ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ (Karnataka Election 2023) ಮೇ 10ರಂದು ನಡೆಯಲಿದ್ದು, 13ರಂದು ಫಲಿತಾಂಶ ಹೊರಬೀಳಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಇನ್ನಿತರ ಕೆಲವು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಿಜೆಪಿ ಪಕ್ಷ ಈಗಾಗಲೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂದು ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಪ್ರಣಾಳಿಕೆಯ ಮುಖ್ಯಾಂಶಗಳು ;
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಬದಲಾವಣೆ
ಮೀಸಲಾತಿ ಪ್ರಮಾಣ ಶೇ 50 ರಿಂದ 75 ರಷ್ಟು ಹೆಚ್ಚಳ
ಎಸ್ ಸಿ ಸಮುದಾಯಕ್ಕೆ ಶೇ 15 ರಿಂದ 17 ರಷ್ಟು ಮೀಸಲಾತಿ.
ಎಸ್ ಟಿ ಸಮುದಾಯಕ್ಕೆ 3ರಿಂದ 7ಕ್ಕೆ ಏರಿಕೆ
ಅಲ್ಪಸಂಖ್ಯಾತರಿಗೆ ಶೇ .4 ರಷ್ಟು ಮೀಸಲಾತಿ ಮರುಸ್ಥಾಪನೆ.
ಕಾಂಗ್ರೆಸ್ ಪ್ರಣಾಳಿಕೆಯ ಮುಖ್ಯಾಂಶಗಳು ;
ಆನ್‌ಲೈನ್ ಸಾಲ ನೀಡುವ ಎಲ್ಲ ಆ್ಯಪ್ ಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನೀತಿ 100 ದಿನದೊಳಗೆ ಜಾರಿ.
ಕನಕಪುರದಲ್ಲಿ ಅತ್ಯಾಧುನಿಕ ವಿಶ್ವದರ್ಜೆಯ ವಿಧಿವಿಜ್ಜಾನ ವಿಶ್ವವಿದ್ಯಾಲಯ ಸ್ಥಾಪನೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು
ಕಾಂಗ್ರೆಸ್ ಪ್ರಣಾಳಿಕೆಯ ಮುಖ್ಯಾಂಶಗಳು
ಭಯೋತ್ಪಾದನೆ ಹಾಗೂ ಅತ್ಯಾಚಾರ, ಮಹಿಳೆಯರ ಮೇಲೆ ಆಸಿಡ್ ದಾಳಿಯಂತ ಹೇಯ ಕೃತ್ಯಗಳ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಲು ವಿಶೇಷ ತ್ವರಿತಗತಿಯ ನ್ಯಾಯಾಲಯಗಳ ಸ್ಥಾಪನೆ.
ಕಾಂಗ್ರೆಸ್ ಪ್ರಣಾಳಿಕೆಯ ಮುಖ್ಯಾಂಶಗಳು;
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ನಿಶ್ಚಿತ ಗೌರವಧನ ರೂ 5,000/- ದಿಂದ ರೂ 8,000/- ಹೆಚ್ಚಳ.
ಸರಕಾರಿ ಸ್ವಾಮ್ಯದಲ್ಲಿರುವ ಸಾರಿಗೆ ನಿಗಮಗಳ ಉದ್ಯೋಗಿಗಳ ವೇತನ ಇತ್ಯಾದಿ ಸೌಲಭ್ಯಗಳನ್ನು ಸರ್ಕಾರಿ ನೌಕರರಂತೆ ನೀಡುವ ತೀರ್ಮಾನ.
ಬಿಸಿಯೂಟದ ಅಡಿಗೆಯವರಿಗೆ ಮಾಸಿಕ ಗೌರವಧನ ರೂ 3,600ರಿಂದ ರೂ 6,000ಕ್ಕೆ ಹೆಚ್ಚಳ
ಕಾಂಗ್ರೆಸ್ ಪ್ರಣಾಳಿಕೆಯ ಮುಖ್ಯಾಂಶಗಳು;
ಗುತ್ತಿಗೆ ನೌಕರರ ಕಾಯಂ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ ಕಳೆದ 15-20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶಗಳ ಕಾಂಗ್ರೆಸ್ ಸರಕಾರಗಳ ಆದೇಶಗಳ ಮಾದರಿಯಲ್ಲಿ ಕಾಯಂಗೊಳಿಸುವ ಪ್ರಕ್ರಿಯೆ ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದೆ.