ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿ ಅವರು ಇಲ್ಲಿನ 15ನೇ ವಾರ್ಡ್ ನಲ್ಲಿ ಬೆಳಿಗ್ಗೆ ಬಿರುಸಿನ ಮತಯಾಚನೆ ಮಾಡಿದರು.
ತಮ್ಮ ಅಪಾರ ಬೆಂಬಲಿಗರೊಂದಿಗೆ ಮಾರೆಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಮನೆ ಮನೆಗೆ ತೆರಳಿ ಕಾಂಗ್ರೆಸ್ ಗೆಲ್ಲಿಸಿ ಎಂದು ಮನವಿ ಮಾಡಿದರು.
ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ
ಈ ಸಂದರ್ಭದಲ್ಲಿ ನಾರಾ ಭರತ್ ರೆಡ್ಡಿ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳ್ಳಾರಿ ನಗರವನ್ನು ಎಷ್ಟು ಪ್ರೀತಿಯಿಂದ ಕಾಣುತ್ತಿದ್ದಾರೆ ಎಂಬುದಕ್ಕೆ ಶುಕ್ರವಾರ ನಡೆದ ಸಮಾವೇಶದಲ್ಲಿ ಸೇರಿದ್ದ ಜನಸಮೂಹವೇ ಸಾಕ್ಷಿ. ಯುವಕರಿಗೆ ಉದ್ಯೋಗ ಕಲ್ಪಿಸಲು ಐದು ಸಾವಿರ ಕೋಟಿ ರೂಪಾಯಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: Karnataka Election 2023: ಸಿದ್ದರಾಮಯ್ಯಗೆ ಸನ್‌ಸ್ಟ್ರೋಕ್; ಕಾರಲ್ಲಿ ನಿಂತು ಕೈಬೀಸುವಾಗಲೇ ಕುಸಿದುಬಿದ್ದರು
ಬಳ್ಳಾರಿಯನ್ನು ಜೀನ್ಸ್ ಕ್ಯಾಪಿಟಲ್ ಆಗಿ ನಿರ್ಮಿಸಿ, ಮೇಡ್ ಇನ್ ಬಳ್ಳಾರಿ ಮಾಡುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರ‍್ಯಾಲಿಯಿಂದ ಬಿಜೆಪಿಯವರಿಗೆ ನಡುಕ ಉಂಟಾಗಿದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಇದ್ದರು.