ಬಳ್ಳಾರಿ: ಬಳ್ಳಾರಿ ಜನರ ರಕ್ತದ ಕಣಕಣದಲ್ಲೂ ಕಾಂಗ್ರೆಸ್ (Congress) ಇದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ಚಿಕ್ಕ ವಯಸ್ಸಿನಲ್ಲಿ ನನಗೆ ಟಿಕೆಟ್ ಕೊಟ್ಟಿದೆ. ಪಕ್ಷಕ್ಕೆ ಋಣಿಯಾಗಿದ್ದೇನೆ ಎಂದು ನಗರ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿ ತಿಳಿಸಿದರು.
ನಗರದ ಗವಿಯಪ್ಪ ವೃತ್ತದಲ್ಲಿ ಶುಕ್ರವಾರ ಸಂಜೆ ನಡೆದ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಗಾಂಧಿ ಅವರ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ, ಈ ಕುರಿತು ಜಿಲ್ಲೆಯ ಮತದಾರರು ಮನಸ್ಸು ಮಾಡಿದ್ದಾರೆ ಎಂದರು.
ಇದನ್ನೂ ಓದಿ: Karnataka Election: ಪ್ರಚಾರದ ಮಧ್ಯೆಯೇ ಹರಿಹರದ ಪ್ರಮುಖ ಮಠಗಳಿಗೆ ಭೇಟಿ ನೀಡಿದ ಅಮಿತ್ ಶಾ
ಬಳ್ಳಾರಿ ಜಿಲ್ಲೆಯ ಮತದಾರರು ಹಿಂದಿನಿಂದಲೂ ಕಾಂಗ್ರೆಸ್‌ನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಗೆ ಜಯಭೇರಿ ಸಿಗಲಿದೆ. ಬಳ್ಳಾರಿ ನಗರ ಜನರ ಸೇವೆ ಮಾಡಲು ಆಶೀರ್ವಾದ ಬಯಸಿ, ಸ್ಪರ್ಧಿಸಿದ್ದೇನೆ. ನನ್ನನ್ನು ಗೆಲ್ಲಿಸಿ ಕಳಿಸಿಕೊಡಿ ನಿಮ್ಮ ಸೇವೆ ಮಾಡಿಕೊಂಡಿರುತ್ತೇನೆ ಎಂದು ತಿಳಿಸಿದರು.
ನಿಮ್ಮ ಸೇವೆ ಮಾಡಲು ಸದಾ ಸಿದ್ಧರಿದ್ದೇವೆ
ರಾಹುಲ್‌ಗಾಂಧಿ ಅವರು ಬಳ್ಳಾರಿಗೆ ಬಂದಿರುವುದು ನಮ್ಮೆಲ್ಲರ ಪುಣ್ಯ. ಈ ಹಿಂದೆ ಜೋಡೋ ಯಾತ್ರೆಯಲ್ಲಿ ಬಳ್ಳಾರಿಗೆ ಆಗಮಿಸಿದ್ದ ರಾಹುಲ್‌ಗಾಂಧಿ ಅವರು ಈ ಭಾಗದ ಜನರ ಪ್ರೀತಿಯನ್ನು ಗಳಿಸಿದ್ದಾರೆ. ಮತ್ತೆ ಜನರ ಪ್ರೀತಿಗಾಗಿ ಬಂದಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ. ನಿಮ್ಮ ಸೇವೆ ಮಾಡಲು ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: Core sector growth : ಮಾರ್ಚ್‌ನಲ್ಲಿ ಮೂಲ ಸೌಕರ್ಯ ಬೆಳವಣಿಗೆ 3%ಕ್ಕೆ ಇಳಿಕೆ
ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ ಮಾತನಾಡಿ, ರಾಹುಲ್ ಗಾಂಧಿ ಅವರು ಬಳ್ಳಾರಿ ಜಿಲ್ಲೆಗೆ ಬರುತ್ತಿದ್ದಂತೆಯೇ ಪ್ರತಿಪಕ್ಷಗಳು ಗಢಗಢ ನಡುಗಿವೆ. ಬಳ್ಳಾರಿಯ ಜಿಲ್ಲೆಯ ಮತದಾರರು ಕಾಂಗ್ರೆಸ್‌ನ್ನು ಈ ಹಿಂದಿನಿಂದಲೂ ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ತಮ್ಮ ಬೆಂಬಲ ಮುಂದುವರಿಸುತ್ತಾರೆ ಎಂಬ ವಿಶ್ವಾಸ ನಮ್ಮದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಳ್ಳಾರಿ ಜಿಲ್ಲೆ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಲ್ಲಂ ವೀರಭದ್ರಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಮಹ್ಮದ್ ರಫೀಕ್, ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್‌ಹುಸೇನ್, ಮೇಯರ್ ತ್ರಿವೇ಼ಣಿ, ಮುಂಡ್ರಿಗಿ ನಾಗರಾಜ್, ಆಂಜಿನೇಯಲು, ಅಸುಂಡಿ ನಾಗರಾಜ್,ಬೋಯಪಾಟಿ ವಿಷ್ಞು ಸೇರಿದಂತೆ ಇತರರಿದ್ದರು.