Karnataka Election 2023: ಬಿಎಂಟಿಸಿ ಬಸ್‌ನಲ್ಲಿ ರಾಹುಲ್‌ ಗಾಂಧಿ ಪ್ರಯಾಣ; ಮಹಿಳಾ ಸೀಟ್‌ನಲ್ಲಿ ಕುಳಿತ ನಾಯಕ - Vistara News

ಕರ್ನಾಟಕ

Karnataka Election 2023: ಬಿಎಂಟಿಸಿ ಬಸ್‌ನಲ್ಲಿ ರಾಹುಲ್‌ ಗಾಂಧಿ ಪ್ರಯಾಣ; ಮಹಿಳಾ ಸೀಟ್‌ನಲ್ಲಿ ಕುಳಿತ ನಾಯಕ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರ (Karnataka Election 2023) ಕಣದಲ್ಲಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) , ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಜನಸಾಮಾನ್ಯರ ಜತೆ ಪ್ರಯಾಣಿಸಿದರು.

VISTARANEWS.COM


on

rahul gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರ (Karnataka Election 2023) ಕಣದಲ್ಲಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) , ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಜನಸಾಮಾನ್ಯರ ಜತೆ ಪ್ರಯಾಣಿಸಿದರು.

ಬೆಂಗಳೂರಿನ ಜನನಿಬಿಡ ಪ್ರದೇಶವಾದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ರಾಹುಲ್ ಗಾಂಧಿ ಸೋಮವಾರ ಮುಂಜಾನೆ ಓಡಾಡಿದರು. ಬಳಿಕ ವಸಂತನಗರದಿಂದ ಶಿವಾಜಿನಗರಕ್ಕೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರಿಂದ ತುಂಬಿದ ಬಸ್‌ನಲ್ಲಿ ತೆರಳಿದರು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಸೀಟ್‌ ಬಿಟ್ಟುಕೊಟ್ಟರು. ರಾಹುಲ್‌ ಮಹಿಳಾ ಸೀಟ್‌ನಲ್ಲಿ ಕುಳಿತು ಪ್ರಯಾಣಿಸಿದರು.

ಭಾನುವಾರ ಅವರು ಸ್ವಿಗ್ಗಿ, ಬ್ಲಿಂಕಿಟ್‌, ಡಂಜೊ, ಜೊಮ್ಯಾಟೊ ಮೊದಲಾದ ಸಂಸ್ಥೆಗಳ ಡೆಲಿವರಿ ಬಾಯ್‌ಗಳೊಂದಿಗೆ ಏರ್‌ಲೈನ್‌ ಹೋಟೆಲ್‌ನಲ್ಲಿ ಕುಳಿತು ಮಸಾಲೆ ದೋಸೆ ತಿನ್ನುತ್ತಾ ಅವರ ಕಷ್ಟ ಸುಖಗಳ ಬಗ್ಗೆ ವಿಚಾರಿಸಿದ್ದರು. ಡೆಲಿವರಿ ಬಾಯ್‌ ಒಬ್ಬರ ಹಿಂದೆ ಅವರ ಬೈಕ್‌ನಲ್ಲಿ ಕುಳಿತು ಪ್ರಯಾಣಿಸಿದ್ದರು. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ರೋಡ್‌ ಶೋದಲ್ಲಿ ತೊಡಗಿದ್ದರೆ, ರಾಹುಲ್‌ ಗಾಂಧಿ ಬೇರೆಯೇ ಬಗೆಯಲ್ಲಿ ರೋಡ್‌ ಶೋ ನಡೆಸಿದ್ದರು.

