Site icon Vistara News

Karnataka Election 2023: ನಂಜನಗೂಡಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್‌ಗೆ ಜನ ಬೆಂಬಲ; ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

BJP B Harshavardhan

BJP B Harshavardhan

ಮೈಸೂರು: ವಿಧಾನಸಭಾ ಚುನಾವಣೆಯ (Karnataka Election 2023) ಮತದಾನಕ್ಕೆ ಐದೇ ದಿನ ಬಾಕಿ ಇದ್ದು, ಅಭ್ಯರ್ಥಿಗಳ ಪ್ರಚಾರ ಕಾರ್ಯ ಜೋರಾಗಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ (Nanjangud Assembly Constituency) ಅಭ್ಯರ್ಥಿ ಬಿ. ಹರ್ಷವರ್ಧನ್ (B. Harshavardhan) ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ದಿನದಿಂದ ದಿನಕ್ಕೆ ಬೆಂಬಲ ಹೆಚ್ಚಾಗುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರು ಹರ್ಷವರ್ಧನ್ ಅವರನ್ನು ಬೆಂಬಲಿಸಿ ಕಮಲ ಮುಡಿಯುತ್ತಿದ್ದಾರೆ.

ಹರ್ಷವರ್ಧನ್‌ಗೆ ಜನ ಬೆಂಬಲ

ಹೆಡಿಯಾಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಮತ್ತು ಬೆಂಬಲಿಗರು, ಹಲ್ಲರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರತ್ನಮ್ಮ, ಹಾದನೂರು ವಡೆಯನಪುರ ಮತ್ತು ವೆಂಕಟಾಚಲಪುರ ಗ್ರಾಮ ಪಂಚಾಯಿತಿ ಸದಸ್ಯರು, ಯುವಕರು ಹೀಗೆ 100ಕ್ಕೂ ಹೆಚ್ಚು ಜನ ಕಾಂಗ್ರೆಸ್ ಪಕ್ಷ ತೊರೆದು ಹರ್ಷವರ್ಧನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾದ ಕ್ಷಣ

ದೇವರಾಯಶೆಟ್ಟಿಪುರ, ಹೆಡಿಯಾಲ, ಹಾಡ್ಯ, ಹುರ ಹಾಗೂ ಹಲ್ಲರೆ ಗ್ರಾಮಗಳಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜತೆ ಹರ್ಷವರ್ಧನ್‌ ಸಭೆ ನಡೆಸಿದರು.

ಇದನ್ನೂ ಓದಿ: ಮೇ 6ಕ್ಕೆ ಮೋದಿ ರೋಡ್‌ ಶೋ ಹಿನ್ನೆಲೆ ಬೆಂಗಳೂರಿನ ಉನ್ನತ ಅಧಿಕಾರಿಗಳ ಸಭೆ; ಏನೇನು ಚರ್ಚೆ?

ಚುನಾವಣಾ ರೂಪುರೇಷಗಳ ಕುರಿತು ಚರ್ಚಿಸಿದ ಅವರು, ಮೇ 7ರಂದು ನಂಜನಗೂಡಿನ ಎಲಚಗೆರೆ ಬೋರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮೋದಿ ನೇತೃತ್ವದಲ್ಲಿ ಅಂದು ಬೃಹತ್ ಸಮಾವೇಶ ನಡೆಯಲಿದೆ. ಹೀಗಾಗಿ ಸಮಾವೇಶವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳಲು ತಮ್ಮ ಬೆಂಬಲಿಗರಿಗೆ ತಿಳಿಸಿದ್ದಾರೆ.

Exit mobile version