karnataka-election-2023: Congress high command framed 10 guidelined to chose ministersKarnataka Election 2023: ಸಿಎಂ ಬಳಿಕ ಸಂಪುಟ ಪ್ಲ್ಯಾನ್‌; ಸಚಿವರ ಆಯ್ಕೆಗೆ ಹೈಕಮಾಂಡ್‌ 10 ಅಂಶ ಸೂತ್ರ - Vistara News

ಕರ್ನಾಟಕ

Karnataka Election 2023: ಸಿಎಂ ಬಳಿಕ ಸಂಪುಟ ಪ್ಲ್ಯಾನ್‌; ಸಚಿವರ ಆಯ್ಕೆಗೆ ಹೈಕಮಾಂಡ್‌ 10 ಅಂಶ ಸೂತ್ರ

Karnataka Cabinet: ರಾಜ್ಯ ಸಚಿವ ಸಂಪುಟಕ್ಕೆ ಸದಸ್ಯರನ್ನು ಆಯ್ಕೆ ಮಾಡುವಾಗ ಯಾವ ಮಾನದಂಡ ಇಟ್ಟುಕೊಳ್ಳಬೇಕು ಎನ್ನುವ ಬಗ್ಗೆ ಹೈಕಮಾಂಡ್‌ 10 ಅಂಶಗಳ ಸೂತ್ರವನ್ನು ರೂಪಿಸಿದೆ. ಏನೇನಿದೆ ಪಾಯಿಂಟ್ಸ್?

VISTARANEWS.COM


on

Congress high command framed 10 guidelined to chose ministers
ರಣದೀಪ್‌ ಸುರ್ಜೇವಾಲಾ, ಸುನಿಲ್‌ ಕನುಗೋಲು ಮತ್ತು ಕೆ.ಸಿ. ವೇಣುಗೋಪಾಲ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಬಹುಮತ ಗಳಿಸಿರುವ ಕಾಂಗ್ರೆಸ್‌ ಮುಖ್ಯಮಂತ್ರಿ (Congress Chief minister) ಆಯ್ಕೆಯ ಕಸರತ್ತಿನಲ್ಲಿ ನಿರತವಾಗಿದೆ. ಸಿಎಂ ಯಾರು ಎನ್ನುವುದು ತೀರ್ಮಾನ ಆಗುತ್ತಿದ್ದಂತೆಯೇ ಸಂಪುಟ ರಚನೆಯಾಗಲಿದ್ದು (Karnataka Cabinet), ಅದಕ್ಕೂ ಈಗಾಗಲೇ ಕಾರ್ಯತಂತ್ರವನ್ನು ಪಕ್ಷ ರೂಪಿಸಿದೆ.

ಯಾವುದೇ ಲಾಬಿಗೆ ಒಳಗಾಗದೆ, ಸರ್ವರಿಗೂ ಹಿತವಾಗುವ, ಎಲ್ಲರನ್ನೂ ಒಳಗೊಳ್ಳುವ, ಬೆಸ್ಟ್‌ ಸಂಪುಟ ರಚನೆಗೆ ಕಾಂಗ್ರೆಸ್‌ ಹೈಕಮಾಂಡ್‌ ಮಾಸ್ಟರ್‌ ಪ್ಲ್ಯಾನ್‌ ಮಾಡಿದೆ. ಇದು ಈಗಿನ ಆಡಳಿತ ನಿರ್ವಹಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡ ಸಂಪುಟವೇ ಆದರೂ ಅದರ ಇನ್ನೊಂದು ಕಣ್ಣು ಮುಂದಿನ 2024ರ ಲೋಕಸಭಾ ಚುನಾವಣೆಯ ಮೇಲೂ ಇದೆ. ಹೀಗಾಗಿ ಉತ್ತಮರು ಮತ್ತು ನಿಪುಣರ ಆಯ್ಕೆಗಾಗಿ ಹೈಕಮಾಂಡ್‌ 10 ಅಂಶಗಳ ಸೂತ್ರಗಳನ್ನು ಅಳವಡಿಸಿಕೊಂಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಚುನಾವಣಾ ಕಾರ್ಯತಂತ್ರ ನಿಪುಣ ಸುನೀಲ್ ಕನುಗೋಲು ನೇತೃತ್ವದಲ್ಲಿ ರಚನೆಯಾದ ಮಾನದಂಡಗಳು ಹೀಗಿವೆ.

