ಬಳ್ಳಾರಿ: ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಬಿಜೆಪಿಯ ಕೇಂದ್ರದ ಹಾಗೂ ರಾಜ್ಯ ನಾಯಕರು (Leaders) ಏ. 25 ಮತ್ತು 26 ರಂದು ಜಿಲ್ಲೆಯಲ್ಲಿ ಮತ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮುರಹರಿ ಗೌಡ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.25ರಿಂದ ಎರಡು ದಿನಗಳ ಕಾಲ ಬಳ್ಳಾರಿ ನಗರದಲ್ಲಿ ಕೇಂದ್ರ ಇಂಧನ ಸಚಿವ ಕೃಷ್ಣಪ್ಪ ಗುಜ್ವಾರ್, ಸಂಡೂರಿನಲ್ಲಿ ಮಾಜಿ ಸಂಸದ ಜಿತೇಂದ್ರರೆಡ್ಡಿ, ಗ್ರಾಮಾಂತರದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ರೆಡ್ಡಿ, ಕಂಪ್ಲಿಯಲ್ಲಿ ಮಾಜಿ ಸಂಸದೆ ಜೆ.ಶಾಂತಾ ಅವರಿಂದ ಎರಡು ದಿನಗಳ ವರೆಗೆ ಮತ ಪ್ರಚಾರ ನಡೆಸಲಿದ್ದಾರೆ. ಜತೆಗೆ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಚುನಾವಣೆ ಚಟುವಟಿಕೆಗಳನ್ನು ಕೂಡ ಗಮನಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಪೊರೇಟರ್ ಗೆ ನೋಟಿಸ್
36ನೇ ವಾರ್ಡಿನ ಪಾಲಿಕೆ ಸದಸ್ಯೆ ಕಲ್ಪನ ವೆಂಕಟರಾಮರೆಡ್ಡಿ ಕೆಆರ್ಪಿಪಿ ಪಕ್ಷದ ಪರವಾಗಿ ಚುನಾವಣೆ ಪ್ರಚಾರ ನಡೆಸಿದ್ದರು. ಅವರಿಗೆ ನೋಟಿಸ್ ನೀಡಿ 24 ಗಂಟೆಯೊಳಗೆ ಉತ್ತರ ನೀಡಬೇಕು ಎಂಬುದಾಗಿ ತಿಳಿಸಿದ್ದೇವೆ. ಇನ್ನು ಮಾಜಿ ಶಾಸಕ ಅನಿಲ್ ಲಾಡ್ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿರುವುದು ಬಿಜೆಪಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: Basavaraj Bommai: ರಾಮನಗರ, ಕನಕಪುರ, ಚನ್ನಪಟ್ಟಣದಲ್ಲಿ ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದ: ಸಿಎಂ ಬೊಮ್ಮಾಯಿ ಆರೋಪ
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಅಶೋಕ, ಬಿಜೆಪಿ ಮುಖಂಡರಾದ ಡಾ. ಬಿ.ಕೆ. ಸುಂದರ್, ರಾಜೀವ್ ತೊಗರಿ ಹಾಗೂ ಇತರರು ಪಾಲ್ಗೊಂಡಿದ್ದರು.