊಳ್ಳುತ್ತೇನೆ ಎಂದು ಆತ ಹೇಳಿದ್ದ. ಆದರೆ ಈ ಜಾಗವನ್ನು ಅವನಿಗೆ ಕೊಟ್ಟರೆ ಅದನ್ನೂ ಮಾರಿ ಹಾಳು ಮಾಡುತ್ತಾನೆ ಎಂಬ ಕಾರಣಕ್ಕಾಗಿ ಅಮ್ಮ ನಿರಾಕರಿಸಿದ್ದರು. ಜಾಗ ಕೊಡಲು ನಿರಾಕರಿಸಿದ್ದಕ್ಕೆ ಅವರಿಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಮಗನೇ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದುಷ್ಟ ಮಗ ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಇದು ಪೊಲೀಸ್‌ ಕೇಸ್‌ನಲ್ಲಿ ಕೋರ್ಟ್‌ ವಿಚಾರಣೆ ವೇಳೆ ತಪ್ಪಿಸಿಕೊಳ್ಳುವ ಪ್ರಯತ್ನ ಎಂದು ಕೂಡಾ ಹೇಳಲಾಗುತ್ತಿದೆ.

Continue Reading

ಬೆಂಗಳೂರು

Bengaluru News : ಛೇ.. ಇವಳೆಂಥಾ ತಾಯಿ? ಬುದ್ಧಿ ಕಲಿಸಲು 3 ವರ್ಷದ ಮಗುವನ್ನು ಕೂಡಿಹಾಕಿದ್ದಳಂತೆ!

Inhuman Behaviour : ತಾಯಿಯೇ ಸ್ವಂತ ಮಗುವನ್ನೇ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ನಡೆದಿತ್ತು. ಮಗನಿಗೆ ಬುದ್ಧಿ ಕಲಿಸಲು ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾಳೆ.

VISTARANEWS.COM


on

By

Mother attack to child
Koo

ಬೆಂಗಳೂರು: ಜಗತ್ತಿನಲ್ಲಿ ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತು ಈ ಕಲಿಯುಗದಲ್ಲಿ ಬದಲಾಗಿದೆ. ಬೆಂಗಳೂರಿನಲ್ಲಿ ತಾಯಿಯೊಬ್ಬಳು ತನ್ನ ಸ್ವಂತ ಮಗುವನ್ನು (Inhuman Behaviour) ಕೂಡಿಹಾಕಿದ್ದಳು. ಮಾತ್ರವಲ್ಲದೇ ಕಾಲಲ್ಲಿ ಒದ್ದು, ಮರ್ಮಾಂಗಕ್ಕೆ ಹಾನಿ (assault Case) ಮಾಡಿದ್ದಳು. ಮೊದಮೊದಲು ಮಗುವಿಗೆ ನಾನೇನು ಮಾಡಿಲ್ಲ, ಮಗುವೇ ಸುಖಾಸುಮ್ಮನೆ ಸುಳ್ಳು ಹೇಳುತ್ತಿದೆ ಎಂದಿದ್ದಳು. ಎಲ್ಲರೂ ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಮಗುವಿಗೆ ಬುದ್ಧಿ ಕಲಿಸಲು ಹೊಡೆದಿದ್ದು ಎಂದು ಒಪ್ಪಿಕೊಂಡಿದ್ದಾಳೆ.