1. 2013ರ ಸಂಪುಟದಲ್ಲಿ ಸಚಿವರಾಗಿ ಕಾರ್ಯದಕ್ಷತೆಯಿಂದ ಕೆಲಸ ನಿರ್ವಹಿಸದ ಮಾಜಿ ಸಚಿವರಿಗೆ ಈ ಬಾರಿ ಅವಕಾಶವಿಲ್ಲ.

2.ಹೊಸ ಯುವ ಶಾಸಕರಿಗೆ ಅವಕಾಶ ನೀಡಲು ನಿರ್ಧಾರ.

3.ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚಿಸಲು ತೀರ್ಮಾನ

4.ಪಕ್ಷದ ಪ್ರಣಾಳಿಕೆಯನ್ನು ಸಮರ್ಥವಾಗಿ ಜಾರಿಗೊಳಿಸುವ, ಜನಮಾನಸಕ್ಕೆ ಮುಟ್ಟಿಸುವ ಶಾಸಕರಿಗೆ ಅವಕಾಶ.

5.ಬಿಜೆಪಿ ಸರ್ಕಾರದ ಸಚಿವರ ಬಳಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳನ್ನು/ ಆಪ್ತ ಕಾರ್ಯದರ್ಶಿಗಳನ್ನು ನೂತನ ಸಚಿವರು ತಮ್ಮ ಕಛೇರಿಗೆ ತೆಗೆದುಕೊಳ್ಳುವಾಗ ಎಚ್ಚರಿಕೆ ವಹಿಸಬೇಕು

6.ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕೆಂಬುವುದನ್ನು ಹೈಕಮಾಂಡ್ ಈಗಾಗಲೇ ಪ್ರದೇಶವಾರು/ಜಾತಿವಾರು/ಯುವಕರು/ಪಕ್ಷನಿಷ್ಠೆ/ ಕಾರ್ಯದಕ್ಷತೆ ವಯೋಮಾನ ಎಲ್ಲವನ್ನು ಮಾನದಂಡವಾಗಿ ಪರಿಗಣಿಸಬೇಕು

7.ಮಹಿಳಾ ಶಾಸಕರಿಗೆ ಉತ್ತಮವಾದ ಖಾತೆ ನೀಡಲು ನಿರ್ಧಾರ

7. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗ ಶಾಸಕರು ಅನ್ನುವುದನ್ನು ಬಿಟ್ಟು ಪಕ್ಷಕ್ಕೆ ಅನುಕೂಲವಾಗುವ, ಪಕ್ಷ ಸಂಘಟನೆಗೆ ಒತ್ತು ಕೊಡುವವರಿಗೆ ಅದ್ಯತೆ ಕೊಡಬೇಕು. ಹಿಂಬಾಲಕರಿಗೆ ಮಣೆ ಬೇಡವೆಂದು ಹೈಕಮಾಂಡ್ ತೀರ್ಮಾನ

9.ವಿಧಾನ ಪರಿಷತ್ತಿನ ಸದಸ್ಯರುಗಳಿಗೂ ಸಂಪುಟದಲ್ಲಿ ಹೆಚ್ಚಿನ ಅವಕಾಶ ನೀಡಲು ತೀರ್ಮಾನ.

