Site icon Vistara News

Karnataka election 2023: ಏಪ್ರಿಲ್‌ 28ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ರಾಹುಲ್‌ ಗಾಂಧಿ ಪ್ರಚಾರ

Karnataka election 2023 Congress leader Rahul Gandhi on April 28 in Kushtagi of Koppal district

ಕುಷ್ಟಗಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಏಪ್ರಿಲ್ 28 ರಂದು ಪಟ್ಟಣಕ್ಕೆ ಆಗಮಿಸಲಿದ್ದು, ಕುಷ್ಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪುರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: Karnataka Election 2023: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೀಸಲಾತಿ ಮಿತಿ ಏರಿಕೆ; ರಾಹುಲ್‌ ಗಾಂಧಿ ಭರವಸೆ

ಮಧ್ಯಾಹ್ನ 3.30 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಕುಷ್ಟಗಿಗೆ ಅಗಮಿಸಲಿರುವ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ಜತೆಗೆ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ಬೆಲೆ ಏರಿಕೆಯಿಂದ ಜನಜೀವನ ದುಸ್ತರವಾಗಿರುವುದರ ಕುರಿತಂತೆ ರಾಹುಲ್ ಗಾಂಧಿ ಅವರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಹುಲ್ ಗಾಂಧಿ ಕಾರ್ಯಕ್ರಮಕ್ಕಾಗಿ ಕುಷ್ಟಗಿಯಲ್ಲಿ ಬೃಹತ್ ವೇದಿಕೆ ಸಿದ್ಧಗೊಳಿಸಲಾಗಿದೆ. ತಾವರಗೇರಾ ರಸ್ತೆಯಲ್ಲಿರುವ ಟಿಎಪಿಎಂಎಸ್ ಸ್ಥಳದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಲಾಡ್ಲೆ ಮಷಾಕ ದೋಟಿಹಾಳ ತಿಳಿಸಿದ್ದಾರೆ.

Exit mobile version