Site icon Vistara News

Karnataka election 2023: ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ್ ಕಾಂಗ್ರೆಸ್‌ಗೆ ಗುಡ್ ಬೈ; ಜೆಡಿಎಸ್‌ ಸೇರ್ಪಡೆ

Karnataka election 2023 Say goodbye to Congress former minister Hanumanthappa Y Alcode joins JDS

ಲಿಂಗಸುಗೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ (Karnataka election 2023) ಕಾವು ದಿನೇ ದಿನೇ ರಂಗೇರುತ್ತಿದ್ದು, ಪಕ್ಷಾಂತರ ಪರ್ವವೂ ಜೋರಾಗಿದೆ.ಈ ಪೈಕಿ ರಾಯಚೂರು ಜಿಲ್ಲೆಯ ರಾಜಕಾರಣ ಸಹ ಪಕ್ಷಾಂತರ ಪರ್ವಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ‌ಮಾಜಿ‌ ಸಚಿವ ಹನುಮಂತಪ್ಪ ವೈ. ಆಲ್ಕೋಡ್ ಗುಡ್ ಬೈ ಹೇಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಹನುಮಂತಪ್ಪ ವೈ. ಆಲ್ಕೋಡ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲ ನಾಯಕರಾಗಿದ್ದ ಇವರು ದೇವದುರ್ಗ ಮತ್ತು ಲಿಂಗಸುಗೂರು ತಾಲೂಕಿನಲ್ಲಿ ತಮ್ಮದೇ ಆದ ವೈಯಕ್ತಿಕ ವರ್ಚಸ್ಸು ಕೂಡ ಹೊಂದಿದ್ದರು. ಅದರಲ್ಲೂ ಲಿಂಗಸಗೂರು ಕ್ಷೇತ್ರದ ರಾಜಕೀಯದಲ್ಲಿ ಹನುಮಂತಪ್ಪ ಪ್ರಮುಖ ಪಾತ್ರ ವಹಿಸಿದ್ದರು.

ಆಲ್ಕೋಡ್‌ ಅವರು ಎಸ್‌ಸಿ ಮೀಸಲಾತಿ ಹೊಂದಿರುವ ಲಿಂಗಸುಗೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು. ಆದರೆ, ಅವರಿಗೆ ಟಿಕೆಟ್ ನೀಡದ ಕಾಂಗ್ರೆಸ್ ಡಿ.ಎಸ್. ಹೂಲಗೇರಿಗೆ ಟಿಕೆಟ್ ನೀಡಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಆಲ್ಕೋಡ್ ಹನುಮಂತಪ್ಪ ಅವರಯ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: Karnataka Election 2023: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಯಾರಾಗ್ತಾರೆ ಸಿಎಂ; ಏನಂದ್ರು ಪ್ರಿಯಾಂಕಾ ಗಾಂಧಿ?

ಈ ಬೆಳವಣಿಗೆಯಿಂದಾಗಿ ಲಿಂಗಸಗೂರು – ದೇವದುರ್ಗ ಭಾಗದಲ್ಲಿ ಜೆಡಿಎಸ್‌ಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. ಈ ಸಂದರ್ಭದಲ್ಲಿ ಲಿಂಗಸಗೂರು ಕ್ಷೇತ್ರದ ಅಭ್ಯರ್ಥಿ ಸಿದ್ದು ವೈ ಬಂಡಿ ಮತ್ತು ದೇವದುರ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ. ಕರಿಯಮ್ಮ ಉಪಸ್ಥಿತರಿದ್ದರು.

Exit mobile version