10.ಆಡಳಿತ ಯಂತ್ರದಲ್ಲಿ ಐ.ಎ.ಎಸ್ / ಐ.ಪಿ.ಎಸ್ ವರ್ಗದ ಅಧಿಕಾರಿಗಳಲ್ಲಿ ಬದಲಾವಣೆ ಮಾಡಿ ಜನಸಾಮಾನ್ಯರಿಗೆ ಸ್ಪಂದಿಸುವಂತ ಅಧಿಕಾರಿಗಳಿಗೆ ಪ್ರಮುಖ ಇಲಾಖೆಗಳಿಗೆ ಆದ್ಯತೆ ನೀಡಲು ತೀರ್ಮಾನ.

ಇದನ್ನೂ ಓದಿ: Karnataka Election : ಪಕ್ಷ ನನಗೆ ದೇವರು, ಹೇಳಿದಂತೆ ಕೇಳುವೆ; ಸಿಎಂ ಪಟ್ಟು ಬಿಟ್ಟು ಕೊಟ್ಟರಾ ಡಿಕೆಶಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

Rain News : ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರೆ ಇತ್ತ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನಲ್ಲಿ ಹಲವೆಡೆ ಬುಧವಾರ (Karnataka Weather Forecast) ಅಬ್ಬರಿಸಲಿದೆ. ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಹಲವೆಡೆ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಬೆಂಗಳೂರಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಯೆಲ್ಲೋ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು

ಕರಾವಳಿಯಲ್ಲಿ ವ್ಯಾಪಕ (Rain News) ಮಳೆಯಾಗುತ್ತಿದ್ದು, ಅವಾಂತರಗಳು ಮುಂದುವರಿದಿದೆ. ಉತ್ತರ ಕನ್ನಡದ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಸುರಂಗದಲ್ಲಿ ಮತ್ತೆ ಗುಡ್ಡ ಕುಸಿತ ಭೀತಿ ಎದುರಾಗಿದೆ. ಟನಲ್ ಎದುರು ಗುಡ್ಡದಿಂದ ಬಂಡೆಗಲ್ಲುಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ (Karnataka weather Forecast) ಟನಲ್ ಮೇಲ್ಭಾಗದ ಮಣ್ಣು ಸಡಿಲಗೊಂಡಿದ್ದು, ಬಂಡೆಗಲ್ಲು ಬೀಳುತ್ತಿವೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ. ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಾಗುವಂತಾಗಿದೆ. ಕಳೆದ 10 ವರ್ಷಗಳಿಂದ ಕಾರವಾರದಿಂದ ಭಟ್ಕಳವರೆಗೂ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಪೂರ್ಣಗೊಂಡಿಲ್ಲ. ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪೆನಿ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

Actor Darshan: ರೇಣುಕಾಸ್ವಾಮಿ ಕೊಲೆ ನಡೆದಿದ್ದ ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ನಲ್ಲಿ ಆರೋಪಿಗಳ ಸಮ್ಮುಖದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇನ್ನು ಬಂಧನದ ಬಳಿಕ ಆತಂಕಗೊಂಡಿರುವ ನಟ ದರ್ಶನ್‌, ಮಹಜರು ವೇಳೆ ಅಮಾಯಕನಂತೆ ನಿಂತಿದ್ದದ್ದು ಕಂಡುಬಂದಿತು.

ಬಿಗಿ ಭದ್ರತೆಯಲ್ಲಿ ದರ್ಶನ್‌, ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪಟ್ಟಣಗೆರೆ ಶೆಡ್‌ನ ಎಲ್ಲ ಕಡೆ ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಇಂಚಿಂಚೂ ಮಾಹಿತಿ ಕಲೆಹಾಕಲಾಗಿದೆ. ಘಟನೆಯಲ್ಲಿ ಯಾರ ಪಾತ್ರ ಏನು? ಯಾರು ಸ್ಥಳದಲ್ಲಿ ಇದ್ದರು ಎಂದು ಒಬ್ಬೊಬ್ಬರ ಬಳಿಯಿಂದ ಮಾಹಿತಿ ಪಡೆಯಲಾಗಿದೆ. ಸ್ಥಳ ಮಹಜರಿನ ಪ್ರತಿ ಹಂತದಲ್ಲಿ ವಿಡಿಯೊ ಸೆರೆಹಿಡಿಯಲಾಗಿದೆ.

