ತುಮಕೂರು: ರಾಜ್ಯ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆಯ ಅವಧಿ ಮುಗಿದು, ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಚುನಾವಣೆ ಪ್ರಚಾರ ಆರಂಭಿಸಿರುವ ಬೆನ್ನಲ್ಲೇ ತುಮಕೂರಿನಲ್ಲಿ ಗೂಂಡಾ ರಾಜಕೀಯ ಆರಂಭವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರಿದ ಇಬ್ಬರು ಮುಸ್ಲಿಂ ಮುಖಂಡರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕನಕಪುರದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದ ಡಿಕೆಶಿ
ಕನಕಪುರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಮಾಹಿತಿ ಇದೆ. ಹೀಗಾಗಿ ನಾಮಪತ್ರ ತಿರಸ್ಕೃತವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
ನಾಮಪತ್ರ ಸಲ್ಲಿಸುವಾಗ ಎಲ್ಲ ಮಾಹಿತಿ ನೀಡಿದ್ದೇನೆ. ಆದರೂ ಇಲ್ಲದ ಕಾರಣ ನೀಡುವ ಸಾಧ್ಯತೆಗಳಿವೆ. ಹೀಗಾಗಿಯೇ ಸಹೋದರ ಡಿ ಕೆ ಸುರೇಶ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಪತ್ನಿಯನ್ನು ನೆನೆದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಣ್ಣೀರು
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದಲ್ಲಿ ನಾಮ ಪತ್ರ ಸಲ್ಲಿಕೆ ವೇಳೆ ಮಸೀದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅಗಲಿದ ತಮ್ಮ ಪತ್ನಿಯನ್ನು ನೆನೆದು ಕಣ್ಣರು ಹಾಕಿದ್ದಾರೆ.
ರಾಜ್ಯದಲ್ಲಿ ಇಂದು ಅಮಿತ್ ಶಾ, ನಡ್ಡಾ ಪ್ರಚಾರ
ಬೆಂಗಳೂರು: ರಾಜ್ಯಕ್ಕೆ ಇಂದು ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದು, ಬಿಜೆಪಿ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ದೇವನಹಳ್ಳಿಯ ವಿಜಯಪುರದಲ್ಲಿ ಹಾಗೂ ನಡ್ಡಾ ಬೀದರ್‌ನಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ.
ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ
ಬೆಂಗಳೂರು: ಇಂದು ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇಂದು ನಾಮಪತ್ರ ಪರಿಶೀಲನೆಯಲ್ಲಿ ಪಾಸ್ ಆದರೆ ಇಂದಿನಿಂದಲೇ ಅಧಿಕೃತ ಪ್ರಚಾರವನ್ನು ಅಭ್ಯರ್ಥಿಗಳು ಆರಂಭಿಸಲಿದ್ದಾರೆ.
ಬೀದರ್‌ನಲ್ಲಿ ಇಂದು ಬಿಜೆಪಿ ಅಧ್ಯಕ್ಷ ನಡ್ಡಾ ಪ್ರಚಾರ
ಬೀದರ್: ಗಡಿ ಜಿಲ್ಲೆ ಬೀದರ್‌ಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಲಿದ್ದು, ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೀದರ್‌ನಲ್ಲಿ ಇಂದು ಸಾಯಂಕಾಲ ಬಿಜೆಪಿ ರೋಡ್ ಶೋ ನಡೆಯಲಿದೆ.