ಇದನ್ನೂ ಓದಿ: Karnataka Election : ಕೆಲವು ನಿಮಿಷ ಡೆಲಿವರಿ ಬಾಯ್‌ ಆದ ರಾಹುಲ್‌ ಗಾಂಧಿ! ಬೆಂಗಳೂರಿನಲ್ಲಿ ರೋಡ್‌ ಶೋ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Murder Case: ಗಂಡನ ಫೈನಾನ್ಸ್‌ ವ್ಯವಹಾರಕ್ಕಾಗಿ ಹೆಂಡತಿಯ ಹತ್ಯೆ; ಕೊಲೆ ಮಾಡಿ ತಿರುಪತಿಯಲ್ಲಿ ತಲೆಮರೆಸಿಕೊಂಡವರ ಸೆರೆ

Murder Case: ದಿವ್ಯಶ್ರೀ ಅವರ ಗಂಡನ ಫೈನಾನ್ಸ್‌ ವ್ಯವಹಾರಕ್ಕೆ ಸಂಬಂಧಿಸಿ ಚಿಂತಾಮಣಿಯಲ್ಲಿರುವ ಜಮೀನಿನ ವ್ಯಾಜ್ಯದ ವಿಚಾರದಲ್ಲಿ ಕೊಲೆ ನಡೆದಿದೆ. ಕೊಲೆಗಾಗಿ ಸುಪಾರಿ ನೀಡಿದ ಆರೋಪಿಗಾಗಿ ಹುಡುಕಾಟ ನಡೆದಿದೆ. ಆರೋಪಿಗಳಲ್ಲಿ ಹೆಚ್ಚಿನವರು ಅಪ್ರಾಪ್ತ ವಯಸ್ಕರಾಗಿದ್ದಾರೆ.

VISTARANEWS.COM


on

kolar teacher murder case
Koo

ಕೋಲಾರ: ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ (Teacher Murder Case) ಮಾಡಿದ ಪ್ರಕರಣದಲ್ಲಿ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಕೋಲಾರ ಪೊಲೀಸರು (Kolar news) ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಸುಂಕ ಲೇಔಟ್ ಬಡಾವಣೆಯಲ್ಲಿ ಕೊಲೆ ಪ್ರಕರಣ ನಡೆದಿತ್ತು. ಆಗಸ್ಟ್ 14ರ ಸಂಜೆ ದಿವ್ಯಶ್ರೀ (43) ಎಂಬ ಶಿಕ್ಷಕಿಯನ್ನು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ ಆರೋಪಿಗಳು ಆಂಧ್ರಪ್ರದೇಶದ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳನ್ನು ಭುವನ್‌ ಪತ್ರಹಳ್ಳಿ, ರಂಜಿತ್‌ ಮುಳಬಾಗಿಲು, ಶಹೀದ್‌ ನಂಗಲಿ, ರಾಹುಲ್‌ ಮಲ್ಲೇಕುಪ್ಪ, ಭರತ್‌ ಗುಮ್ಮಕಲ್‌, ಯಶ್ವಂತ್‌ ಮಲ್ಲೇಕುಪ್ಪ ಎಂದು ಗುರುತಿಸಲಾಗಿದೆ.

ದಿವ್ಯಶ್ರೀ ಅವರ ಗಂಡನ ಫೈನಾನ್ಸ್‌ ವ್ಯವಹಾರಕ್ಕೆ ಸಂಬಂಧಿಸಿ ಚಿಂತಾಮಣಿಯಲ್ಲಿರುವ ಜಮೀನಿನ ವ್ಯಾಜ್ಯದ ವಿಚಾರದಲ್ಲಿ ಕೊಲೆ ನಡೆದಿದೆ. ಕೊಲೆಗಾಗಿ ಸುಪಾರಿ ನೀಡಿದ ಆರೋಪಿಗಾಗಿ ಹುಡುಕಾಟ ನಡೆದಿದೆ. ಆರೋಪಿಗಳಲ್ಲಿ ಅಪ್ರಾಪ್ತ ವಯಸ್ಕರೂ ಇದ್ದು, ಮಾದಕ ದ್ರವ್ಯವ ವ್ಯಸನಿಗಳಾದ ಇವರು ಚಿಲ್ಲರೆ ಕಾಸಿಗಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಮುಳಬಾಗಿಲು ಪೊಲೀಸರಿಂದ ವಿಚಾರಣೆ ಮುಂದುವರಿದಿದೆ.

