ಶಿವಮೊಗ್ಗಕ್ಕೆ ಆಗಮಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗ ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ,
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅವರು ಆಗಮಿಸಿದ್ದಾರೆ.
ರಾಹುಲ್ ಗಾಂಧಿಗಾಗಿ ಏರ್ ಪೋರ್ಟ್ ನಲ್ಲಿ ಪ್ರಿಯಾಂಕ ಗಾಂಧಿ ಕಾಯುತ್ತಿದ್ದರು. ಅವರಿಬ್ಬರೂ ಹೆಲಿಕಾಪ್ಟರ್ ಮೂಲಕ ಕಾಪುಗೆ ತೆರಳಲಿದ್ದಾರೆ.
ಕಾಪು ಸಿದ್ದಲಿಂಗಸ್ವಾಮಿ ಕಾಂಗ್ರೆಸ್‌ಗೆ?
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವರುಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಪು ಸಿದ್ದಲಿಂಗಸ್ವಾಮಿಯವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಕಾಂಗ್ರೆಸ್ ಮುಖಂಡರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ವರುಣ ಕ್ಷೇತ್ರದಲ್ಲಿ ಲಿಂಗಾಯಿತ ಮತ ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ನ ಈ ನಡೆ ಕುತೂಹಲ ಮೂಡಿಸಿದೆ.
ಇಂದು ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಜೆಪಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆಯಾಗಲಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ ಎಂ ಇಬ್ರಾಹಿಂ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.
ಈಗಾಗಲೇ 12 ಅಂಶಗಳ ಪ್ರಮುಖ ಘೋಷಣೆ ಮಾಡಿರುವ ಜೆಡಿಎಸ್ ಈ ವಿಷಯದಲ್ಲಿ ಒಂದು ಹೆಜ್ಜೆ ಮುಂದಿದೆ.
ಬಹಳ ದಿನಗಳ ನಂತರ ದೇವೇಗೌಡರ ಪತ್ರಿಕಾಗೋಷ್ಠಿ
ಬಹಳ ದಿನಗಳ ನಂತರ ಮಾಜಿ ಪ್ರಧಾನಿ ದೇವೇಗೌಡರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ.
ನಾಳೆಯಿಂದ ಮೇ 8 ರವರೆಗೂ 42 ಕಡೆಗಳಲ್ಲಿ ತಾವು ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.
ಪಕ್ಷ 207 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮಾನವೀಯ ದೃಷ್ಟಿಯಿಂದ ನಮ್ಮ ಪಕ್ಷ ದರ್ಶನ್ ಧೃವನಾರಯಣ್ ವಿರುದ್ದ ಅಭ್ಯರ್ಥಿ ಹಾಕಿಲ್ಲ ಎಂದು ತಿಳಿಸಿದ್ದಾರೆ.
ಕೂಡ್ಲಿಗಿ ಕ್ಷೇತ್ರದಲ್ಲಿ ಕಿಚ್ಚ ಸುದೀಪ್ ಪ್ರಚಾರ
ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿರುವ ನಟ ಕಿಚ್ಚ ಸುದೀಪ್ ಇಂದು ಕೂಡ್ಲಿಗಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ.
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕೇಶ್ ನಾಯಕ್ ಪರ ಮತಯಾಚಿಸುತ್ತಿರುವ ಅವರು ರೋಡ್ ಶೋ ನಡೆಸುತ್ತಿದ್ದಾರ.
ರೋಡ್ ಶೋಗೆ ಭಾರಿ ಜನ ಸೇರಿದ್ದಾರೆ.