ಇದನ್ನೂ ಓದಿ | Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

ಮಹಜರಿನ ಜತೆಯಲ್ಲಿ ಸಾಕ್ಷ್ಯಗಳನ್ನು ಕೂಡ ಎಫ್ಎಸ್ಎಲ್ ತಂಡ ಕಲೆಹಾಕಿದೆ. ವಾಹನಗಳ ಸೀಜಿಂಗ್ ಯಾರ್ಡ್‌ನ ಮೂಲೆ ಮೂಲೆಯಲ್ಲೂ ಪರಿಶೀಲನೆ ನಡೆಸಲಾಗಿದೆ. ಮೃತ ರೇಣುಕಸ್ವಾಮಿಯನ್ನು ಅಕ್ರಮವಾಗಿ ಬಂಧದಲ್ಲಿರಿಸಿಕೊಂಡ ಶೆಡ್‌ನಲ್ಲೂ ಆರೋಪಿಗಳನ್ನ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಲಾಗಿದೆ.

ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಭಾಗಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳ ಪೈಕಿ 13 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಮತ್ತೊಬ್ಬ ಮಹಿಳೆ ಕೂಡ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಿ ಅನು ಎಂಬ ಮಹಿಳೆ ಎಸ್ಕೇಪ್‌ ಆಗಿದ್ದಾಳೆ. ಜಗದೀಶ್ @ ಜಗ್ಗ, ಅನು, ರವಿ, ರಾಜು ಎಂಬುವವರು ಸದ್ಯ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ | Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

Continue Reading

ಕರ್ನಾಟಕ

Actor Darshan: ದರ್ಶನ್ ಮೇಲೆ ಮತ್ತೊಂದು ಗಂಭೀರ ಆರೋಪ; ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ, ಬಾಡೂಟ, ಎಣ್ಣೆ ಪಾರ್ಟಿ!

Actor Darshan: ನಟ ದರ್ಶನ್‌ ಅವರು ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಹಾಗೂ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Actor Darshan
Koo

ಚಿಕ್ಕಮಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅವರು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯೂ ಆಗಿದ್ದು, ಜಿಲ್ಲೆಯ ಮುತ್ತೋಡಿ, ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋಗಳು‌ ಸದ್ಯ ವೈರಲ್ ಆಗಿವೆ.

ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಖಾಸಗಿ ಕಾರುಗಳ ಬಳಕೆ ನಿಷಿದ್ಧ. ಆದರೂ ದರ್ಶನ್‌ ಅವರಿಗೆ ಖಾಸಗಿ ವಾಹನ ಬಳಸಲು ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರಿನ ಅರಣ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಸಾಮಾನ್ಯ ಜನರಿಗೆ ಮಾತ್ರ ಕಠಿಣ ನಿಯಮಗಳು, ಸೆಲೆಬ್ರಿಟಿಗಳಿಗಾದರೆ ನಿಯಮ ಅನ್ವಯಿಸಲ್ಲವೇ ಎಂದು ಜನರು ಪ್ರಶ್ನಿಸಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಎಫ್‌ಐಆರ್‌

ಮೈಸೂರಿನ ಟಿ. ನರಸೀಪುರದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ನಟ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಐದು ನೋಟಿಸ್‌ ನೀಡಿದ್ದು, ಇದುವರೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