ಬೆಂಗಳೂರಿನ ಗಿರಿನಗರ ಸಮೀಪದ ವೀರಭದ್ರನಗರದಲ್ಲಿ ಶಾರಿನ್‌ ಎಂಬಾಕೆ ತನ್ನ ಮೂರು ವರ್ಷದ ಮಗು ಸ್ಟ್ಯಾಲಿನ್‌ನನ್ನು ಗೃಹಬಂಧನದಲ್ಲಿ ಇಟ್ಟಿದ್ದಳು. ಈ ಸುದ್ದಿಯನ್ನು ವಿಸ್ತಾರ ನ್ಯೂಸ್‌ ಬಿತ್ತರಿಸಿತ್ತು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಮಗುವಿನ ಮೇಲೆ ಹಲ್ಲೆ ಮಾಡಿದ್ದ ತಾಯಿ ಶಾರಿನ್‌ ಪ್ರತಿಕ್ರಿಯಿಸಿದ್ದಾಳೆ. ನಾನು ಮಗುವಿಗೆ ಹೊಡೆದಿದ್ದು ನಿಜ, ಆದರೆ ಮಗ ಬುದ್ಧಿ ಕಲಿಬೇಕು ಹಾಗೂ ಜೀವನದಲ್ಲಿ ಸ್ವಂತ ಕಾಲಿನ ಮೇಲೆ ನಿಲ್ಲಬೇಕೆಂದು ಎಂದು ಹೀಗೆ ಮಾಡಿದ್ದು ಅಷ್ಟೇ. ಮಗುವೇ ಸುಳ್ಳು ಹೇಳುತ್ತಿದೆ. ನನಗೆ ಕೆಲಸ ಇರಲಿಲ್ಲ, ಹೀಗಾಗಿ ಮಗುವನ್ನು ಕೂಡಿ ಹೊರಗೆ ಹೋಗುತ್ತಿದ್ದೆ ಎಂದಿದ್ದಾಳೆ.

ಶಾರಿನ್‌ ನಾಲ್ಕು ವರ್ಷದ ಹಿಂದೆ ಶಂಕರ್ ಎಂಬಾತನನ್ನು ಮದುವೆ ಆಗಿದ್ದಳು. ಆತ ಕುಡಿದು ಬಂದು ಹಲ್ಲೆ ಮಾಡುತ್ತಿದ್ದ. ಹೀಗಾಗಿ ಆತನಿಂದ ದೂರಾಗಿ ಎರಡು ವರ್ಷವೇ ಕಳೆದಿದೆ. ಹಣಕಾಸಿನ ತೊಂದರೆಯಿಂದಾಗಿ ಮಗು ಸ್ಟ್ಯಾಲಿನ್‌ನನ್ನು ಮನೆಯಲ್ಲೇ ಕೂಡಿಹಾಕಿ ಕೆಲಸ ಹುಡುಕುತ್ತಿದ್ದೆ. ಇತ್ತೀಚೆಗಷ್ಟೇ ಹೊಸ ಕೆಲಸಕ್ಕೆ ಸೇರಿದ್ದೆ, ಸಂಬಳ ಬಂದ ನಂತರ ಡೇ ಕೇರ್‌ಗೆ ಹಾಕುವ ಅಂತಿದ್ದೆ ಎಂದು ಉತ್ತರಿಸಿದ್ದಾಳೆ. ಇತ್ತ ಮಧ್ಯಾಹ್ನ ಮಗುವಿಗೆ ಊಟ ಕೊಡಲೆಂದು ನನ್ನ ಫ್ರೆಂಡ್ ಮನೆಗೆ ಬರುತ್ತಿದ್ದ ಎಂದು ಶಾರಿನ್‌ ತಿಳಿಸಿದ್ದಾಳೆ.

ಅಮ್ಮನ ಜತೆಗೆ ಹೋಗಲು ಮಗು ನಕಾರ

ಪೊಲೀಸರು ತಾಯಿ ಶಾರಿನ್‌ಳನ್ನು ಕರೆಸಿ ಬುದ್ಧಿವಾದ ಹೇಳಿ ಕಳಿಸಿದ್ದಾರೆ. ಈಗಾಗಲೇ ಮಗುವನ್ನು ಮಕ್ಕಳ ಆಯೋಗದ ಸುಪರ್ದಿಗೆ ಒಪ್ಪಿಸಿದ್ದಾರೆ. ಶಾರಿನ್‌ ಹಾಗೂ ಪತಿ ಶಂಕರ್‌ ಇಬ್ಬರನ್ನೂ ಕರೆಸಿ ಕೌನ್ಸೆಲಿಂಗ್‌ಗೆ ಒಳಗಾಗುವಂತೆ ಸೂಚನೆ ನೀಡಿದ್ದಾರೆ. ದಂಪತಿ ಬಂದು ಚೆನ್ನಾಗಿ ನೋಡಿಕೊಳ್ಳುವುದಾಗಿ ಹೇಳಿದ್ದರಷ್ಟೆ ಮಗುವನ್ನು ನೀಡುವುದಾಗಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ತಿಳಿಸಿದ್ದಾರೆ. ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ. ಕೌನ್ಸಿಲಿಂಗ್ ವೇಳೆ ತಾಯಿ ಜತೆ ಹೋಗಲು ಮೂರು ವರ್ಷದ ಮಗು ನಿರಾಕರಿಸಿದೆ ಎನ್ನಲಾಗಿದೆ. ಹೀಗಾಗಿ ಸೋಮವಾರ ಮತ್ತೊಂದು ಸುತ್ತಿನ ಕೌನ್ಸಿಲಿಂಗ್‌ಗಾಗಿ ಸಿಡಬ್ಲ್ಯೂಸಿ ಕಮಿಟಿ ತಾಯಿ ಶಾರೀನ್‌ಗೆ ನೋಟೀಸ್‌ ನೀಡಿದೆ.

