ಶಿವಮೊಗ್ಗ: ನೀವೇನಾದರೂ ಮತದಾನಕ್ಕೆ (Voting) ಚಕ್ಕರ್ ಹಾಕಿ ಪ್ರವಾಸಕ್ಕೆ (Trip Planning) ಹೊರಟರೆ ನಿರಾಸೆ ಆಗುವುದು ಖಂಡಿತ. ವಿಧಾನಸಭಾ ಸಾರ್ವತ್ರಿಕ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಮತದಾನದ ದಿನದಂದು ಅಂದರೆ ಮೇ 10ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಆದರೆ, ಈ ರಜೆಯನ್ನು ದುರುಪಯೋಗ ಪಡಿಸಿಕೊಂಡು ಮತದಾನದ ಮಾಡದೆ ಪ್ರವಾಸಕ್ಕೆ ಹೊರಡುವವರಿಗೆ ಟಕ್ಕರ್ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಮೇ 10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತದಾನದ ದಿನದಂದು ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮತದಾನ ಮಾಡದೆ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ: Karnataka Election : ಹಾಸನದ ಜನರಿಗೆ ಬುದ್ಧಿ ಇಲ್ಲ ಅಂದ್ರಾ ಪ್ರೀತಂ ಗೌಡ; ಜೆಡಿಎಸ್ ವೈರಲ್ ಮಾಡಿದ ವಿಡಿಯೊದಲ್ಲೇನಿದೆ?
ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು 15 ದಿನಕ್ಕೂ ಮುಂಚಿತವಾಗಿಯೇ ಜಲಪಾತ ಪ್ರವೇಶಕ್ಕೆ ನಿರ್ಬಂಧ ಇರುವುದಾಗಿ ಫ್ಲೆಕ್ಸ್ ಹಾಕಿದ್ದಾರೆ. ಆ ಮೂಲಕ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.