ಚಿತ್ರದುರ್ಗ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಅವನಿಗೆ ಇಂತಹ ಶಿಕ್ಷೆಯಾ? ಏನು ಮಾಡದ ತಪ್ಪಿಗೆ ನನ್ನ ಮಗ ಬಲಿ ಆದ. ಅವನ ಪಾಡಿಗೆ ಅವನು ಇದ್ದ, ಏನೂ ಮಾಡಿಲ್ಲ. ಯಾವುದೇ ಗಲಾಟೆ ಗೋಜಿಗೆ ಹೋಗಿರಲಿಲ್ಲ. ನಟ ದರ್ಶನ್‌ಗೆ ಶಿಕ್ಷೆ ಆಗಲೇಬೇಕು, ಅವನು ಹೀರೋ ಅಲ್ಲ ಖಳನಾಯಕ. ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಕಿಡಿಕಾರಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿರುವ ಅವರು, ಏನು ಮಾಡದ ತಪ್ಪಿಗೆ ನನ್ನ ಮಗ ಬಲಿಯಾಗಿದ್ದಾನೆ, ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನನ್ನ ಮಗ ಹಾಗೂ ಪವಿತ್ರ ಗೌಡ ನಡುವೆ ಚಾಟಿಂಗ್ ನಡೆದಿತ್ತು

ಇದನ್ನೂ ಓದಿ Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ನನ್ನ ಮಗ ಹಾಗೂ ಪವಿತ್ರಾ ಗೌಡ ನಡುವೆ ಚಾಟಿಂಗ್ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ನಿರಂತರ ಚಾಟಿಂಗ್ ಮಾಡುತ್ತಿದ್ದರು ಎಂದು ಮಾಹಿತಿ ಕೊಟ್ಟಿದ್ದಾರೆ ಎಂದು ರೇಣುಕಾ ಸ್ವಾಮಿ ತಾಯಿ ಹೇಳಿದ್ದಾರೆ. ಹಾಗಾದರೆ ಮೊದಲಿನಿಂದಲೂ ಪವಿತ್ರಾ ಹಾಗೂ ರೇಣುಕಾ ಮಧ್ಯೆ ಪರಿಚಯ ಇತ್ತೇ? ಕುಟುಂಬಕ್ಕೆ ಹೇಳದೆ ರೇಣುಕಾ ಸ್ವಾಮಿ ವಿಷಯ ಮುಚ್ಚಿಟ್ಟಿದ್ದರಾ? ಹಾಗಾದರೆ ಇಬ್ಬರ ಮಧ್ಯೆ ಏನು ಚಾಟಿಂಗ್‌ ನಡೆದಿತ್ತು ಎಂಬುವುದು ಕುತೂಹಲ ಮೂಡಿಸಿದ್ದು, ರೇಣುಕಾಸ್ವಾಮಿ ತಾಯಿ ಹೇಳಿಕೆ ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Continue Reading

ಕ್ರೀಡೆ

Mayank Agarwal: ಕುಕ್ಕೆಯಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌

Mayank Agarwal: ಅಗರ್ವಾಲ್‌ ಅವರು ಕುಟುಂಬ ಸಮೇತರಾಗಿ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

VISTARANEWS.COM


on

mayank agarwal
Koo

ಮಂಗಳೂರು: ಟೀಮ್​ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮಯಾಂಕ್‌ ಅಗರ್ವಾಲ್‌(Mayank Agarwal) ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke Shri Subrahmanya) ದೇವಸ್ಥಾನದಲ್ಲಿ ಇಂದು(ಬುಧವಾರ) ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಿದ್ದಾರೆ. ಸೋಮವಾರದಂದು ಅಗರ್ವಾಲ್‌ ಅವರು ಪತ್ನಿ ಆಶಿತಾ ಸೂದ್‌(Aashita Sood) ಮತ್ತು ಕುಟುಂಬದೊಂದಿಗೆ ಇಲ್ಲಿಗೆ ಆಗಮಿಸಿ ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದರು. ಈ ವೇಳೆ ಅವರನ್ನು ಹೊಟೇಲ್‌ನಲ್ಲಿ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಲಾಗಿತ್ತು.