ಪ್ರಿಯಕರನಿಗಾಗಿ ಮಗುವಿಗೆ ಚಿತ್ರ ಹಿಂಸೆ!

ಮನೆಗೆ ಬರುವ ಅಂಕಲ್‌ ಕುಕ್ಕರ್‌ನಿಂದ ಹೊಡೆದರು ಎಂದು ಮಗು ಹೇಳಿದೆ. ಪ್ರಿಯಕರನಿಗಾಗಿ ತನ್ನ ಸ್ವಂತ ಮಗುವಿಗೆ ಶಾರಿನ್‌ ಚಿತ್ರ ಹಿಂಸೆ ಕೊಟ್ಟಳಾ ಎಂಬ ಪ್ರಶ್ನೆಯು ಕಾಡುತ್ತದೆ. ಆತ ನನ್ನ ಸ್ನೇಹಿತ, ಮಗನಿಗೆ ಮಧ್ಯಾಹ್ನ ಊಟ ಕೊಡಲು ಬರುತ್ತಿದ್ದ ಎಂದಿದ್ದಾಳೆ. ಆದರೆ ಆಕೆ ಮೊಬೈಲ್‌ ಸ್ಕೀನ್‌ನಲ್ಲಿ ಪ್ರಿಯಕರನ ಕೆನ್ನೆಗೆ ಚುಂಬಿಸುವ ರೀತಿಯಲ್ಲಿ ಫೋಟೊ ಹಾಕಿಕೊಂಡಿದ್ದಾಳೆ.

ಇತ್ತ ಕ್ರೂರಿ ಅಮ್ಮನಿಗೆ ಅಕ್ಕಪಕ್ಕದ ಮನೆಯ ಮಹಿಳೆಯರ ಛೀಮಾರಿ ಹಾಕಿದ್ದಾರೆ. ಆ ಮಗು ಕಿಟಕಿಯಿಂದ ಮುಖ ಹಾಕಿ ಊಟಕ್ಕಾಗಿ ಬೇಡುತ್ತಿತ್ತು ಎನ್ನಲಾಗಿದೆ. ಸದ್ಯ ಗಿರಿನಗರ ಪೊಲೀಸ್ ಠಾಣೆಗೆ ಸ್ಥಳೀಯ ಮಹಿಳೆಯರೇ, ಶಾರಿಳ್‌ ಅನ್ನು ಕರೆದುಕೊಂಡು ಹೋಗಿದ್ದಾರೆ.

ಏನಿದು ಘಟನೆ?

