ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರ ಕಣದಲ್ಲಿ (Karnataka Election 2023) ಸ್ಟಾರ್ ಪ್ರಚಾರಕರ ಅಬ್ಬರ ಮುಂದುವರಿದಿದೆ. ಇಂದು ಕರಾವಳಿಯಲ್ಲಿ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಬಿಜೆಪಿ ಅಭ್ಯರ್ಥಿಗಳ ಪರ ಬ್ಯಾಟ್ ಬೀಸುತ್ತಿದ್ದರೆ, ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ (Priyanka gandhi) ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಂಕೋಲಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ತಾಲ್ಲೂಕಿನ ಹಟ್ಟಿಕೇರಿಯ ಗೌರಿಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಆಗಮನಹೆಲಿಕಾಪ್ಟರ್ ಸದ್ದು ಕೇಳಿ . ಮೊಳಗಿ ಮೋದಿ ಜಯಘೋಷ. ಉತ್ತರಕನ್ನಡ ಜಿಲ್ಲೆಯ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರ. ನವ ಕರ್ನಾಟಕ ಸಂಕಲ್ಪ ಸಮಾವೇಶ ಹಿನ್ನಲೆ ಆಗಮನ. ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿರುವ ನಮೋ. ಪ್ರಧಾನಿ ಆಗಮನ ಬೆನ್ನಲ್ಲೇ ಮುಗಿಲುಮುಟ್ಟಿದ್ದ ಅಭಿಮಾನಿಗಳ ಸಂತಸ. ವೇದಿಕೆಗೆ ಆಗಮಿಸಿ ಜನರತ್ತ ಕೈಬೀಸಿದ ಪ್ರಧಾನಿ. ಮೋದಿ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಜನರು.
ಅಜ್ಜಯ್ಯನ ಮಠಕ್ಕೆ ಡಿಕೆಶಿ
ಹೆಲಿಕಾಪ್ಟರ್ ಅಪಘಾತದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ತೆರಳಿ ಅಜ್ಜಯ್ಯನ ದರ್ಶನ ಪಡೆಯಲಿದ್ದಾರೆ.
ಕರಾವಳಿಯಲ್ಲಿ ಇಂದು ಮೋದಿ ಮೇನಿಯಾ
ಮಂಗಳೂರು: ರಾಜ್ಯ ಕರಾವಳಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಓಡಾಟ ನಡೆಸಲಿದ್ದಾರೆ. ಮಂಗಳೂರು ನಗರ ಹೊರವಲಯದ ಮುಲ್ಕಿಯ ಕೊಲ್ನಾಡು ಎಂಬಲ್ಲಿ 40 ಎಕರೆ ಪ್ರದೇಶದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ.
₹ 300 ಕೋಟಿ ಮೌಲ್ಯದ ಉಚಿತ ಗಿಫ್ಟ್, ಅಕ್ರಮ ನಗದು ವಶ!
ಬೆಂಗಳೂರು: ಮಾರ್ಚ್ 29ರಂದು ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇದುವರೆಗೆ ರಾಜ್ಯದಲ್ಲಿ ₹ 305 ಕೋಟಿ ಮೌಲ್ಯದ ನಗದು ಮತ್ತು ಮತದಾರರಿಗೆ ಹಂಚಲೆಂದು ಸಂಗ್ರಹಿಸಿದ್ದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.