ಪ್ರಕರಣದ ವಿವರ

ಮುಳಬಾಗಿಲು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ ದಿವ್ಯಶ್ರೀ ಅವರು ಮಗಳೊಂದಿಗೆ ವಾಸವಾಗಿದ್ದು, ಇವರ ಪತಿ ಪದ್ಮನಾಭ ಶೆಟ್ಟಿ ಅಗರಬತ್ತಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದಾರೆ. ಇವರ ಮತ್ತೊಬ್ಬ ಮಗ ಪ್ರೇಮ್‌ ವಿದ್ಯಾಭ್ಯಾಸದ ನಿಮಿತ್ತ ಬೇರೆ ಊರಿನಲ್ಲಿ ನೆಲೆಸಿದ್ದಾರೆ. ಪತಿ ಹೊರಗೆ ಹೋಗಿದ್ದು, ಮನೆಯಲ್ಲಿ ದಿವ್ಯಶ್ರೀ ಹಾಗೂ ಪುತ್ರಿ ನಿಶಾ ಮಾತ್ರ ಇದ್ದಾಗ ಪಾತಕ ನಡೆದಿದೆ.

ನಿಶಾ ನಿನ್ನೆ ಸಂಜೆ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಓದುತ್ತಿದ್ದಳು. ನೆಲ ಮಾಳಿಗೆಯಲ್ಲಿ ದಿವ್ಯಶ್ರೀ ಅವರು ರಾತ್ರಿ 7.30ರ ಸುಮಾರಿನಲ್ಲಿ ಟಿವಿ ವೀಕ್ಷಿಸುತ್ತ ಕುಳಿತಿದ್ದರು. ಆ ವೇಳೆ ಹಂತಕರು ಏಕಾಏಕಿ ಮನೆಯೊಳಗೆ ನುಗ್ಗಿ ಚಾಕುವಿನಿಂದ ದಿವ್ಯಶ್ರೀ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮನೆಯೊಳಗೆ ಏನೋ ಗಲಾಟೆಯಾಗುತ್ತಿದೆ ಎಂದು ನಿಶಾ ಕೆಳಗೆ ಇಳಿದು ಬಂದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಇದ್ದದ್ದು ಕಂಡು ಚೀರಾಡಿದ್ದಾರೆ. ನೆರೆಹೊರೆಯವರು ಏನಾಯಿತೆಂದು ಇವರ ಮನೆಗೆ ಬಂದು ನೋಡಿ ತಕ್ಷಣ ರಕ್ತದ ಮಡುವಿನಲ್ಲಿ ಬಿದಿದ್ದ ದಿವ್ಯಶ್ರೀ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜನಭರಿತ ಈ ಬಡಾವಣೆಯಲ್ಲಿ ಶಿಕ್ಷಕಿಯ ಕೊಲೆ ನಡೆದಿರುವುದು ಕಂಡು ಆತಂಕಗೊಂಡ ಸುತ್ತಮುತ್ತಲ ನಿವಾಸಿಗಳು ಭಯಭೀತರಾಗಿದ್ದಾರೆ.

ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಆಸ್ಪತ್ರೆಪಾಲು

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Continue Reading

ಬೆಂಗಳೂರು

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Kidnap Case: ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ.

VISTARANEWS.COM


on

Kidnap Case
Koo

ಬೆಂಗಳೂರು: ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ (Youth Congress President Nalapad) ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ (Student Kidnap Case) ಮಾಡಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಕುರಿತು ವಿದ್ಯಾರ್ಥಿ ದೂರು ನೀಡಿದ್ದು, ಆರೋಪಿಗಳಿಗೆ ಹುಡುಕಾಡಲಾಗುತ್ತಿದೆ.

ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ ಜೀವನ್ ನಂತರ ಕಾರಣಾಂತರದಿಂದ ಹಣ ಕೊಡಲು ಆಗದೆ ಒದ್ದಾಡುತ್ತಿದ್ದ.

ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ. ಪೊಲೀಸ್‌ ಕಮಿಷನರ್‌ಗೆ ಮೇಲ್ ಮಾಡಿ ದೂರು ನೀಡಿದ್ದಾನೆ.

ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಆಸ್ಪತ್ರೆಪಾಲು

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Continue Reading

ಬೆಂಗಳೂರು

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

Food Poison: ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು.

VISTARANEWS.COM


on

food poison bangalore
Koo

ಬೆಂಗಳೂರು: ರಾಜಧಾನಿಯ ಪಿಜಿಯೊಂದರಲ್ಲಿ (PG) ಊಟ ಮಾಡುತ್ತಿರುವಾಗ ಇಲಿ ವಿಷ (Rat Poison spray) ಸ್ಪ್ರೇ ಮಾಡಿದ ಕಾರಣ ವಿದ್ಯಾರ್ಥಿಗಳು ಅಸ್ವಸ್ಥಗೊಂಡು (Food Poison) ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು. ಪಿಜಿಯಲ್ಲಿ‌ ಕೆಲಸ ಮಾಡುತ್ತಿದ್ದ ಮಂಜುನಾಥ್ ಎಂಬಾತ ಸ್ಪ್ರೇ ಮಾಡಿದ್ದು, ಇದರಿಂದ ಫುಡ್‌ ಪಾಯಿಸನ್‌ ಆಗಿದೆ.

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ತಿರದ ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ನರ್ಸಿಂಗ್ ಕಾಲೇಜಿನಿಂದ ಹಾಸ್ಟೆಲ್ ನಡೆಸಲಾಗುತ್ತಿದ್ದು, ಹಾಸ್ಟೆಲ್ ಬಿಲ್ಡಿಂಗ್‌ನ ನೆಲ‌ ಮಹಡಿಯಲ್ಲಿ ಊಟದ ಹಾಲ್ ಇದೆ. ಜ್ಞಾನ‌ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

ಬೆಂಗಳೂರು: ತಾಯಿ-ಮಗನನ್ನು ಕಿಡ್ನ್ಯಾಪ್‌ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ 9 ಆರೋಪಿಗಳನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಿಡ್ನ್ಯಾಪ್‌ ಆಗಿದ್ದ ಯುವಕನ ಮೇಲೆ ಕಳ್ಳತನ ಪ್ರಕರಣಗಳಿದ್ದವು. ಹೀಗಾಗಿ ಹಣ ವಸೂಲಿ ಮಾಡಲು ಯುವಕ ಹಾಗೂ ಆತನ ತಾಯಿಯನ್ನು ಆರೋಪಿಗಳು ಅಪಹರಿಸಿ, ಕಿರುಕುಳ (Physical Abuse) ನೀಡಿದ್ದರು. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವರುಣ್ ಮತ್ತು ಆತನ ತಾಯಿಯನ್ನು ಅಪಹರಣ ಮಾಡಲಾಗಿತ್ತು. ರೌಡಿ ಶೀಟರ್‌ಗಳಾದ ಜೋಸೆಫ್, ಶ್ರೀನಿವಾಸ್ @ ಪಾಗಲ್ ಸೀನಾ, ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಬಂಧಿತ ಆರೋಪಿಗಳು.

ವರುಣ್ ಹಾಗೂ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹಾಗಾಗಿ ಕಳ್ಳತನ ಮಾಡಿರುವ ಹಣ ನೀಡುವಂತೆ ತಾಯಿ-ಮಗನನ್ನು ಆರೋಪಿಗಳು ಬೆದರಿಸಿದ್ದರು. ಆದರೆ, ಅವರು ಹಣ ನೀಡದ ಹಿನ್ನೆಲೆ ತಾಯಿ- ಮಗನನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು.

