Site icon Vistara News

Karnataka Election 2023 Live Updates: ಚಿತ್ತಾಪುರದಲ್ಲಿ ಮೇ 6ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು

Karnataka Election 2023 Live updates Check details In Kannada

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ (Karnataka Election 2023) ಮೇ 10ರಂದು ನಡೆಯಲಿದ್ದು, 13ರಂದು ಫಲಿತಾಂಶ ಹೊರಬೀಳಲಿದೆ. ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಸೇರಿ ಇನ್ನಿತರ ಕೆಲವು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಿಜೆಪಿ ಪಕ್ಷ ಈಗಾಗಲೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂದು ಕಾಂಗ್ರೆಸ್​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

Ramaswamy Hulakodu

ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ ಭಾಷಣ

ಚಿತ್ರದುರ್ಗದಲ್ಲಿ ಬಿಜೆಪಿಯ ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಹಣ ಮೀಸಲಿಟ್ಟಿರುವುದಾಗಿ ಅವರು ಹೇಳಿದ್ದಾರೆ.

Ramaswamy Hulakodu

ಕಾಂಗ್ರೆಸ್‌ ಪ್ರಣಾಳಿಕೆಯ ಮುಖ್ಯಾಂಶಗಳು;

-ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತದ ಬಲವರ್ಧನೆಯ ಭರವಸೆ.

– ಬೆಂಗಳೂರಿನಲ್ಲಿ ಸಾರಿಗೆ ಸಂಪರ್ಕ ಕಲ್ಪಿಸಲು ಇ-ರಿಕ್ಷಾಗಳ ಅಳವಡಿಕೆ.

– ಎಲ್ಲ ಮೀನುಗಾರರ ಮಹಿಳೆಯರಿಗೆ ಒಂದು ಲಕ್ಷದವರೆಗೆ ಬಡ್ಡಿ ರಹಿತ ಸಾಲ.

– ಮಾಜಿ ಸಿಎಂ ಬಂಗಾರಪ್ಪ ಸರ್ಕಾರ ಜಾರಿಗೆ ತಂದಿದ್ದ ಆರಾಧನಾ ಯೋಜನೆ ಮರು ಅನುಷ್ಠಾನ.

– ಸಣ್ಣ ದೇಗುಲ, ಮಠಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ.

Ramaswamy Hulakodu

ಬಜರಂಗದಳ, ಪಿಎಫ್‌ಐನಂತಹ ಸಂಘಟನೆ ನಿಷೇಧ

ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಕ್ರಮ.

ಭಜರಂಗದಳ ಮತ್ತು ಪಿಎಫ್‌ಐನಂತ ಸಂವಿಧಾನ ವಿರೋಧಿ ಸಂಘಟನೆಗಳ ವಿರುದ್ಧ ನಿಷೇಧವೂ ಸೇರಿದಂತೆ ಬಲವಾದ ಕ್ರಮಗಳ ಜಾರಿ.

Ramaswamy Hulakodu

ಕಾಂಗ್ರೆಸ್‌ ಪ್ರಣಾಳಿಕೆಯ ಮುಖ್ಯಾಂಶಗಳು;

ಸಣ್ಣ ವ್ಯಾಪಾರಿಗಳಿಗೆ ಮತ್ತು ಅಂಗಡಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲು ಒಂದು ಸಾವಿರ ಕೋಟಿ ಕಲ್ಯಾಣ ನಿಧಿ ಸ್ಥಾಪನೆ.

ಎತ್ತಿನಹೊಳೆ ಯೋಜನೆಯನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು.

Ramaswamy Hulakodu

ಕಾಂಗ್ರೆಸ್‌ ಪ್ರಣಾಳಿಕೆಯ ಮುಖ್ಯಾಂಶಗಳು;

5 ವರ್ಷದಲ್ಲಿ ಎಲ್ಲ ಎಸ್ ಸಿ‌/ಎಸ್ ಟಿ ಕುಟುಂಬಗಳಿಗೆ ಸರ್ಕಾರದಿಂದಲೇ ಮನೆಗಳ ನಿರ್ಮಾಣ.

ಜೋಗಪ್ಪ ಸಮುದಾಯ ಮತ್ತು ತೃತೀಯ ಲಿಂಗಿಗಳ ಮಕ್ಕಳಿಗೆ ಖಚಿತ ಉನ್ನತ ಶಿಕ್ಷಣ.

ಮಂಗಳಮುಖಿ ಮಂಡಳಿ ಸ್ಥಾಪನೆ. ಇದಕ್ಕೆ 100 ಕೋಟಿ ಅನುದಾನ ನೀಡಿಕೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಸಿದ್ದಪಡಿಸಿದ್ದ ಜಾತಿ ಜನಗಣತಿ ವರದಿ ಅನುಷ್ಟಾನ.

Exit mobile version