ಮಂಗಳವಾರ ಬೆಳಗ್ಗೆ ಕುಟುಂಬ ಸಮೇತರಾಗಿ ದೇವಳದಲ್ಲಿ ಸರ್ಪಸಂಸ್ಕಾರ ಸೇವೆ ಆರಂಭಿಸಿದ್ದರು. ಅಲ್ಲದೇ, ಸೇವೆಯ ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದ್ದರು. ಬುಧವಾರ ಗೋಪೂಜೆ, ಬ್ರಹ್ಮಚಾರಿ ಆರಾಧನೆ ಮತ್ತು ನಾಗಪ್ರತಿಷ್ಠೆ ನೆರವೇರಿಸಿ ಸರ್ಪಸಂಸ್ಕಾರ ಸೇವೆಯನ್ನು ಸಮಾಪ್ತಿಗೊಳಿಸಲಿ ದೇವರ ದರ್ಶನ ಪಡೆದು ದೇವಾಲಯದಲ್ಲಿ ಭೋಜನ ಸ್ವೀಕರಿಸಿದ್ದಾರೆ.

ಇದಕ್ಕೂ ಮುನ್ನ ಅಗರ್ವಾಲ್‌ ಅವರು ಕುಟುಂಬ ಸಮೇತರಾಗಿ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಜೂನ್​ 9 ರಂದು ಅಗರ್ವಾಲ್​ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿತ್ತು.

ಅಗರ್ವಾಲ್ ದೇಶಿಯ ಕ್ರಿಕೆಟ್​ನಲ್ಲಿ ಉತ್ತಮ ಸಾಧನೆ ತೋರಿದರೂ ಅವರಿಗೆ ಭಾರತ ತಂಡದಲ್ಲಿ ಸರಿಯಾದ ಅವಕಾಶ ಸಿಗಲೇ ಇಲ್ಲ. ಈಗಾಗಲೇ ಹಲವು ಬಾರಿ ಭಾರತ ಟೆಸ್ಟ್​ ತಂಡದ ಪರ ಮಯಾಂಕ್​ ಆಡಿದ್ದರೂ ಅವರ ಸ್ಥಾನ ಮಾತ್ರ ಗಟ್ಟಿಯಾಗಿರಲಿಲ್ಲ. ಆರಂಭಿಕ ಆಟಗಾರರು ಗಾಯಗೊಂಡರೆ ಮಾತ್ರ ಅವರಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಅವರು ಸಿಕ್ಕ ಅನೇಕ ಅವಕಾಶದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅವರು ಇದುವರೆಗೆ 21 ಟೆಸ್ಟ್​ ಪಂದ್ಯಗಳನ್ನು ಆಡಿದ್ದು 4 ಶತಕ, 2 ದ್ವಿಶತಕ ಮತ್ತು 6 ಅರ್ಧಶತಕ ಬಾರಿಸಿದ್ದಾರೆ. 243 ರನ್​ ಅವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ Mayank Agarwal: ನೀರಿನ ಬಾಟಲ್ ಫೋಟೊ ಹಂಚಿಕೊಂಡು ರಿಸ್ಕ್​​ ತೆಗೆದುಕೊಳ್ಳಲಾರೆ ಎಂದ ​​ ಅಗರ್ವಾಲ್

