ಬಳ್ಳಾರಿ: ಕೆಆರ್‌ಪಿಪಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಸಚಿವರಾದ ವೇಳೆ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಇದನ್ನು ಗಮನಿಸಿ ಕೆಆರ್ ಪಿಪಿ (KRPP) ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ವೀ.ವಿ. ಸಂಘದ ಜಂಟಿ ಕಾರ್ಯದರ್ಶಿ ದರೂರು ಶಾಂತನಗೌಡ ತಿಳಿಸಿದ್ದಾರೆ.
ನಗರದ ಮರ್ಚೇಡ್ ಹೋಟೆಲ್‌ನಲ್ಲಿ ಕೆಆರ್‌ಪಿಪಿ ಪಕ್ಷದಿಂದ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ: Karnataka Election 2023: ಖರ್ಗೆ ತುಂಬಾ ಒಳ್ಳೆಯವರು, ಅವರು ಸಿದ್ದರಾಮಯ್ಯ ರೀತಿ ಮಾತನಾಡೋದು ಬೇಡ ಎಂದ ಸಿಂಹ
ನಾನು ಮುಂದಿನ ದಿನಗಳಲ್ಲಿ ಕೆಆರ್‌ಪಿಪಿ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣಾ ಲಕ್ಷ್ಮಿ ಪರವಾಗಿ ಪ್ರಚಾರ ಮಾಡಲಿದ್ದೇನೆ. ನಗರದಲ್ಲಿ ಅರುಣಾ ಲಕ್ಷ್ಮಿ ಪಕ್ಷದಿಂದ ಜಯ ಗಳಿಸಿದ ಬಳಿಕ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಅರ್ಧಕ್ಕೆ ನಿಂತ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಜನರು ಬೇಸತ್ತು ಕೆಆರ್ ಪಿಪಿಯನ್ನು ಬೆಂಬಲಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಕೆಆರ್ ಪಿಪಿ ಜಿಲ್ಲಾಧ್ಯಕ್ಷ ಜಿ.ರಾಜಶೇಖರಗೌಡ, ನಂದೀಶ, ಕುರಿಹಟ್ಟಿ ರಾಜು, ಮರಿದೇವಯ್ಯ, ದಿವಾಕರ್ , ಜಾನಕುಂಟೆ ಬಸವರಾಜ ಹಾಗೂ ಇತರರಿದ್ದರು.