Site icon Vistara News

Karnataka Election 2023: ಗಡಿ ಪ್ರದೇಶಗಳಲ್ಲಿ ಡ್ರಗ್ ದಂಧೆಕೋರರ ಮೇಲೆ ತೀವ್ರ ನಿಗಾ: ಜಿಲ್ಲಾಧಿಕಾರಿ ಸೂಚನೆ

DC Prabhulinga Kavalikatti karwar

#image_title

ಕಾರವಾರ: “ಕರ್ನಾಟಕ ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ (Karnataka Election 2023) ಇರುವುದರಿಂದ ಅಂತಾರಾಜ್ಯ ಗಡಿ ಪ್ರದೇಶಗಳಲ್ಲಿ ಡ್ರಗ್ ದಂಧೆಕೋರರ ಮೇಲೆ ತೀವ್ರ ನಿಗಾ ಇರಿಸಲು ಕ್ರಮವಹಿಸಬೇಕು” ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಅಂತಾರಾಜ್ಯ ಗಡಿ ಪ್ರದೇಶಗಳ ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ಒದಗಿಸಲು ಹಮ್ಮಿಕೊಂಡಿದ್ದ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, “ಬಾರ್ಡರ್ ಚೆಕ್ ಪೋಸ್ಟ್‌ಗಳಲ್ಲಿ ಮದ್ಯ, ನಗದು, ಬೆಲೆಬಾಳುವ ಲೋಹಗಳು, ಡ್ರಗ್‌ಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಸಾಗಿಸುವ ವಾಹನಗಳ ಮೇಲೆ ಹೆಚ್ಚು ನಿಗಾ ವಹಿಸಬೇಕು” ಎಂದು ಅಂತಾರಾಜ್ಯ ಗಡಿ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Swiss Open: ಸ್ವಿಸ್‌ ಓಪನ್ ಬ್ಯಾಡ್ಮಿಂಟನ್; ಪ್ರಶಸ್ತಿ ಉಳಿಸಿಕೊಳ್ಳಲಿದ್ದಾರಾ ಪಿ.ವಿ. ಸಿಂಧು?

“ಕರ್ನಾಟಕದ ಮದ್ಯದ ದರಕ್ಕಿಂತ ಗೋವಾ ರಾಜ್ಯದಲ್ಲಿ ಮದ್ಯದ ದರ ಅಗ್ಗವಾಗಿದೆ‌. ಈ ಕಾರಣದಿಂದ ಮದ್ಯ ಮಾರಾಟಗಾರರು ಗೋವಾದಿಂದ ಕರ್ನಾಟಕಕ್ಕೆ ಮದ್ಯವನ್ನು ಸಾಗಾಟ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಗಡಿಯಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಿದರು. ಈಗಾಗಲೇ ಕಾರವಾರ ತಾಲೂಕಿನ ಮಾಜಾಳಿ ಚೆಕ್‌ಪೋಸ್ಟ್ ಮತ್ತು ಜೋಯಿಡಾ ತಾಲೂಕಿನ ಅನ್‌ಮೋಡ್ ಚೆಕ್‌ಪೋಸ್ಟ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ- 1 ಜಯಲಕ್ಷ್ಮಮ್ಮ, ಅಬಕಾರಿ ನಿರೀಕ್ಷಕರು ಜಗದೀಶ್ ಕುಲಕರ್ಣಿ ಉಪಸ್ಥಿತರಿದ್ದರು.

ಇದನ್ನೂ ಓದಿ: BJP Important Party: ಜಗತ್ತಿನಲ್ಲೇ ಬಿಜೆಪಿ ಪ್ರಮುಖ ಪಕ್ಷ, 2024ರಲ್ಲೂ ಗೆಲುವು; ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ

Exit mobile version