ತುಮಕೂರು: ರಾಜ್ಯ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆಯ ಅವಧಿ ಮುಗಿದು, ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಚುನಾವಣೆ ಪ್ರಚಾರ ಆರಂಭಿಸಿರುವ ಬೆನ್ನಲ್ಲೇ ತುಮಕೂರಿನಲ್ಲಿ ಗೂಂಡಾ ರಾಜಕೀಯ ಆರಂಭವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರಿದ ಇಬ್ಬರು ಮುಸ್ಲಿಂ ಮುಖಂಡರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕನಕಪುರದಲ್ಲಿ ಡಿ ಕೆ ಶಿವಕುಮಾರ್ ನಾಮಪತ್ರ ಅಂಗೀಕಾರ
ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರಗೊಂಡಿದೆ.
ನಾಮಪತ್ರ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿಗಳು ನಾಮಪತ್ರವನ್ನು ಒಪ್ಪಿದ್ದಾರೆ.
ಡಿಕೆಶಿ ಪರ ವಕೀಲರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಡಿಕೆಶಿ ಸಲ್ಲಿಸಿದ್ದ ನಾಲ್ಕು ನಾಮಪತ್ರಗಳೂ ಬಹುತೇಕ ಸ್ವೀಕೃತವಾಗಿವೆ.
ಚಾಮರಾಜನಗರದಲ್ಲಿ ಸೋಮಣ್ಣರನ್ನು ಗೆಲ್ಲಿಸುತ್ತೇವೆ
ಚಾಮನರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ವಿ.ಸೋಮಣ್ಣರನ್ನು ಎಲ್ಲ ನಾಯಕರು ಸೇರಿ ಗೆಲ್ಲಿಸುತ್ತೇವೆ ಎಂದು ಬಿಜೆಪಿಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಹನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿರುವ ಅವರು, ಪಕ್ಷದ ವರಿಷ್ಠರ ತೀರ್ಮಾನಂತೆ ನಾವು ನಡೆದುಕೊಳ್ಳುತ್ತೇವೆ. ಸೋಮಣ್ಣ ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.
ಮುರುಗೇಶ್ ನಿರಾಣಿಗೆ ನಾಮಪತ್ರ ತೀರಸ್ಕೃತಗೊಳ್ಳುವ ಆತಂಕ
ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಮುರುಗೇಶ್ ನಿರಾಣಿಗೆ ನಾಮಪತ್ರ ತಿರಸ್ಕೃತವಾಗುವ ಆತಂಕ ಎದುರಾಗಿದೆ.
ಹೀಗಾಗಿ ಅವರ ಸಹೋದರ ಸಂಗಮೇಶ ನಿರಾಣಿ ಕೂಡ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಮುರುಗೇಶ್ ನಿರಾಣಿ ನಾಮಪತ್ರ ಸಲ್ಲಿಸುವಾಗ ತೆರಿಗೆ ಪಾವತಿ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಶಾಂತವೀರಪ್ಪ ಗೌಡ ರಾಜೀನಾಮೆ
ಶಿಕಾರಿಪುರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರ ಶಾಂತವೀರಪ್ಪ ಗೌಡ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಜೊತೆ ಯಡಿಯೂರಪ್ಪ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಗಂಗಹನುಮಯ್ಯ ಕಾಂಗ್ರೆಸ್‌ಗೆ
ಮಾಜಿ ಶಾಸಕ, ಪರಿಶಿಷ್ಟ ಜಾತಿಯ ಪ್ರಮುಖ ನಾಯಕ ಗಂಗಹನುಮಯ್ಯ, ಮಾಜಿ ಮೇಯರ್ ಶಾಂತಕುಮಾರಿ, ಮಾಜಿ ಕಾರ್ಪೊರೇಟರ್ ಕಮಲಾ, ನಾರಾಯಣಸ್ವಾಮಿ ಕಾಂಗ್ರೆಸ್ ಸೇರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬರಮಾಡಿಕೊಂಡರು. ಇವರೆಲ್ಲರೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.