ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ (Karnataka Election 2023) ಮೇ 10ರಂದು ನಡೆಯಲಿದ್ದು, 13ರಂದು ಫಲಿತಾಂಶ ಹೊರಬೀಳಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಇನ್ನಿತರ ಕೆಲವು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಿಜೆಪಿ ಪಕ್ಷ ಈಗಾಗಲೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂದು ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಓಪಿಎಸ್ ಜಾರಿಯ ತೀರ್ಮಾನ ಪ್ರಕಟಿಸಿದ ಕಾಂಗ್ರೆಸ್
2006ರಿಂದ ನೇಮಕವಾದ, ಪಿಂಚಣಿಗೆ ಅರ್ಹತೆಯುಳ್ಳ ಎಲ್ಲಾ ಸರಕಾರಿ ಮತ್ತು ಅನುದಾನಿತ ಉದ್ಯೋಗಿಗಳನ್ನು ಹಳೆಯ ಪಿಂಚಣಿ ಯೋಜನೆಯ ಅಡಿಯಲ್ಲಿ ತರಲು ಸಹಾನುಭೂತಿಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಹೇಳಿದೆ.
ಆಟೋ ಚಾಲಕ ಮಂಡಳಿ ಮತ್ತು ಟ್ಯಾಕ್ಸಿ ಚಾಲಕ ಮಂಡಳಿ ಸ್ಥಾಪಿಸಿ, ತಲಾ 200 ಕೋಟಿ ರೂ. ಆವರ್ತನ ನಿಧಿ ಅನುದಾನ. ಬೀದಿ ಬದಿ ವ್ಯಾಪಾರಿಗಳ ನೆರವಿಗೆ ಒಂದು ಬಾರಿ 20 ಸಾವಿರ ರೂ.ಅನುದಾನ. ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ ಮಂಡಳಿ ಸ್ಥಾಪನೆಗೆ 3000 ಕೋಟಿ ರೂ.ಹೂಡಿಕೆ
ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ.33ರಷ್ಟು ಮಹಿಳೆಯರಿಗೆ ಮೀಸಲಾತಿ. ಇದರಲ್ಲಿ ಶೇ.1ರಷ್ಟು ತೃತೀಯ ಲಿಂಗಿಗಳಿಗೆ ಅವಕಾಶ. ರಾತ್ರಿ ಪಾಳಿಯ ಪೊಲೀಸರಿಗೆ 5 ಸಾವಿರ ರೂ.ವಿಶೇಷ ಮಾಸಿಕ ಭತ್ಯೆ
ಆಶಾ ಕಾರ್ಯಕರ್ತೆಯರ ಗೌರವ ಧನವನ್ನು 5000 ರೂ.ದಿಂದ 8000ಕ್ಕೆ ಏರಿಕೆ ಮಾಡುವುದಾಗಿ ಮತ್ತು ವೇತನವನ್ನು 11,500ರಿಂದ 15000ರೂ.ಗೆ ಏರಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್
ಗೃಹಲಕ್ಷ್ಮೀ ಯೋಜನೆಯಡಿ ಹೆಣ್ಣುಮಕ್ಕಳಿಗೆ ತಿಂಗಳಿಗೆ 2000 ರೂಪಾಯಿ. ಎಲ್ಲ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