ಪ್ರತಿ ಮಕ್ಕಳಿಗೂ ಹೆತ್ತ ತಾಯಿಯೇ ಶ್ರೀರಕ್ಷೆ.. ಅದೆಷ್ಟೋ ಹೆಣ್ಮಕ್ಕಳು ಮಕ್ಕಳಾಗಿಲ್ಲ ಎಂದು ಕೊರಗುತ್ತಾ ಶತಕೋಟಿ ದೇವರನ್ನೆಲ್ಲ ಪೂಜಿಸುತ್ತಾರೆ. ಆದರೆ ಬೆಂಗಳೂರಿನಲ್ಲಿ ಪಾಪಿ ತಾಯಿಯೊಬ್ಬಳು ಪ್ರಿಯಕರನ ಜತೆ ಸೇರಿ ಹೆತ್ತ ಮಗುವಿನ (Assault Case) ಮೇಲೆ ಹಲ್ಲೆ (Inhuman Behaviour) ನಡೆಸಿದ್ದಳು. ಈ ಅಮಾನುಷ ಕೃತ್ಯವು ಬೆಂಗಳೂರಿನ ಗಿರಿನಗರ ಸಮೀಪದ ವೀರಭದ್ರನಗರದಲ್ಲಿ ನಡೆದಿತ್ತು. ಮಗುವಿನ ಲಾಲನೆ ಪಾಲನೆ ಮಾಡಬೇಕಾದವಳೇ ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಹೊಡೆದು ಬಡಿದು ಮಾಡಿದ್ದಳು. ತನ್ನ ಪ್ರಿಯಕರನ ಜತೆ ಸೇರಿ ಮಗುವಿನ ಮರ್ಮಾಂಗವನ್ನೇ ಕಚ್ಚಿದ್ದರು ಈ ಕಿರಾತಕರು.

ಮಗುವಿನ ಇಡೀ ದೇಹದ ತುಂಬೆಲ್ಲ ಗಾಯಗಳೇ ಇತ್ತು. 3 ವರ್ಷದ ಮಗುವು ತೊದಲನುಡಿಯಲ್ಲೇ ತನಗೆ ಹೇಗೆಲ್ಲ ಹೊಡೆದು ಹಿಂಸೆ ಕೊಟ್ಟರು ಎಂಬುದನ್ನು ತಿಳಿಸಿತ್ತು. ಮನೆಗೆ ಬಂದ ಅಂಕಲ್‌ವೊಬ್ಬರ್‌ ಕುಕ್ಕರ್‌ನಿಂದ ತಲೆಗೆ ಹೊಡೆದರು. ಅಮ್ಮ ಕೂಡ ನೀನು ಬೇಡ ಮನೆ ಬಿಟ್ಟು ಹೋಗು ಎಂದು ಕಾಲಲ್ಲಿ ಒದ್ದರಂತೆ. ಇದೆಲ್ಲವನ್ನೂ ಮಗುವು ರಕ್ಷಣೆಗೆ ಬಂದಿದ್ದ ಮಹಿಳೆಯೊಬ್ಬರ ಬಳಿ ಹೇಳಿಕೊಂಡಿತ್ತು.

inhuman behaviour child assaulted by mother and her boyfriend in bengaluru

ಇದನ್ನೂ ಓದಿ: Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮನೆಗೆ ಬೀಗ ಹಾಕಿ ಹೋದರೆ ರಾತ್ರಿ ಬರುವವರೆಗೂ ಬಾಗಿಲು ತೆಗಯದೆ ಕೂಡಿಹಾಕುತ್ತಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಸಂಘಟನೆಯೊಂದು ಮಗುವಿನ ರಕ್ಷಣೆಗೆ ಬಂದಿದೆ. ಪಾಪಿ ತಾಯಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನೆಯಲ್ಲಿ ಕೂಡಿ ಹಾಕಿದ್ದ ಮಗುವನ್ನು ರಕ್ಷಿಸಿ, ಗೃಹ ಬಂಧನಕ್ಕೆ ಮುಕ್ತಿಕೊಟ್ಟಿದ್ದಾರೆ.

ಮೈತುಂಬ ಗಾಯಗೊಂಡಿದ್ದ ಮಗುವಿಗೆ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ಇನ್ನೂ ಈ ಸುದ್ದಿ ವಿಸ್ತಾರ ನ್ಯೂಸ್‌ನಲ್ಲಿ ಪ್ರಸಾರವಾಗುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಂದಿಸಿದ್ದಾರೆ. ಕೂಡಲೇ ಈ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಹೆತ್ತವಳೇ ಮಗುವಿನ ಮೇಲೆ ದೌರ್ಜನ್ಯ ನಡೆಸಿರುವುದು ನಿಜಕ್ಕೂ ದುರಂತ. ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮವಹಿಸಲಾಗುವುದು ಎಂದಿದ್ದರು.

ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುವುದಾಗಿ ಶಾಸಕ ರವಿ ಸುಬ್ರಹ್ಮಣ್ಯ ತಿಳಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸರಿಂದ ಮಾಹಿತಿಯನ್ನು ಪಡೆಯುವುದಾಗಿ ಪ್ರತಿಕ್ರಿಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Elephant Attack : ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ; ಟ್ರೆಕಿಂಗ್‌ಗೆ ಹೋದವರಿಗೆ ಕಂಡಿತು ಶವ

Elephant Attack : ಕೊಡಗಿನ ನಿಶಾನಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಇದು ಆನೆ ದಾಳಿಯಿಂದ ನಡೆದ ಸಾವು ಎಂದು ಶಂಕಿಸಲಾಗಿದೆ.

VISTARANEWS.COM


on

Elephant Attack New
Koo

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಆನೆ ದಾಳಿಗೆ (Elephant Attack) ಬಲಿಯಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಹಲವಾರು ಮಂದಿಯನ್ನು ಆನೆ ದಾಳಿಗೆ ಕಳೆದುಕೊಂಡಿರುವ ಕೊಡಗು ಜಿಲ್ಲೆಯಲ್ಲಿ (Kodagu News) ಇನ್ನೊಂದು ಜೀವ ಬಲಿಯಾಗಿದೆ.

ಕೊಡಗು ಜಿಲ್ಲೆ ಮಡಿಕೇರಿ ಸಮೀಪ ನಿಶಾನಿ ಬೆಟ್ಟದಲ್ಲಿ (Nishani Betta in Kodagu) ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ (Man dies of Elephant Attack) ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಅಪ್ಪಚ್ಚ ಅವರು ಶನಿವಾರ ಕೆಲಸಕ್ಕೆ ಹೋದವರು ಮರಳಿ ಬಂದಿರಲಿಲ್ಲ. ಹೀಗಾಗಿ ರಾತ್ರಿ ಇಡೀ ಮನೆಯವರು ಕಂಡ ಕಂಡಲ್ಲಿ ಹುಡುಕಿದ್ದರು. ಆದರೆ ಸಿಕ್ಕಿರಲಿಲ್ಲ. ಮುಂಜಾನೆ ನಿಶಾನಿ ಬೆಟ್ಟಕ್ಕೆ ಪ್ರವಾಸಿಗರು ಚಾರಣಕ್ಕೆ ತೆರಳುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ನಿಶಾನೆ ಬೆಟ್ಟದ ದಾರಿಯಲ್ಲಿ ಶವವೊಂದು ಬಿದ್ದಿರುವುದನ್ನು ಚಾರಣಿಗರು ಗಮನಿಸಿ ಸ್ಥಳೀಯರಿಗೆ ಮಾಹಿತಿ ನೀಡಿದರು. ಕೂಡಲೇ ಬಂದು ನೋಡಿದಾಗ ಅದು ಅಪ್ಪಚ್ಚ ಅವರದಾಗಿತ್ತು. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳ ಮತ್ತು ಆಸುಪಾಸಿನಲ್ಲಿ ಆನೆ ನಡೆದಾಡಿದ ಹೆಜ್ಜೆ ಗುರುತುಗಳು ಕಂಡುಬಂದಿದ್ದರಿಂದ ಇದು ಆನೆ ದಾಳಿಯಿಂದ ನಡೆದ ಸಾವು ಎಂದು ಸಂಶಯಿಸಲು ಕಾರಣವಾಗಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ : Elephant Attack: ʼಕರ್ನಾಟಕದ ಪರಿಹಾರ ಬೇಕಿಲ್ಲ…ʼ ಕಾಡಾನೆ ಬಲಿ ಪಡೆದ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ರೂ. ಕೊಟ್ಟ ಕೇರಳ ಸರ್ಕಾರ

ಕೊಡಗಿನಲ್ಲಿ ಹೆಚ್ಚುತ್ತಿರುವ ಆನೆ ದಾಳಿ, ಸಾವು ನೋವು

ರಾಜ್ಯದಲ್ಲಿ ಆನೆಗಳ ದಾಳಿ ವಿಪರೀತವಾಗಿದ್ದು ಜನರು ಭಯದಿಂದ ನಡುಗುವಂತಾಗಿದೆ. ಅದರಲ್ಲೂ ಮುಖ್ಯವಾಗಿ ಕೊಡಗು ಜಿಲ್ಲೆಯಲ್ಲಿ ಅಪಾಯ ಮೇರೆ ಮೀರಿದೆ.

ಕೊಡಗಿನ ಆನೆಕಾಡು ಅರಣ್ಯ ಪ್ರದೇಶದಲ್ಲಿ ಕಳೆದ ಸೆಪ್ಟೆಂಬರ್‌ 4ರಂದು ಆನೆಗಳ ಹಾವಳಿಯನ್ನು ನಿಯಂತ್ರಿಸುವುದಕ್ಕಾಗಿ ರೂಪಿಸಲಾದ ರ‍್ಯಾಪಿಡ್‌ ರೆಸ್ಪಾನ್ಸ್‌ ಟೀಮ್‌ನ (Rapid Response Team- RRT) ಸದಸ್ಯರೊಬ್ಬರನ್ನೇ ಆನೆ ದಾಳಿ ಮಾಡಿ ಕೊಂದಿತ್ತು. RRT ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಿರೀಶ್ (35) ಅವರೇ ದಾಳಿಗೆ ಒಳಗಾಗಿ ಪ್ರಾಣ ಕಳೆದುಕೊಂಡಿದ್ದರು.

ಆಗಸ್ಟ್‌ 27ಕ್ಕೆ ಹಸುವನ್ನು ಹುಡುಕಲು ಹೋದ ರೈತ ಸಾವು

ಕಳೆದ ಆಗಸ್ಟ್‌ 27ರಂದು ಸೋಮವಾಪೇಟೆ ತಾಲ್ಲೂಕಿನ ಅಡಿಯನಾಡೂರು ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಆನೆಯೊಂದು 60 ವರ್ಷದ ಕೃಷಿಕ ಈರಪ್ಪ ಎಂಬವರನ್ನು ಆನೆ ಕೊಂದು ಹಾಕಿತ್ತು.

ಅಂದು ಮುಂಜಾನೆ ಈರಪ್ಪ ತಮ್ಮ‌‌ ಮನೆಯ ಹಾಲು ಕರೆಯುವ ಹಸು ಕಾಣುತ್ತಿಲ್ಲ ಅಂತ ಹುಡುಕಿಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಗೌರಿ ಗದ್ದೆಯ ಸಮೀಪ ಏಕಾಏಕಿ ನುಗ್ಗಿ ಬಂದ ಕಾಡಾನೆ ಈರಪ್ಪ ಮೇಲೆ ದಾಳಿ ನಡೆಸಿದೆ.‌ ಆನೆ ಈರಪ್ಪ ಅವರ ಎದೆಯ ಮೇಲೆಯೇ ನೇರವಾಗಿ ಕಾಲಿಟ್ಟಿದೆ. ದಾಳಿಗೆ ಸಿಲುಕಿದ ಈರಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಆಗಸ್ಟ್‌ 20ರಂದು ವಾಕಿಂಗ್‌ ಮಾಡುತ್ತಿದ್ದ ಮಹಿಳೆ ಮೃತ್ಯು

ಕಳೆದ ಆಗಸ್ಟ್‌ 2೦ರಂದು ವಿರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ಮನೆ ಸಮೀಪ ವಾಕಿಂಗ್‌ ಮಾಡುತ್ತಿದ್ದ ಆಯಿಶಾ (63) ಎಂಬವರು ಆನೆ ದಾಳಿಗೆ ಒಳಗಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಅದಕ್ಕಿಂತ ಒಂದು ವಾರದ ಹಿಂದೆ ಕೂಡ ಆನೆ ದಾಳಿಗೆ ಟ್ರಾಕ್ಟರ್ ಚಾಲಕರೊಬ್ಬರು ಮೃತ ಪಟ್ಟಿದ್ದರು. ಕಳೆದ ಒಂದು ತಿಂಗಳಲ್ಲಿ ಮರಗೋಡು, ಸಿದ್ದಾಪುರ ಸಮೀಪದ ಬಾಣಂಗಾಲ ಇದೀಗ ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ದಾಳಿಯಾಗಿದ್ದು ಕಾಡಾನೆ ದಾಳಿಯಲ್ಲಿ ಮೂರು ಜನ ಮೃತಪಟ್ಟಂತಾಗಿದೆ.

