ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka election) ಹಿನ್ನೆಲೆಯಲ್ಲಿ ಥೀಮ್ ಬೇಸ್ಡ್ (ಉತ್ತಮ ಧ್ಯೇಯಾಧಾರಿತ) ಮತಗಟ್ಟೆಗಳ ನಿಯೋಜನೆ ಮಾಡಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ 4 ಕಡೆಗಳಲ್ಲಿ ಮತಗಟ್ಟೆಗಳನ್ನು ಮಾಡಲಾಗಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಮತಗಟ್ಟೆಗಳಲ್ಲಿ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಮಾಡಲಾಗಿದೆ.
ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ (ಹಸಿರು ಬಣ್ಣದ) ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆ, ಮಾದರಿ ಮತಗಟ್ಟೆಗಳಿವೆ.
ಇದನ್ನೂ ಓದಿ: Karnataka Election 2023: ಮತದಾನ ಜಾಗೃತಿಗೆ ನಾನಾ ಪ್ರಯತ್ನ; ಗಮನ ಸೆಳೆಯುತ್ತಿರುವ ಚುನಾವಣಾ ಆಯೋಗ