Site icon Vistara News

Karnataka Election 2023: ಸಿದ್ದರಾಮನಹುಂಡಿಯಲ್ಲಿ ಕಾರ್-ಬೈಕ್ ಡಿಕ್ಕಿ ಜಗಳಕ್ಕೆ ಗಲಭೆ ಬಣ್ಣ ಕಟ್ಟಿದ ಬಿಜೆಪಿ; ಯತೀಂದ್ರ ಆರೋಪ

Karnataka Election 2023: Siddaramanahundi clash was not politically motivated, Says Dr. Yatindra

ಮೈಸೂರು, ಕರ್ನಾಟಕ: ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಗಲಾಟೆಯಲ್ಲ. ಕಾರ್ ಮತ್ತು ಬೈಕ್ ಡಿಕ್ಕಿ ಕಾರಣದಿಂದ ಗಲಾಟೆ ನಡೆದಿದೆ. ಈ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತನಾಡಿದ್ದೇನೆ. ಅವರೇ ಇದು ರಾಜಕೀಯ ಜಗಳವಲ್ಲ ಎಂದಿದ್ದಾರೆ. ಬಿಜೆಪಿ ಮೂಲತಃ ಗಲಭೆ ಪಾರ್ಟಿ. ಸುಖಾಸುಮ್ಮನೆ ಈ ಘಟನೆಗೆ ರಾಜಕೀಯ ಬಣ್ಣವನ್ನು ಬಳಿಯುತ್ತಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಹೇಳಿದ್ದಾರೆ(Karnataka Election 2023).

ಬಿಜೆಪಿಯವರು ಗಲಭೆ ಮಾಡುವಲ್ಲಿ ನಿಸ್ಸೀಮರು. ಬಿಜೆಪಿಯವರು ಎಷ್ಟೇ ಪ್ರಚೋದನೆ ಮಾಡಿದರೂ ಕಾಂಗ್ರೆಸ್ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು. ಬಿಜೆಪಿ ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದೆ. ಬಿಜೆಪಿ ಹಸಿ ಸುಳ್ಳು ಹೇಳುತ್ತಾ ದ್ಚೇಷ ತಂದು ಹಾಕಿ ತಮ್ಮ ಬೇಳೆ ಬೇಯಿಸಿ ಕೊಳ್ಳುವ ತಂತ್ರ ಮಾಡುತ್ತಿದೆ.
ಗಲಾಟೆ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರು ಅಲ್ಲಿ ಇರಲಿಲ್ಲ. ಆದರೂ ದುರುದ್ದೇಶದಿಂದ ನಮ್ಮ‌ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರ ಗುಂಪು ಸೋಮಣ್ಣ ಫಾಲೋ ಮಾಡುತ್ತಿರುವ ಆರೋಪ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಹಸಿ ಸುಳ್ಳು ಆರೋಪ. ಯಾವುದೇ ಗುಂಪು ಸೋಮಣ್ಣ ಅವರನ್ನ ಫಾಲೋ ಮಾಡುತ್ತಿಲ್ಲ ಎಂದು ಸ್ಪಷ್ಪಪಡಿಸಿದರು.

ಸಿದ್ದರಾಮನಹುಂಡಿಯಲ್ಲಿ ನಡೆದಿದ್ದೇನು?

ಗುರುವಾರ ಮಧ್ಯ ರಾತ್ರಿ ವರುಣಾಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಬಿಜೆಪಿ ಕಾರ್ಯಕರ್ತನಿಗೆ ತೀವ್ರ ಪೆಟ್ಟು ಬಿದ್ದಿದ್ದು, ಆತನನ್ನು ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ. ಕೆ.ಎಂ.ನಾಗೇಶ್, ಗಾಯಗೊಂಡ ಯುವಕ ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ಕಾರ್ಯದಲ್ಲಿ ಇದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ಸಂಬಂಧಿಕರು ನಮ್ಮ ಮೇಲೆ ಗಲಾಟೆ ಮಾಡಿದ್ರು. ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿಜೆಪಿ ಕಾರ್ಯಕರ್ತ ರವಿಶಂಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Nanjangud Clash: ಸಿದ್ದರಾಮಯ್ಯ ಪ್ರಚಾರದ ವೇಳೆ ದಲಿತರು-ಸವರ್ಣೀಯರ ನಡುವೆ ಗಲಾಟೆ

ಗುರುವಾರ ಸಂಜೆ ಸಿದ್ದರಾಮನಹುಂಡಿಯಲ್ಲಿ ಸೋಮಣ್ಣ ಪ್ರಚಾರ ನಡೆಸುತ್ತಿದ್ದರು. ಏಕಾಏಕಿ ಸಿದ್ದರಾಮಯ್ಯಗೆ ಜೈ, ಸೋಮಣ್ಣಗೆ ಧಿಕ್ಕಾರ ಎಂದು ಕೂಗಿದ್ರು. ಕಲ್ಲು ತೂರಾಟ ನಡೆಸಿ ಕಾರುಗಳನ್ನು ಜಖಂಗೊಳಿಸಿದ್ರು. ದೊಣ್ಣೆಯಿಂದ ಹಲ್ಲೆ ಮಾಡಿದ್ರು. ಬಿಜೆಪಿ ಕಾರ್ಯಕರ್ತ ನಾಗೇಶ್ ಗೆ ಕಾಲು ಮತ್ತು ಕೈಗೆ ಪೆಟ್ಟಾಗಿದೆ. ಘಟನೆ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದ್ರು. ಸಿದ್ದರಾಮಯ್ಯ ಆಪ್ತ ಕುಮಾರ್ ಪೊಲೀಸರಿಗೆ ಕರೆ ಮಾಡಿ ಪ್ರಭಾವ ಬಳಸಿ ಮೂವರನ್ನೂ ಬಿಡುಗಡೆಗೊಳಿಸಿದ್ದಾರೆ. ಸಿದ್ದರಾಮಯ್ಯ ಹತಾಶೆಗೊಂಡಿದ್ದಾರೆ.ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗೆ ದೂರು ನೀಡುತ್ತೇವೆ. ಬಿಜೆಪಿ ಕಾರ್ಯಕರ್ತ ಹಾಗೂ ಘಟನೆ ಸ್ಥಳದಲ್ಲಿದ್ದ ರವಿಶಂಕರ್ ಅವರು ಗುರುವಾರ ರಾತ್ರಿ ಹೇಳಿದ್ದಾರೆ.

Exit mobile version