Site icon Vistara News

Karnataka Election 2023: ಸಂಬಂಧಿಕರಿಗೆ ಟೆಂಡರ್‌ ಕೊಡಿಸಿದ ಗೋಪಾಲಯ್ಯ ದುಡ್ಡಷ್ಟೇ ಮಾಡಿದ್ದು: ಕೇಶವ ಮೂರ್ತಿ ವಾಗ್ದಾಳಿ

ಮಹಾಲಕ್ಷ್ಮಿ ಲೇಔಟ್‌ ಕಾಂಗ್ರೆಸ್‌ ಅಭ್ಯರ್ಥಿ ಪ್ರಚಾರ

Congress candidate Keshava Murthy

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ (Karnataka Election 2023) ಕಾವು ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಿದ್ದಾರೆ. ಸೋಮವಾರ (ಮೇ 8) ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮೀ ಲೇಔಟ್ (Mahalakshmi Layout) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೇಶವ ಮೂರ್ತಿ (Congress candidate Keshava Murthy) ಬಿರುಸಿನ ಪ್ರಚಾರ ಮಾಡಿದರು.

ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಅವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲಾಗುವುದು. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜನರೇ ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಲಿದ್ದಾರೆ ಎಂದು ಕೇಶವ ಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಕೇಶವ ಮೂರ್ತಿ

ಗೋಪಾಲಯ್ಯ ವಿರುದ್ಧ ವಾಗ್ದಾಳಿ

ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಮಹತ್ವದ ಚಿಂತನೆ ಇಟ್ಟುಕೊಂಡಿದ್ದು, ಸರ್ವತೋಮುಖ ಅಭಿವೃದ್ಧಿ ಶ್ರಮಿಸುವುದಾಗಿ ಕೇಶವ ಮೂರ್ತಿ ಹೇಳಿದರು. ಇದೇ ವೇಳೆ ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Elephant Balarama : ಗಜರಾಜ ಬಲರಾಮನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಗೋಪಾಲಯ್ಯ ಜನಸೇವೆಯಲ್ಲಿ ತೊಡಗಿದ್ದಕ್ಕಿಂತ ಹೆಚ್ಚಾಗಿ ಭ್ರಷ್ಟಾಚಾರದಲ್ಲೇ ತೊಡಗಿದ್ದಾರೆ. ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಂದರೂ ಸಹ ಯಾವುದೇ ಅಭಿವೃದ್ಧಿ ಆಗಿಲ್ಲ. ಕೇವಲ ತಮ್ಮ ಸಂಬಂಧಿಕರಿಗೆ ಕಾಮಗಾರಿಗಳ ಟೆಂಡರ್ ನೀಡಿ ದುಡ್ಡು ಮಾಡಿಕೊಳ್ಳುತ್ತಿದ್ದಾರಷ್ಟೇ ಎಂದು ಕಿಡಿಕಾರಿದರು.

ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಆಸ್ತಿಗಳನ್ನು ಕೂಡ ಗೋಪಾಲಯ್ಯ ಒತ್ತುವರಿ ಮಾಡಿಕೊಂಡಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇದನ್ನೆಲ್ಲ ತನಿಖೆ ಮಾಡಿಸುವುದಾಗಿ ಮಹಾಲಕ್ಷ್ಮೀ ಲೇಔಟ್ ಕಾಂಗ್ರೆಸ್ ಅಭ್ಯರ್ಥಿ ಕೇಶವ ಮೂರ್ತಿ ಹೇಳಿದ್ದಾರೆ.

Exit mobile version