ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಏ. 28ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದರು. ನಗರದ ಖಾಸಗಿ ಹೋಟಲ್ ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ರವರು ಏ.8 ರಂದು ಶುಕ್ರವಾರ ಸಾಯಂಕಾಲ ಐದು ಗಂಟೆಗೆ ನಗರದ ಟಿಬಿ ಸ್ಯಾನಿಟಿರಿಯಂ ದಿಂದ ಕೌಲಬಜಾರ್ ನ ಫಸ್ಟ್ ಗೇಟ್ ರವರೆಗೆ ರೋಡ್ ಶೋ ನಡೆಸಲಿದ್ದಾರೆ, ಬಳಿಕ ಗವಿಯಪ್ಪ ವೃತ್ತದಲ್ಲಿ ನಡೆಯುವ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: Karnataka Election : ಹೀಗೆ ಮಾತನಾಡಿಯೇ ಕಾಂಗ್ರೆಸ್‌ಗೆ ಈ ಗತಿ ಬಂದಿದ್ದು; ಮೋದಿ ಹಾವು ಹೇಳಿಕೆಗೆ ಬೊಮ್ಮಾಯಿ ಆಕ್ರೋಶ
ಮೋದಿಯಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ಮೂಲಕ ರಾಜ್ಯದಲ್ಲಿ ಬಿಜೆಪಿ ಪರ ಮತಯಾಚನೆ ಮಾಡುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾರೆ. ಇದಲ್ಲದೇ ಎಲ್ಲ ಮಾಧ್ಯಮ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಾರೆ. ಐವತ್ತು ಲಕ್ಷಕ್ಕೂ ಅಧಿಕ ಜನ ವರ್ಚುವಲ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಅದರ ಖರ್ಚು ವೆಚ್ಚವನ್ನು ರಾಜ್ಯದ ಬಿಜೆಪಿಯ 219 ಕ್ಷೇತ್ರಗಳ ಅಭ್ಯರ್ಥಿಗಳ ವೆಚ್ಚವನ್ನು ಭರಿಸಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗಕ್ಕೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.
ಸಂಸದ ನಾಸೀರ್ ಹುಸೇನ್ ಮಾತನಾಡಿ, ರಾಹುಲ್ ಗಾಂಧಿ ಕುಷ್ಟಗಿಯಿಂದ ಹೆಲಿಕಾಪ್ಟರ್ ಮೂಲಕ ಬಳ್ಳಾರಿಗೆ ಶುಕ್ರವಾರ ಸಾಯಂಕಾಲ ನಗರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ರೋಡ್ ಶೋ ನಡೆಸಲಿದ್ದಾರೆ. ರಾಹುಲ್ ಗಾಂಧಿ ಜತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜುವಾಲ್, ಗ್ರಾಮೀಣ ಹಾಗೂ ನಗರ ಅಭ್ಯರ್ಥಿಗಳು ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ. ಬಹಿರಂಗ ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾವೂರ್ ಸುನಿಲ್, ಅಂಜನೇಯಲು, ವೆಂಕಟೇಶ ಹೆಗಡೆ, ಅಂಜನಿ, ಬಿ.ಎಂ.ಪಾಟೀಲ್ ಹಾಗೂ ಇತರರು ಪಾಲ್ಗೊಂಡಿದ್ದರು.