ನಾಲ್ಕು ದಿನದ ಹಿಂದೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಹಿಳೆ ಮೇಲೆ ಆನೆ ದಾಳಿ ಮಾಡಿ ಮೃತಪಟ್ಟಿದ್ದರು. ಕೆಲವು ತಿಂಗಳ ಹಿಂದೆ ಕೊಡಗಿನಲ್ಲಿ ಒಂದೇ ದಿನ ಅಜ್ಜ ಮತ್ತು ಮೊಮ್ಮಗನನ್ನು ಆನೆ ಬಲಿ ಪಡೆದಿತ್ತು.

Continue Reading
Advertisement
Viral video us
ವೈರಲ್ ನ್ಯೂಸ್28 seconds ago

Viral Video: ಥೂ ಅಸಹ್ಯ! ಹಣಕ್ಕಾಗಿ ವಿದ್ಯಾರ್ಥಿಗಳಿಂದ ದಾನಿಗಳ ಕಾಲು ನೆಕ್ಕಿಸಿದ ಶಾಲಾ ನಿರ್ವಾಹಕರು

Harsh Vardhan
ಪ್ರಮುಖ ಸುದ್ದಿ2 mins ago

Harsh Vardhan: ಬಿಜೆಪಿ ಟಿಕೆಟ್‌ ನಿರಾಕರಣೆ; ರಾಜಕೀಯವನ್ನೇ ತೊರೆದ ಹರ್ಷವರ್ಧನ್!

Shehbaz Shariff
ಪ್ರಮುಖ ಸುದ್ದಿ19 mins ago

Pakistan Prime Minster : ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

Nathan Lyon
ಕ್ರೀಡೆ29 mins ago

Nathan Lyon: ಬ್ಯಾಟಿಂಗ್​ನಲ್ಲಿ ವಿಶ್ವ ದಾಖಲೆ ಬರೆದ ಬೌಲರ್​ ನಥಾನ್​ ಲಿಯೋನ್

Murder Case Son kills Mother
ಕ್ರೈಂ30 mins ago

Murder Case: ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ

Murder Case _ Shootout
ಉಡುಪಿ41 mins ago

Murder Case : ಒಂಟಿ ಮನೆಯಲ್ಲಿ ಫೈರಿಂಗ್‌ ಸೌಂಡ್‌, ನಿಗೂಢವಾಗಿ ಕೊಲೆ ಮಾಡಿ ಹೋದವರು ಯಾರು?

Pawan Singh
ಪ್ರಮುಖ ಸುದ್ದಿ48 mins ago

BJP candidate list : ಬಿಜೆಪಿ ಟಿಕೆಟ್ ತಿರಸ್ಕರಿಸಿದ ಭೋಜಪುರಿ ಗಾಯಕ ಪವನ್ ಸಿಂಗ್​

Mother attack to child
ಬೆಂಗಳೂರು1 hour ago

Bengaluru News : ಛೇ.. ಇವಳೆಂಥಾ ತಾಯಿ? ಬುದ್ಧಿ ಕಲಿಸಲು 3 ವರ್ಷದ ಮಗುವನ್ನು ಕೂಡಿಹಾಕಿದ್ದಳಂತೆ!

Robin Minz
ಪ್ರಮುಖ ಸುದ್ದಿ1 hour ago

Accident News : 3.6 ಕೋಟಿ ರೂ. ಪಡೆದ ಬುಡಕಟ್ಟು ಸಮುದಾಯದ ಐಪಿಎಲ್ ಆಟಗಾರನಿಗೆ ಬೈಕ್ ಅವಘಡದಲ್ಲಿ ಗಾಯ

Elephant Attack New
ಕೊಡಗು2 hours ago

Elephant Attack : ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ; ಟ್ರೆಕಿಂಗ್‌ಗೆ ಹೋದವರಿಗೆ ಕಂಡಿತು ಶವ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for march 3rd 2024
ಭವಿಷ್ಯ10 hours ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು22 hours ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು1 day ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು2 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು2 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ2 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ3 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ5 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

ಟ್ರೆಂಡಿಂಗ್‌