Site icon Vistara News

Karnataka Election 2023: ಜಿಲ್ಲಾದ್ಯಂತ 25 ಚೆಕ್‌ಪೋಸ್ಟ್‌ ನಿರ್ಮಾಣ; ಅಕ್ರಮ ಸಾಗಾಟಗಳ ಮೇಲೆ ಹೆಚ್ಚಿನ ನಿಗಾ: ಪ್ರಭುಲಿಂಗ ಕವಳಿಕಟ್ಟಿ

DC Prabhulinga Kavalikatti karwar

#image_title

ಕಾರವಾರ: “ಚುನಾವಣಾ ನೀತಿ ಸಂಹಿತೆ (Karnataka Election 2023) ಜಾರಿಗೆ ಎರಡು ವಾರಗಳ ಮೊದಲೇ ಪ್ರಾಥಮಿಕ ಹಂತದ ಚುನಾವಣಾ ಕಾರ್ಯಗಳನ್ನು ಜಿಲ್ಲಾಡಳಿತ ಆರಂಭಿಸಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ಸುಮಾರು 69 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ” ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈಗಾಗಲೇ ಜಿಲ್ಲಾದ್ಯಂತ ಇದ್ದ ರಾಜಕೀಯ ವ್ಯಕ್ತಿಗಳ ಬ್ಯಾನರ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಗಿದೆ. ಇಂದಿನಿಂದ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳ ಫೋಟೊಗಳಿರುವ ಬ್ಯಾನರ್‌ಗಳು ಹಾಗೂ ಸರ್ಕಾರದ ವೆಬ್‌ಸೈಟ್‌ಗಳಿಂದ ಅದನ್ನು ಕೂಡಲೇ ತೆರವುಗೊಳಿಸಲಾಗುವುದು” ಎಂದರು.

ಇದನ್ನೂ ಓದಿ: Rajkummar Rao: ಶಾರುಖ್ ಖಾನ್ ವ್ಯಕ್ತಿತ್ವ ಕೊಂಡಾಡಿದ ನಟ ರಾಜಕುಮಾರ್ ರಾವ್, ತಮ್ಮ ತಾಯಿಯ ಬಗ್ಗೆ ಹೇಳಿದ್ದೇನು?

ಈಗಾಗಲೇ ಜಿಲ್ಲಾದ್ಯಂತ 25 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದು ಚುನಾವಣೆಯಲ್ಲಿ ಆಮಿಷ ಒಡ್ಡುವ ನಿಟ್ಟಿನಲ್ಲಿ ಹಣ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತದೆ. ಹೀಗಾಗಿ ವಾಹನಗಳ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ ವಿವಿಧ ಪ್ರಕರಣಗಳಲ್ಲಿ ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 40 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಪ್ರಕರಣಗಳಲ್ಲಿ ಒಟ್ಟು 10 ಲಕ್ಷ ರೂ. ದಾಖಲೆರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸಲಾಗುತ್ತಿದ್ದ 7.5 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ಉಳಿದಂತೆ ಗಾಂಜಾ, ಚರಸ್‌ನಂತಹ ಮಾದಕ ವಸ್ತುಗಳನ್ನೂ ಭಾರೀ ಪ್ರಮಾಣದಲ್ಲಿ ಪತ್ತೆ ಹಚ್ಚಿದ್ದು ಒಟ್ಟು 69 ಲಕ್ಷ ರೂ. ಮೌಲ್ಯದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ಈಗಾಗಲೇ ಜಪ್ತಿಪಡಿಸಿಕೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಇದನ್ನೂ ಓದಿ: Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ

“ಸರ್ಕಾರದಿಂದ ಜಾರಿಯಾದ ಕಾಮಗಾರಿಗಳಲ್ಲಿ ಆರಂಭವಾಗಿರುವ, ಅನುಮೋದನೆಯಾಗಿ ಪ್ರಾರಂಭವಾಗದ ಹಾಗೂ ಅನುಮೋದನೆಯಾಗದ ಕಾಮಗಾರಿಗಳ ಪಟ್ಟಿಯನ್ನು ಮಾಡಲಾಗುತ್ತಿದೆ. ಇದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾಮಗಾರಿಗಳ ಕೆಲಸದ ಮೇಲೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಮಾದ್ಯಮಗಳ ಮೇಲೂ ನಿಗಾ ಇರಿಸಲಾಗುತ್ತಿದ್ದು ಪ್ರಕಟವಾಗುವ ಜಾಹೀರಾತುಗಳು ಹಾಗೂ ಸುದ್ದಿಗಳಿಂದ ನೀತಿ ಸಂಹಿತೆ ಉಲ್ಲಂಘನೆಯಾಗುವಂತೆ ಇದ್ದಲ್ಲಿ ಅಂಥವುಗಳ ಮೇಲೂ ಕ್ರಮ ಕೈಗೊಳ್ಳಲಾಗುವುದು” ಎಂದರು.

Exit mobile version