ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ (Karnataka Election 2023) ಮೇ 10ರಂದು ನಡೆಯಲಿದ್ದು, 13ರಂದು ಫಲಿತಾಂಶ ಹೊರಬೀಳಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಇನ್ನಿತರ ಕೆಲವು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಿಜೆಪಿ ಪಕ್ಷ ಈಗಾಗಲೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂದು ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪ್ರತಿ ತಿಂಗಳೂ 10 ಕೆಜಿ ಅಕ್ಕಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್
ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ, ಯುವನಿಧಿ ಯೋಜನೆಯಡಿ ಪದವೀಧರ ನಿರುದ್ಯೋಗಿಗಳಿಗೆ ತಿಂಗಳಿಗೆ 3000 ರೂಪಾಯಿ ಭತ್ಯೆ
ಜನರಿಗೆ ನೆಮ್ಮದಿ ಕೊಡುವ ಪ್ರಣಾಳಿಕೆ
ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿ, ಇದು ಜನರಿಗೆ ನೆಮ್ಮದಿ ಕೊಡುವ ಪ್ರಣಾಳಿಕೆ ಎಂದು ಹೇಳಿದರು.