ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಗಣಿ ನಗರಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜ್ಯದ ಏಕೈಕ ಮಂಗಳಮುಖಿ ಅಭ್ಯರ್ಥಿ ಟಿ. ರಾಮಕ್ಕ ಗುರುವಾರ ಮತ ಚಲಾಯಿಸಿದರು.
ಚುನಾವಣೆಗೆ ಸ್ಪರ್ಧಿಸಿರುವ ರಾಜ್ಯದ ಏಕೈಕ ಮಂಗಳಮುಖಿ ಅಭ್ಯರ್ಥಿಯಾಗಿರುವ ಟಿ.ರಾಮಕ್ಕ ಕಂಪ್ಲಿ ಕ್ಷೇತ್ರ ವ್ಯಾಪ್ತಿಯ ಬಾದನಟ್ಟಿ ಗ್ರಾಮದಲ್ಲಿ ತಮ್ಮ ಮತ ಚಲಾವಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಬಡವರ ಸೇವೆ ಮಾಡಲು ಸ್ಪರ್ಧಿಸಿರುವೆ. ಜನರು ನನಗೆ ಮತ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.