Site icon Vistara News

Karnataka Election 2023: ಗದಗ, ಹಾವೇರಿ, ಅಣ್ಣಿಗೇರಿ, ಹರಿಹರದಲ್ಲಿ ಇಂದು ಅಮಿತ್‌ ಶಾ ಮತಬೇಟೆ

Will you take away the reservation of Lingayats and Vokkaligas and give them to Muslims Amit Shah questions to Congress

ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಶಾ ಅವರು ಭಾಗಿಯಾಗಿ ನವಲಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ ಮುನೇನಕೊಪ್ಪ ಪರ ಮತಯಾಚನೆ ಮಾಡಲಿದ್ದಾರೆ.

ಗದಗ: ಗದಗ ಜಿಲ್ಲೆಯಲ್ಲಿ ಶಾ ಅವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 12-50ಕ್ಕೆ ಹೆಲಿಕಾಪ್ಟರ್ ಮೂಲಕ ಲಕ್ಷ್ಮೇಶ್ವರ ಪಟ್ಟಣಕ್ಕೆ ಆಗಮಿಸಲಿರುವ ಅಮಿತ್ ಶಾ ಮಧ್ಯಾಹ್ನ 1 ಗಂಟೆಗೆ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. 2.10ಕ್ಕೆ ಲಕ್ಷ್ಮೇಶ್ವರದಿಂದ‌ ಹಾವೇರಿ‌ ಜಿಲ್ಲೆಯ ಅಕ್ಕಿಆಲೂರಿಗೆ ಪ್ರಯಾಣಿಸಲಿದ್ದಾರೆ.

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿಗೆ ಅಮಿತ್ ಶಾ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ‌ ಪ್ರಚಾರ ಮಾಡಲಿದ್ದಾರೆ. ಬಹಿರಂಗ ಸಭೆಯಲ್ಲಿ ಭಾಗವಹಿಸುತ್ತಾರೆ.

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರಕ್ಕೆ ಭೇಟಿ ಕೊಟ್ಟು ಹರಿಹರ ಗಾಂಧಿ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಹರಿಹರ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್ ಪರ ಮತಯಾಚನೆ ಮಾಡಲಿದ್ದಾರೆ. ಸಂಜೆ 4.40ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‌ಗೆ ಬಂದಿಳಿಯಲಿರುವ ಅವರು ಹರಿಹರ ಗಾಂಧಿ ಮೈದಾನಕ್ಕೆ ಬಂದು ಸಂಜೆ 5 ಗಂಟೆಗೆ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಜೆ 7 ಗಂಟೆಗೆ ಜಿಎಂಐಟಿ ಗೆಸ್ಟ್ ಹೌಸ್‌ಗೆ ಆಗಮಿಸಿ 8.15ಕ್ಕೆ ನಡೆಯಲಿರುವ ಬಿಜೆಪಿ ಪ್ರಮುಖರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಗೆಲುವಿಗೆ ಸಲಹೆ-ಸೂಚನೆ ನೀಡಲಿದ್ದಾರೆ. ರಾತ್ರಿ 9.15ಕ್ಕೆ ಸಭೆ ಮುಗಿಸಿ‌ ಗೆಸ್ಟ್ ಹೌಸ್‌ನಲ್ಲಿ ಉಳಿದುಕೊಂಡು ಮಾರ್ಚ್ 29ರಂದು ಬೆಳಗ್ಗೆ 10 ಗಂಟೆಗೆ ಜಿಎಂಐಟಿ ಹೆಲಿಪ್ಯಾಡ್‌ನಿಂದ ಮಡಿಕೇರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: Karnataka Election 2023: ಕರ್ನಾಟಕ ವಿಧಾನಸಭೆ ಚುನಾವಣೆ ಕಣದ ಕ್ಷಣಕ್ಷಣದ ಸುದ್ದಿಗಳು: ಇಂದು ಬಿಜೆಪಿಯಿಂದ ಅಮಿತ್‌ ಶಾ, ಕಾಂಗ್ರೆಸ್‌ನಿಂದ ರಾಹುಲ್‌ ಗಾಂಧಿ ಪ್ರಚಾರ

Exit mobile version