ಇತ್ತೀಗೆಚೆ ಅಗರ್ವಾಲ್​ ಅವರು ರಣಜಿ ಕ್ರಿಕೆಟ್ ಪಂದ್ಯವನ್ನಾಡಲು ಅಗರ್ತಲಾದಿಂದ ಸೂರತ್‌ಗೆ ವಿಮಾನದಲ್ಲಿ ತೆರಳುವಾಗ ನೀರು ಎಂದು ಭಾವಿಸಿ ರಾಸಾಯನಿಕ ದ್ರಾವಣವೊಂದನ್ನು ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ತಮ್ಮ ಸೀಟಿನ ಮುಂಭಾಗದಲ್ಲಿದ್ದ ಬಾಟಲಿಯೊಂದನ್ನು ತೆಗೆದು, ಅದರಲ್ಲಿದ್ದ ಪಾನೀಯವನ್ನು ನೀರು ಎಂದು ಭಾವಿಸಿ ಕುಡಿದಿದ್ದರು. ಅದು ಶೌಚಾಲಯವನ್ನು ಸ್ವತ್ಛಗೊಳಿಸುವ ದ್ರಾವಣವಾಗಿತ್ತು. ವಿಮಾನ ಟೇಕ್‌ ಆಫ್ ಆಗದ ಕಾರಣ ಅಗರ್ವಾಲ್‌ ಅವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಿತ್ತು. ಆರಂಭದಲ್ಲಿ ಅಗರ್ವಾಲ್​ಗೆ ವಿಶಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿತ್ತು. ಬಳಿಕ ಸತ್ಯಾಂಶ ಬೆಳಕಿಗೆ ಬಂದಿತ್ತು.

Continue Reading
Advertisement
karnataka weather Forecast
ಮಳೆ6 mins ago

Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

TK Chathunni
ಕ್ರೀಡೆ9 mins ago

TK Chathunni: ಭಾರತ ಫುಟ್‌ಬಾಲ್‌ ತಂಡದ ಮಾಜಿ ಆಟಗಾರ, ಕೋಚ್​ ಟಿ.ಕೆ. ಚತುನ್ನಿ ನಿಧನ

Ready Saree Fashion Tips
ಫ್ಯಾಷನ್26 mins ago

Ready Saree Fashion Tips: ರೆಡಿ ಸೀರೆ ಪ್ರಿಯರು ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Virat Kohli
ಕ್ರೀಡೆ36 mins ago

Virat Kohli: ಅಮೆರಿಕ ವಿರುದ್ಧವಾದರೂ ವಿಶ್ವ ದಾಖಲೆ ನಿರ್ಮಿಸಲಿದ್ದಾರಾ ಕಿಂಗ್​ ಕೊಹ್ಲಿ?

Chandrababu Naidu
ದೇಶ59 mins ago

Chandrababu Naidu: ವಯಸ್ಸಲ್ಲಿ ಕಿರಿಯರಾದ ಮೋದಿ ಪಾದ ಮುಟ್ಟಲು ಮುಂದಾದ ಚಂದ್ರಬಾಬು ನಾಯ್ಡು; Video ಇದೆ

Benefits Of Eating Guava
ಆರೋಗ್ಯ1 hour ago

Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

Actor Darshan
ಪ್ರಮುಖ ಸುದ್ದಿ1 hour ago

Actor Darshan: ಡೆವಿಲ್‌ ಗ್ಯಾಂಗ್‌ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್‌

FIFA World Cup
ಕ್ರೀಡೆ1 hour ago

FIFA World Cup: ವಿವಾದಾತ್ಮಕ ಗೋಲಿನಿಂದಾಗಿ ಭಾರತಕ್ಕೆ ಸೋಲು; ತನಿಖೆಗೆ ಕೋರಿದ ಎಐಎಫ್‌ಎಫ್‌

Terror attack
ದೇಶ1 hour ago

Terror attack: ಮಗುವಿಗಾಗಿ ಪ್ರಾರ್ಥಿಸಲು ಹೋಗಿದ್ದ ದಂಪತಿ; ಪತ್ನಿ ಎದುರೇ ಉಗ್ರರ ಗುಂಡಿಗೆ ಬಲಿಯಾದ ಪತಿ

Actor Darshan wife Vijayalakshmi will get divorce
ಸ್ಯಾಂಡಲ್ ವುಡ್2 hours ago

Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