ಬೆಂಗಳೂರು: ಬಿಟಿಎಂ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ.ಆರ್.ಶ್ರೀಧರರೆಡ್ಡಿ ಅವರು ನಾಮಪತ್ರ (Karnataka Election 2023) ಸಲ್ಲಿಸಿದರು. ಸಾವಿರಾರು ಬೆಂಬಲಿಗರೊಂದಿಗೆ ಬೃಹತ್ ರೋಡ್ ಶೋ ನಡೆಸಿದ ಅವರು ಆಡುಗೋಡೆ ಬಿಬಿಎಂಪಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಶ್ರೀಧರರೆಡ್ಡಿ ಅವರಿಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕೆ.ಆರ್.ಶ್ರೀಧರರೆಡ್ಡಿ, “ಬಿಟಿಎಂ ಲೇಔಟ್ ಕಾಂಗ್ರೆಸ್ ಭದ್ರಕೋಟೆ ಎನ್ನುವುದೆಲ್ಲ ಸುಳ್ಳು. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ನಾನು 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೃಹತ್ ರೋಡ್ ಶೋ
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿ, “ಬಿಟಿಎಂ ವಿಧಾನಸಭೆ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಶ್ರೀಧರರೆಡ್ಡಿ ಅವರ ಬೆಂಬಲಕ್ಕೆ ನಾನು ನಿಂತಿದೇನೆ. ಕ್ಷೇತ್ರದಲ್ಲಿ ಈ ಬಾರಿ ರಾಮಲಿಂಗಾರೆಡ್ಡಿ ಅವರ ಕುಟುಂಬ ರಾಜಕೀಯ ನಡೆಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ನವ ಭಾರತ ನಿರ್ಮಾಣದ ಕನಸು ಕಟ್ಟಿರುವ ಕಾರಣ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿಯು 135-150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದು ಹೇಳಿದರು.
ಇದನ್ನೂ ಓದಿ: Karnataka Election 2023: ಜೆಡಿಎಸ್ ಅಭ್ಯರ್ಥಿ ಪ್ರೊ. ನಾಗೇಶ ಎಚ್. ನಾಯ್ಕ ಕಾಗಾಲ ನಾಮಪತ್ರ ಸಲ್ಲಿಕೆ
ಬಿಟಿಎಂ ಲೇಔಟ್‌ನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರ ಪೈಪೋಟಿ ಇದೆ. ಹಾಲಿ ಶಾಸಕ, ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ರಾಮಲಿಂಗಾರೆಡ್ಡಿ ಅವರು ಮರು ಆಯ್ಕೆ ಬಯಸಿ ಕಣದಲ್ಲಿದ್ದಾರೆ. ಇವರಿಗೆ ಕೆ.ಆರ್.ಶ್ರೀಧರರೆಡ್ಡಿ ತೀವ್ರ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ಇನ್ನು ಜೆಡಿಎಸ್ ವೆಂಕಟೇಶ್ ಅವರಿಗೆ ಬುಧವಾರ ಟಿಕೆಟ್ ಘೋಷಿಸಿದೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ನೇರ ಹಣಾಹಣಿ ಇತ್ತು.