ಆ. 13ರಂದು ತಾಯಿ-ಮಗನನ್ನು ಆರೋಪಿಗಳಾದ ಜೋಸೇಫ್ ಮತ್ತು ಶ್ರೀನಿವಾಸ್@ಪಾಗಲ್ ಸೀನಾ ಕಿಡ್ನ್ಯಾಪ್‌ ಮಾಡಿದ್ದರು. ನಂತರ ಪರಿಚಯಸ್ಥ ಪ್ರತಾಪ್ ಮನೆಯಲ್ಲಿ ಅಕ್ರಮವಾಗಿ ಇರಿಸಿ ಟಾರ್ಚರ್ ನೀಡಲಾಗಿದೆ. ಈ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು.

2 ಲಕ್ಷ ರೂ. ಕೊಡುವಂತೆ ಆರೋಪಿಗಳಿಂದ ಕಿರುಕುಳ ನೀಡಲಾಗಿದೆ. ಇಬ್ಬರ ಬಳಿಯೂ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಸಂಬಂದ 9 ಆರೋಪಿಗಳ ಬಂಧನವಾಗಿದೆ.

ಆರೋಪಿಗಳಾದ ಜೋಸೆಫ್ ಮತ್ತು ಪಾಗಲ್ ಸೀನ ಚಂದ್ರಾ ಲೇಔಟ್ ರೌಡಿ ಶೀಟರ್‌ಗಳಾಗಿದ್ದು, ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ | Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

Karnataka Weather Forecast
Karnataka Weather Forecast

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಗುಡುಗು ಸಹಿತ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
kolar teacher murder case
ಕ್ರೈಂ18 seconds ago

Murder Case: ಗಂಡನ ಫೈನಾನ್ಸ್‌ ವ್ಯವಹಾರಕ್ಕಾಗಿ ಹೆಂಡತಿಯ ಹತ್ಯೆ; ಕೊಲೆ ಮಾಡಿ ತಿರುಪತಿಯಲ್ಲಿ ತಲೆಮರೆಸಿಕೊಂಡವರ ಸೆರೆ

Kidnap Case
ಬೆಂಗಳೂರು22 mins ago

Kidnap case: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್!

Woman Using an Asthma Inhaler
ಆರೋಗ್ಯ43 mins ago

Myths About Asthma: ಇವು ಅಸ್ತಮಾ ಕುರಿತು ಇರುವ 9 ಸುಳ್ಳುಗಳು!

food poison bangalore
ಬೆಂಗಳೂರು58 mins ago

Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

raksha bandhan 2024 ರಾಜಮಾರ್ಗ ಅಂಕಣ
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ – ರಕ್ಷಾ ಬಂಧನ

karnataka weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Raksha Bandhan 2024
Latest2 hours ago

Raksha Bandhan 2024: ಇಂದು ರಕ್ಷಾ ಬಂಧನ; ಈ ಹಬ್ಬದ ವಿಶೇಷವೇನು?

Dina Bhavishya
ಭವಿಷ್ಯ3 hours ago

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಡಬಲ್‌ ಲಾಭ

Viral Video
ವೈರಲ್ ನ್ಯೂಸ್8 hours ago

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್9 hours ago

Viral Video: ಅಬ್ಬಾ.. ಸಾವು ಹೀಗೂ ಬರುತ್ತಾ? ಸ್ನೇಹಿತನೊಂದಿಗೆ ಮಾತಾಡ್ತಾ ನಿಂತಿದ್ದವನ ಮೇಲೆ ದೊಪ್ಪೆಂದು ಬಿದ್ದ ಎಸಿ-ವಿಡಿಯೋ ಇದೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